ದ.ಕನ್ನಡ | ಭಾರೀ ಮಳೆಗೆ ಗುಡ್ಡ, ಮನೆ ಕುಸಿತ – ಬಾಲಕಿ ಸೇರಿ ಇಬ್ಬರು ಸಾವು

Public TV
2 Min Read
mangaluru Rain Death

– ಅವಶೇಷಗಳ ಅಡಿಯಲ್ಲಿ ಸಿಲುಕಿದ ತಾಯಿ-ಮಗುವಿಗೆ ಆಕ್ಸಿಜನ್ ವ್ಯವಸ್ಥೆ
– ಪ್ರಜ್ಞಾಹೀನ ಸ್ಥಿತಿಯಲ್ಲಿರುವ ತಾಯಿ ತೋಳನ್ನು ಬಿಗಿದಪ್ಪಿರುವ ಕಂದಮ್ಮ

ಮಗಳೂರು: ಗುಡ್ಡ, ಮನೆ ಕುಸಿದ ಪರಿಣಾಮ ಬಾಲಕಿ, ಮಹಿಳೆ ಸಾವನ್ನಪ್ಪಿರುವ ಮನಕಲುಕುವ ಘಟನೆ ಮಂಗಳೂರಿನ ದೇರಳ ಕಟ್ಟೆ ಸಮೀಪದಲ್ಲಿ ನಡೆದಿದೆ.

ನಯೀಮ (10), ಪ್ರೇಮ ಪೂಜಾರಿ (60) ಮೃತರು. ರಾತ್ರಿಯಿಡೀ ಸುರಿದ ಭಾರೀ ಮಳೆ ಪರಿಣಾಮ ದೇರಳಕಟ್ಟೆ ಸಮೀಪದ ಕಾನಕೆರೆ ಹಾಗೂ ಮೊಂಟೆಪದವು ಕೋಡಿ ಎಂಬಲ್ಲಿ ಈ ಅವಘಡ ಸಂಭವಿಸಿದೆ. ಒಂದು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೊಂದು ಮಗು ಪ್ರಜ್ಞಾನಹೀನ ಸ್ಥಿತಿಯಲ್ಲಿರುವ ತನ್ನ ತಾಯಿಯ ತೋಳನ್ನು ಬಿಗಿದಪ್ಪಿಕೊಂಡಿದೆ. ಇದರೊಂದಿಗೆ ಬದುಕಲು ಹೆಣಗಾಡುತ್ತಿದೆ. ಈ ಮನಕಲುಕುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ.ಇದನ್ನೂ ಓದಿ: ಅಬ್ದುಲ್‌ ರಹಿಮಾನ್‌ ಹತ್ಯೆ ಕೇಸ್‌ | ಮತ್ತಿಬ್ಬರು ಆರೋಪಿಗಳು ಅರೆಸ್ಟ್‌ – ಹತ್ಯೆಗೆ ಕಾರಣವೇ ಇನ್ನೂ ಸಸ್ಪೆನ್ಸ್!‌

ಏನಿದು ಘಟನೆ?
ಮೊಂಟೆಪದವು ಕೋಡಿಯಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಕಾಂತಪ್ಪ ಪೂಜಾರಿ ಎಂಬುವವರ ಮನೆ ಮೇಲೆ ಬಿದ್ದಿದೆ. ಈ ವೇಳೆ ಮನೆಯಲ್ಲಿದ್ದ ಒಂದೇ ಕುಟುಂಬದ ಐವರು ಸಿಲುಕಿಕೊಂಡಿದ್ದು, ಈ ಪೈಕಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. ಸದ್ಯ ಕಾಂತಪ್ಪ ಪೂಜಾರಿ (65) ಅವರನ್ನು ರಕ್ಷಣೆ ಮಾಡಲಾಗಿದ್ದು, ಅಶ್ವಿನಿ (31), ಆರ್ಯನ್ (2.5) ಆರುಶ್ (1) ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರಿದಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿದ ತಾಯಿ-ಮಕ್ಕಳಿಗೆ ಆಕ್ಸಿಜನ್ ವ್ಯವಸ್ಥೆ ಕಲ್ಪಿಸಲಾಗಿದೆ. ಒಂದು ತಾಯಿ ಮತ್ತು ಮಗು ಜೀವಂತವಾಗಿದ್ದು, ಮತ್ತೊಂದು ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿದೆ.

ಕಾಂಪೌಂಡ್ ಕುಸಿದು ಬಾಲಕಿ ಸಾವು:
ಧಾರಾಕಾರ ಮಳೆಯಿಂದಾಗಿ ಕಾನಕೆರೆ ಎಂಬಲ್ಲಿ ನೌಶಾದ್ ಎಂಬುವವರ ಮನೆಯ ಹಿಂಬದಿಯ ಕಾಂಪೌಂಡ್ ಕುಸಿದಿದೆ. ಮನೆ ಮೇಲೆ ಮಣ್ಣು ಬಿದ್ದ ಪರಿಣಾಮ ಬಾಲಕಿ ಮೇಲೆ ಕಿಟಕಿ ಬಿದ್ದಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಪಂಜಾಬ್‌ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – ಐವರು ಸಾವು, 25 ಮಂದಿಗೆ ಗಾಯ

Share This Article