ಬೆಂಗಳೂರು: ಫೆಂಗಲ್ ಚಂಡಮಾರುತದಿಂದ ಕರ್ನಾಟಕದ ದಕ್ಷಿಣ ಭಾಗದಲ್ಲಿರುವ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದ ವಿದ್ಯಾರ್ಥಿಗಳಿಗೆ ಶಾಲೆ, ಕಾಲೇಜುಗಳಿಗೆ ತೆರಳಲು ಕಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರಮ ಉಡುಪಿ, ಮೈಸೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಂಗಳವಾರ ಶಾಲೆ, ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿ ಆದೇಶ ಪ್ರಕಟಿಸಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಪರೀಕ್ಷೆ ನಡೆಯುತ್ತಿರುವ ಪದವಿ ಕಾಲೇಜು ಹೊರತು ಪಡಿಸಿ ಉಳಿದ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರಿನ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ಇರುವುದರಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಯಾವ ಜಿಲ್ಲೆಗಳಿಗೆ ಏನು ಅಲರ್ಟ್?
ರೆಡ್ ಅಲರ್ಟ್ – ಕೊಡಗು
ಆರೇಂಜ್ ಅಲರ್ಟ್ – ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ರಾಮನಗರ
ಯೆಲ್ಲೋ ಅಲರ್ಟ್ – ಮಂಡ್ಯ, ಹಾಸನ, ಬೆಂಗಳೂರು.