ಲಕ್ನೋ: ದಲಿತ ವ್ಯಕ್ತಿಗೆ ಗ್ರಾಮದ ಮುಖ್ಯಸ್ಥ ಚಪ್ಪಲಿಯಿಂದ ಥಳಿಸಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ನಡೆದಿದೆ. ಮುಖ್ಯಸ್ಥ ವ್ಯಕ್ತಿಗೆ ಥಳಿಸುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಲಾರಂಭಿಸಿದಂತೆ ಪೊಲೀಸರು ಎಚ್ಚೆತ್ತುಕೊಂಡು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದಲಿತ ವ್ಯಕ್ತಿ ಕುಮಾರ್ ತಾಜ್‌ಪುರದ ಗ್ರಾಮದ ಮುಖ್ಯಸ್ಥ ಮೋಹನ್ ಗುರ್ಜರ್ ಅವರನ್ನು ಟೀಕಿಸಿದ ವಾಟ್ಸಪ್ ಸಂದೇಶವನ್ನು ಹಂಚಿಕೊಂಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಮೋಹನ್ ಚಪ್ಪಲಿಯಿಂದ ಥಳಿಸಿದ್ದು, ರೆಟಾ ನಾಗ್ಲಾ ಗ್ರಾಮದ ಮಾಜಿ ಮುಖಂಡ ಗಜೆ ಸಿಂಗ್ ಕೂಡಾ ಇದಕ್ಕೆ ಸಾಥ್ ನೀಡಿದ್ದಾನೆ. ಇದರೊಂದಿಗೆ ಕುಮಾರ್‌ಗೆ ಕೊಲೆ ಬೆದರಿಕೆ ಹಾಕಿರುವುದಾಗಿಯೂ ಪೊಲೀಸರು ತಿಳಿಸಿದ್ದಾರೆ. ಇದೀಗ ಇಬ್ಬರ ಮೇಲೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅರ್ಪಿತ್ ವಿಜಯವರ್ಗಿಯ ಹೇಳಿದ್ದಾರೆ. ಇದನ್ನೂ ಓದಿ: ಗೋಕಾಕ್‍ನಲ್ಲಿ ಸಂಗೊಳ್ಳಿ ರಾಯಣ್ಣ ಫೋಟೋ ಹರಿದು ಹಾಕಿದ್ದ ಆರೋಪಿ ಅರೆಸ್ಟ್
Advertisement
Advertisement
ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ಭೀಮ್ ಆರ್ಮಿ ಕಾರ್ಯಕರ್ತರು ಹಾಗೂ ದಲಿತ ಸಮುದಾಯದ ಸದಸ್ಯರು ಘಟನೆಯ ವಿರುದ್ಧ ಛಾಪರ್ ಪೊಲೀಸ್ ಠಾಣೆಯ ಹೊರಗೆ ಧರಣಿ ನಡೆಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈಗಾಗಲೇ ಪೊಲೀಸರು ಗ್ರಾಮದ ಮುಖಂಡ ಶಕ್ತಿ ಮೋಹನ್‌ನನ್ನು ಬಂಧಿಸಿದ್ದು, ಇನ್ನೊಬ್ಬ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪಂಡಿತ್ ಕುಟುಂಬದ ಭೇಟಿ ತಡೆಯಲು ನನ್ನನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ: ಮುಫ್ತಿ
Advertisement
ಘಟನಾ ವ್ಯಾಪ್ತಿಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.