ತುಮಕೂರು: ದಲಿತರೆಲ್ಲಾ ಒಂದಾಗಿದ್ದೇವೆ. ನಮ್ಮಲ್ಲಿ ಒಡಕಿಲ್ಲ ಎಂದು ದಲಿತ ಮುಖಂಡರೊಬ್ಬರು ರಾಹುಲ್ ಗಾಂಧಿಗೆ ರಕ್ತದಲ್ಲಿ ಪತ್ರ ಬರೆದ ಘಟನೆ ತುಮಕೂರಿನಲ್ಲಿ ನಡೆದಿದೆ.
ಕುಣಿಗಲ್ ದಲಿತ ಮುಖಂಡ ನಗುತಾ ರಂಗನಾಥ್ ರಾಹುಲ್ ಗಾಂಧಿಗೆ ರಕ್ತದಲ್ಲಿ ಪತ್ರ ಬರೆದಿದ್ದು, ಡಿಕೆ ಬ್ರದರ್ಸ್ ದಲಿತರನ್ನು ಕುಣಿಗಲ್ ನಲ್ಲಿ ಕಡೆಗಣಿಸುತ್ತಿದ್ದಾರೆ ಎನ್ನುವ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ.
ದಲಿತರೆಲ್ಲಾ ಒಂದಾಗಿದ್ದೇವೆ. ನಮ್ಮಲ್ಲಿ ಒಡಕಿಲ್ಲ ಹಾಗೂ ಡಿ.ಕೆ ಬ್ರದರ್ಸ್ ನಮ್ಮನ್ನು ಕಡೆಗಣಿಸಿಲ್ಲ. ನಮ್ಮ ರಕ್ತದಲ್ಲಿ ಬರೆದು ನಿಮಗೆ ಕಳುಹಿಸುತ್ತಿದ್ದೇವೆ ಎಂದು ದಲಿತ ಮುಖಂಡ ರಂಗನಾಥ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಡಿಕೆ ಬ್ರದರ್ಸ್ ದಲಿತರನ್ನು ಕಡೆಗಣಿಸಿದ್ದಾರೆ ಎಂದು ಮಾಜಿ ಶಾಸಕ ರಾಮಸ್ವಾಮಿ ಗೌಡ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ದಲಿತ ಮುಖಂಡ ರಕ್ತದಲ್ಲಿ ಪತ್ರ ಬರೆದಿದ್ದಾರೆ.