ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ನಾಳೆ (ಜು.23) ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ (ಜುಲೈ 23) ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಿರುವ ಹಿನ್ನೆಲೆ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ಈ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಕಾರವಾರದಲ್ಲಿ ಭಾರತೀಯರೇ ನಿರ್ಮಿಸಿದ ಯುದ್ಧನೌಕೆ ಲೋಕಾರ್ಪಣೆ – ವಿಶೇಷತೆ ಏನು?
