ಬೆಂಗಳೂರು: ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಯಾದ್ಯಂತ ಇಂದು (ಮೇ 19) ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಇಂದು ಒಂದು ದಿನ ರಜೆ ನೀಡುವುದಾಗಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಜನಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಶಾಕ್ – 1,000 ರೂ. ದಾಟಿದ LPG ಸಿಲಿಂಡರ್ ದರ
Advertisement
Advertisement
ಮೈಸೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಹಿನ್ನೆಲೆ 1ರಿಂದ 10ನೇ ತರಗತಿಯವರಗೆ ಇಂದು ಒಂದು ದಿನದ ಮಟ್ಟಿಗೆ ಷರತ್ತು ಬದ್ಧ ರಜೆಯನ್ನು ಮೈಸೂರಿನ ಡಿಡಿಪಿಐ ರಾಮಚಂದ್ರರಾಜೇ ಅರಸ್ ಅವರು ಘೋಷಿಸಿದ್ದಾರೆ. ಆದರೆ ಮುಂದಿನ ರಜಾದಿನಗಳಲ್ಲಿ ಒಂದು ದಿನ ಕಾರ್ಯ ನಿರ್ವಹಿಸಲು ಸೂಚಸಿದ್ದಾರೆ. ಇದನ್ನೂ ಓದಿ: ಅಸ್ಸಾಂನಲ್ಲಿ ಭೀಕರ ಪ್ರವಾಹ – 9 ಮಂದಿ ಸಾವು, ಸಂಕಷ್ಟದಲ್ಲಿ ಲಕ್ಷಾಂತರ ಜನ
Advertisement
ಶಿವಮೊಗ್ಗದಲ್ಲೂ ವರುಣನ ಅಬ್ಬರ ಜೋರಾಗಿದ್ದು, ತಡರಾತ್ರಿಯಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಹೊಸನಗರ ತಾಲೂಕಿನಲ್ಲಿ ಅತಿಹೆಚ್ಚು ಮಳೆಯಾಗುತ್ತಿದ್ದು, ಇನ್ನೆರಡು ದಿನಗಳ ಕಾಲ ಹೀಗೆ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಈ ಹಿನ್ನೆಲೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಜಿಲ್ಲೆಯಾದ್ಯಂತ ಶಾಲೆಗಳಿಗೆ ಇಂದು ರಜೆ ಘೋಷಿಸಿದ್ದಾರೆ.