ಲಕ್ನೋ: ಉತ್ತರ ಪ್ರದೇಶದ (uttar pradesh) ಲಖಿಂಪುರ್ ಖೇರಿ (Lakhimpur Kheri) ಜಿಲ್ಲೆಯಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ದಲಿತ ಸಹೋದರಿಯರ ಮೃತದೇಹ ಪತ್ತೆಯಾಗಿದೆ.
ಅತ್ಯಾಚಾರ, ಕೊಲೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಮಂಗಳಮುಖಿಯನ್ನು ಪ್ರೀತಿಸಿ, ಪತ್ನಿಯ ಸಮ್ಮುಖದಲ್ಲಿಯೇ ಮದ್ವೆಯಾದ ವಿವಾಹಿತ
Advertisement
Advertisement
ಬಂಧಿತರಲ್ಲಿ ಒಬ್ಬ ಆರೋಪಿಯು ಹೆಣ್ಣುಮಕ್ಕಳನ್ನು ಮೋಟಾರು ಬೈಕ್‌ನಲ್ಲಿ ಬಲವಂತವಾಗಿ ಕರೆದೊಯ್ದಿದ್ದಾನೆ. ತಡೆಯಲು ಮುಂದಾದಾಗ ಆರೋಪಿಗಳು ನನ್ನ ಮೇಲೆ ಹಲ್ಲೆ ನಡೆಸಿದ್ದ. ನಂತರ ನಾವು ನಮ್ಮ ಮಕ್ಕಳನ್ನು ಹುಡುಕುತ್ತಿದ್ದಾಗ, ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ನನ್ನ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗಿ ನಂತರ ಕೊಲೆ ಮಾಡಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ.
Advertisement
ಲಕ್ನೋ ರೇಂಜ್‌ನ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಲಕ್ಷ್ಮಿ ಸಿಂಗ್, ಹುಡುಗಿಯರು ತಮ್ಮ ದುಪಟ್ಟಾಗಳಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಯಾವುದೇ ಗೋಚರ ಗಾಯಗಳಿಲ್ಲ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಬೆಟ್ಟ ಕುರುಬ ಜನಾಂಗವನ್ನು ಎಸ್‌ಟಿಗೆ ಸೇರಿಸಿದ ಕೇಂದ್ರ – ಜೋಶಿ ಸಂತಸ
Advertisement
ಲಖಿಂಪುರ ಖೇರಿಯಲ್ಲಿ ನಡೆದ ಘಟನೆ ರಾಜಕೀಯ ಬಿರುಗಾಳಿ ಎಬ್ಬಿಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವನ್ನು ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿವೆ.