ನವದೆಹಲಿ: ಮುಂದಿನ 30-40 ವರ್ಷಗಳ ಕಾಲ ಜನರಿಗೆ ಸೇವೆ ಸಲ್ಲಿಸಲು ಬದುಕುವ ಆಶಯ ಹೊಂದಿದ್ದೇನೆ ಎಂದು ಟಿಬೆಟಿಯನ್ ಆಧ್ಯಾತ್ಮಿಕ ನಾಯಕ (Tibetan spiritual leader) ದಲೈ ಲಾಮಾ (Dalai Lama) ಹೇಳಿದ್ದಾರೆ. ಅವರ 90ನೇ ಜನ್ಮದಿನವಾದ ಇಂದು ಉತ್ತರಾಧಿಕಾರಿಯ ಘೋಷಣೆಯ ಕುರಿತಾದ ವದಂತಿಗಳ ನಡುವೆ ಈ ಹೇಳಿಕೆ ನೀಡುವ ಮೂಲಕ ಎಲ್ಲಾ ಊಹಾಪೋಹಗಳಿಗೆ ಅಂತ್ಯ ಹಾಡಿದ್ದಾರೆ.
ಮೆಕ್ಲಿಯೋಡ್ಗಂಜ್‌ನ ತ್ಸುಗ್ಲಾಗ್‌ಖಾಂಗ್‌ನ ಮುಖ್ಯ ದಲೈ ಲಾಮಾ ದೇವಸ್ಥಾನದಲ್ಲಿ ತಮ್ಮ 90ನೇ ಹುಟ್ಟುಹಬ್ಬಕ್ಕೂ ಮುನ್ನ ನಡೆದ ದೀರ್ಘಾಯುಷ್ಯದ ಪ್ರಾರ್ಥನಾ ಸಮಾರಂಭದಲ್ಲಿ ದಲೈ ಲಾಮಾ ಟೆನ್ಜಿನ್ ಗ್ಯಾಟ್ಸೊ ಅವರು ಮಾತನಾಡಿದರು. ಅವಲೋಕಿತೇಶ್ವರನ ಆಶೀರ್ವಾದ ತಮ್ಮೊಂದಿಗಿದೆ ಎಂಬ ಸ್ಪಷ್ಟ ಚಿಹ್ನೆಗಳು ಸಿಗುತ್ತಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮರಾಠಿ ಕಲಿಯಲ್ಲ ಎಂದಿದ್ದಕ್ಕೆ ಉದ್ಯಮಿ ಕಚೇರಿಯೇ ಧ್ವಂಸ
ನಾನು ಇಲ್ಲಿಯವರೆಗೆ ನನ್ನ ಕೈಲಾದಷ್ಟು ಜನರ ಸೇವೆ ಮಾಡಲು ಪ್ರಯತ್ನಿಸಿದ್ದೇನೆ. ನಾನು ಇನ್ನೂ 30-40 ವರ್ಷಗಳ ಕಾಲ ಬದುಕುತ್ತೇನೆ ಎಂದು ಭಾವಿಸುತ್ತೇನೆ. ಇಲ್ಲಿಯವರೆಗೆ ನಿಮ್ಮ ಪ್ರಾರ್ಥನೆಗಳು ಫಲ ನೀಡಿವೆ. ನಾವು ನಮ್ಮ ದೇಶವನ್ನು ಕಳೆದುಕೊಂಡು ಭಾರತದಲ್ಲಿ ದೇಶಭ್ರಷ್ಟರಾಗಿ ವಾಸಿಸುತ್ತಿದ್ದರೂ, ಇಲ್ಲಿ ನಾನು ಬಹಳಷ್ಟು ಜನರಿಗೆ ಸೇವೆ ಮಾಡಲು ಸಾಧ್ಯವಾಗಿದೆ. ನಾನು ಇನ್ನಷ್ಟು ಜನರ ಸೇವೆ ಮಾಡಲು ಬಯಸುತ್ತಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಹೇಳಿಕೆ ವಿವಾದ | ಕೊಡವ ಸಮುದಾಯ ಎಲ್ಲರನ್ನೂ ಬೆಂಬಲಿಸಿದೆ: ನಟಿ ಪ್ರೇಮ
ದಲೈ ಲಾಮಾ ಅವರ 90ನೇ ಹುಟ್ಟುಹಬ್ಬವನ್ನು ಮೆಕ್ಲಿಯೋಡ್ಗಂಜ್‌ನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಆಚರಿಸಲಾಗುತ್ತಿದೆ. ಇಂದು ಕೇಂದ್ರ ಸಚಿವ ಕಿರಣ್ ರಿಜಿಜು, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು, ಹಾಲಿವುಡ್ ನಟ ರಿಚರ್ಡ್ ಗೆರೆ ಸೇರಿ ಇತರರು ಮುಖ್ಯ ಟಿಬೆಟಿಯನ್ ದೇವಾಲಯ ಮತ್ತು ದಲೈ ಲಾಮಾ ಅವರ ನಿವಾಸದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ʻಆಪರೇಷನ್ ಸಿಂಧೂರʼ ಯಶಸ್ಸಿನ ಬೆನ್ನಲ್ಲೇ 1 ಲಕ್ಷ ಕೋಟಿ ಮೊತ್ತದ ರಕ್ಷಣಾ ಯೋಜನೆಗಳಿಗೆ ಮೋದಿ ಸರ್ಕಾರ ಅಸ್ತು
ದಲೈ ಲಾಮಾ ಅವರ ದೀರ್ಘಾಯುಷ್ಯ ಮತ್ತು ಆರೋಗ್ಯಕ್ಕಾಗಿ ಬೆಳಗ್ಗೆ ಬೌದ್ಧ ಮಠದಲ್ಲಿ ಪ್ರಾರ್ಥನಾ ಸಭೆಯನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ 8:00ಗಂಟೆಗೆ ಪ್ರಾರಂಭವಾದ ಈ ಪ್ರಾರ್ಥನಾ ಸಭೆಯಲ್ಲಿ ದಲೈ ಲಾಮಾ ಸ್ವತಃ ಹಾಜರಿದ್ದರು. ಭಾನುವಾರ ದಲೈ ಲಾಮಾ ಅವರು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಲಿದ್ದಾರೆ. ಈ ವೇಳೆ ತಮ್ಮ ಅನುಯಾಯಿಗಳನ್ನು ಸಹ ಅವರು ಆಶೀರ್ವದಿಸಲಿದ್ದಾರೆ. ಇದನ್ನೂ ಓದಿ: 20 ವರ್ಷಗಳ ಬಳಿಕ ಮತ್ತೆ ಒಂದಾದ ಉದ್ಧವ್-ರಾಜ್ ಠಾಕ್ರೆ
ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು (Kiran Rijiju), ದಲೈ ಲಾಮಾ ಅವರ 90ನೇ ಹುಟ್ಟುಹಬ್ಬದ ಆಚರಣೆಯಲ್ಲಿ ಭಾಗವಹಿಸಿದ್ದಕ್ಕೆ ಸಂತೋಷ ವ್ಯಕ್ತಪಡಿಸಿದರು. ಅವರು ದಲೈ ಲಾಮಾ ಅವರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಿ, ದಲೈ ಲಾಮಾ ಅವರ ಹುಟ್ಟುಹಬ್ಬದ ಆಚರಣೆಯನ್ನು ಭಾನುವಾರ ಆಚರಿಸಲಾಗುವುದು ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದ್ದಾರೆ.