ನಿಷೇಧಾಜ್ಞೆ ನಡುವೆಯೂ ಮಹಿಷ ದಸರಾ ಆಚರಣೆ – ನೂರಾರು ದಲಿತ ಮುಖಂಡರು ವಶಕ್ಕೆ

Public TV
2 Min Read
Dalit Leaders 2

ಚಿಕ್ಕಮಗಳೂರು: ಜಿಲ್ಲಾಡಳಿತದ ನಿಷೇಧಾಜ್ಞೆ ಹೊರಡಿಸಿದ ನಡುವೆಯೂ ಮಹಿಷ ದಸರಾ (Mahisha Dasara) ಆಚರಣೆಗೆ ಮುಂದಾಗಿದ್ದ ದಲಿತ ಮುಖಂಡರು ಹಾಗೂ ಪ್ರಗತಿಪರ ಸಂಘಟನೆಯ ನೂರಾರು ಕಾರ್ಯಕರ್ತರನ್ನ ವಶಕ್ಕೆ ಪಡೆದಿರುವ ಘಟನೆ ನಗರದಲ್ಲಿ ನಡೆದಿದೆ.

ಇಲ್ಲಿನ ದಲಿತ ಸಂಘಟನೆಯ ಮುಖಂಡರು (Dalit Leaders) ನಗರದ ಹನುಮಂತಪ್ಪ ವೃತ್ತದಿಂದ ಮಹಿಷ ದಸರಾ ಮೆರವಣಿಗೆಗೆ ಮುಂದಾಗಿದ್ದರು.‌ ಮಹಿಷನ ಮೆರವಣಿಗೆಗೆ ಸಿದ್ಧತೆ ನಡೆಯುತ್ತಿರುವುದನ್ನು ತಿಳಿದಿದ್ದ ಪೊಲೀಸರು (Police) ಹನುಮಂತಪ್ಪ ಸರ್ಕಲ್ ನಲ್ಲಿ ಬಿಗಿ ಭದ್ರತೆ ಒದಗಿಸಿದ್ದರು. ಇದನ್ನೂ ಓದಿ: ಗೋ ಬ್ಯಾಕ್ ರಿಜ್ವಾನ್; ಬೆಂಗ್ಳೂರಲ್ಲಿ ಪಾಕ್ ಕ್ರಿಕೆಟಿಗರ ವಿರುದ್ಧ ಹಿಂದೂ ಕಾರ್ಯಕರ್ತರ ಪ್ರತಿಭಟನೆ

Dalit Leaders

ದಲಿತಪರ ಸಂಘಟನೆಗಳ ಕಾರ್ಯಕರ್ತರು ಇನ್ನೇನು ಮೆರವಣಿಗೆ ಆರಂಭಿಸಬೇಕು ಎನ್ನುವಷ್ಟರಲ್ಲಿಯೇ ಸುತ್ತುವರಿದ ಪೊಲೀಸರು ಮೆರವಣಿಗೆಗೆ ಸಿದ್ಧರಾಗಿದ್ದ ದಲಿತಪರ ಸಂಘಟನೆಗಳ ಮುಖಂಡರನ್ನ ವಶಕ್ಕೆ ಪಡೆದಿದ್ದಾರೆ. ಮಧ್ಯಾಹ್ನ 3 ಗಂಟೆ ವೇಳೆಗೆ ವಶಕ್ಕೆ ಪಡೆದಿದ್ದ ಮುಖಂಡರನ್ನು ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಇರಿಸಿಕೊಂಡು ರಾತ್ರಿ 8ಗಂಟೆ ನಂತರ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಎಂಗೆ ಕ್ರಿಕೆಟ್‌ ಕ್ರೇಜ್‌ – ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ vs ಪಾಕಿಸ್ತಾನ ಮ್ಯಾಚ್‌ ವೀಕ್ಷಿಸಿದ ಸಿದ್ದರಾಮಯ್ಯ

Dalis Leader

ಮೆರವಣಿಗೆ ವೇಳೆ ಪೊಲೀಸರೊಂದಿಗೆ ವಾಗ್ವಾದ ನಡೆದಿದ್ದು, ತಳ್ಳಾಟ ನೂಕಾಟವೂ ಊಂಟಾಗಿದೆ. ಅಲ್ಲದೇ ಪೊಲೀಸರು ಹಾಗೂ ಜಿಲ್ಲಾಡಳಿತದ ನಡೆಗೆ ದಲಿತ ಆಕ್ರೋಶ ವ್ಯತಕ್ತಪಡಿಸಿದ್ದಾರೆ.

ಜಿಲ್ಲಾಡಳಿತ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ, ಆದ್ದರಿಂದಲೇ ಮಹಿಷ ದಸರಾ ಆಚರಣೆಗೆ ಅನುಮತಿ ನೀಡಿಲ್ಲ ಜೊತೆಗೆ ಈ ಅವಧಿಯಲ್ಲಿಯೇ ನಿಷೇಧಾಜ್ಞೆ ಜಾರಿಗೊಳಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: BJP-JDS ಮೈತ್ರಿಗೆ ಕೇರಳ ನಾಯಕರು ಒಪ್ಪಿದ್ದಾರೆ ಎಂದು ನಾನು ಹೇಳಿಲ್ಲ: ಹೆಚ್.ಡಿ ದೇವೇಗೌಡ

ಮಹಿಷ ದಸರಾ ಕಾರ್ಯಕ್ರಮಕ್ಕೆ ಪ್ರಗತಿಪರ ಚಿಂತಕ ಪ್ರೊ.ಭಗವಾನ್ ಆಗಮಿಸಲು ಅವಕಾಶ ನೀಡದಂತೆ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಜೊತೆಗೆ ಜಿಲ್ಲಾಧಿಕಾರಿಗೆ ಮನವಿಯನ್ನೂ ಸಲ್ಲಿಸಿದ್ದವು. ಆದರೆ, ಶುಕ್ರವಾರ ಚಿಕ್ಕಮಗಳೂರಿಗೆ ಭಗವಾನ್ ಆಗಮಿಸಿರಲಿಲ್ಲ. ಹೀಗಾಗಿ ನಿಷೇಧಾಜ್ಞೆ ಇದ್ದರೂ ಮೆರವಣಿಗೆ ನಡೆಸಿದ ಹಿನ್ನೆಲೆಯಲ್ಲಿ ಕೆಲ ಮುಖಂಡರನ್ನು ವಶಕ್ಕೆ ಪಡೆಯಲಾಗಿತ್ತು.

Web Stories

Share This Article