Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Court

ಐಐಟಿ ಪ್ರವೇಶಾತಿಗೆ ಶುಲ್ಕವಿಲ್ಲದೇ ಪರದಾಡಿದ್ದ ದಲಿತ ಯುವಕನಿಗೆ ‘ಸುಪ್ರೀಂ’ನಲ್ಲಿ ಸಿಕ್ತು ನ್ಯಾಯ

Public TV
Last updated: September 30, 2024 9:44 pm
Public TV
Share
2 Min Read
new delhi Athul dalit student
SHARE

– ಹುಡುಗನನ್ನು ಬಿ.ಟೆಕ್ ಕೋರ್ಸ್‌ಗೆ ಸೇರಿಸಿಕೊಳ್ಳಿ: ಐಐಟಿ ಧನ್‌ಬಾದ್‌ಗೆ ಕೋರ್ಟ್ ನಿರ್ದೇಶನ
– ದಲಿತ ಯುವಕನಿಗೆ ‘ಆಲ್ ದಿ ಬೆಸ್ಟ್’ ಎಂದ ಕೋರ್ಟ್

ನವದೆಹಲಿ: ಐಐಟಿ (IIT) ಧನ್‌ಬಾದ್‌ನಲ್ಲಿ ಶುಲ್ಕ ಪಾವತಿಸಲು ಹಣವಿಲ್ಲದೇ ಪ್ರವೇಶ ಪಡೆಯಲು ಸಾಧ್ಯವಾಗದೇ ಕಂಗಾಲಾಗಿದ್ದ ದಲಿತ ಯುವಕನಿಗೆ ಕೊನೆಗೂ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ನ್ಯಾಯ ಸಿಕ್ಕಿದೆ.

ಉತ್ತರ ಪ್ರದೇಶದ (Uttar Pradesh) ಮುಜಾಫರ್‌ನಗರದ 18ರ ದಲಿತ ಯುವಕ ಈ ವರ್ಷ ದೇಶದ ಪ್ರತಿಷ್ಠಿತ ಎಂಜಿನಿಯರಿಂಗ್ ಕೋರ್ಸ್‌ಗೆ ನಡೆಸಿದ ಪರೀಕ್ಷೆಯಲ್ಲಿ ತೇರ್ಗಡೆಗೊಂಡಿದ್ದ. ತೀರ ಬಡತನದ ಕುಟುಂಬ ಇವರದು. ದಿನಗೂಲಿ ಕಾರ್ಮಿಕರಾದ ಯುವಕನ ತಂದೆ 17,500 ರೂ. ಪ್ರವೇಶ ಶುಲ್ಕವನ್ನು ಸಕಾಲದಲ್ಲಿ ವ್ಯವಸ್ಥೆ ಮಾಡಲು ಸಾಧ್ಯವಾಗಲಿಲ್ಲ. ಇದನ್ನೂ ಓದಿ: MUDA Scam Case: ಸಿಎಂ ಸಿದ್ದರಾಮಯ್ಯ ವಿರುದ್ಧ ಇಸಿಐಆರ್ ದಾಖಲಿಸಿದ ED

ಯುವಕನಿಗೆ ತಾನು ಕಷ್ಟಪಟ್ಟು ತೇರ್ಗಡೆ ಹೊಂದಿರುವ ಸ್ಥಾನವನ್ನು ಕಳೆದುಕೊಳ್ಳಲು ಇಷ್ಟವಿರಲಿಲ್ಲ. ಆ ಸ್ಥಾನವನ್ನು ಉಳಿಸಿಕೊಳ್ಳುವುದಕ್ಕೆ ಮೂರು ತಿಂಗಳ ಕಾಲ ಆತನ ತಂದೆ ಎಸ್‌ಸಿ/ಎಸ್‌ಟಿ ಆಯೋಗ, ಜಾರ್ಖಂಡ್ ಮತ್ತು ಮದ್ರಾಸ್ ಹೈಕೋರ್ಟ್‌ಗೆ (High Court) ನ್ಯಾಯಕ್ಕಾಗಿ ಅಲೆದರು. ಅಲ್ಲಿ ಏನೂ ಪ್ರಯೋಜನ ಆಗದಿದ್ದಾಗ, ಕೊನೆಗೆ ಸುಪ್ರೀಂ ಕೋರ್ಟ್ ಮೊರೆ ಹೋದರು. ಈ ಹಿನ್ನೆಲೆ ಶಿಕ್ಷಣ ಸಂಸ್ಥೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಬಿ.ಟೆಕ್ ಕೋರ್ಸ್‌ಗೆ ಆತನಿಗೆ ಪ್ರವೇಶ ಕಲ್ಪಿಸುವುದಕ್ಕೆ ಕೋರ್ಟ್ ನಿರ್ದೇಶನ ನೀಡಿದ್ದು, ಇಂತಹ ಯುವ ಪ್ರತಿಭಾನ್ವಿತ ಯುವಕರು ಬಿಟ್ಟು ಹೋಗುವುದಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸಿಜೆಐ ಡಿ.ವೈ ಚಂದ್ರಚೂಡ್, ನ್ಯಾ.ಜೆಬಿ ಪರ್ದಿವಾಲ ಹಾಗೂ ನ್ಯಾ. ಮನೋಜ್ ಮಿಶ್ರಾ ಅವರಿದ್ದ ಪೀಠ ತಿಳಿಸಿದೆ. ಅಲ್ಲದೇ ಯುವಕನಿಗೆ ಕೋರ್ಟ್, ಆಲ್ ದಿ ಬೆಸ್ಟ್ ಹೇಳಿದೆ. ಇದನ್ನೂ ಓದಿ: ಶಿರೂರು ಕಾರ್ಯಾಚರಣೆಯಲ್ಲಿ ಸಿಕ್ತು ಮನುಷ್ಯನ ಮೂಳೆಗಳು

ಯುವಕ ಅತುಲ್ ಕುಮಾರ್ ಅವರನ್ನು ತನ್ನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಬಿ.ಟೆಕ್ ಕೋರ್ಸ್‌ಗೆ  ಸೇರಿಸಿಕೊಳ್ಳಲು ಐಐಟಿ ಧನ್‌ಬಾದ್‌ಗೆ (IIT Dhanbad) ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಇದಕ್ಕಾಗಿ ಕೋರ್ಟ್, ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ತನ್ನ ಅಸಾಮಾನ್ಯ ಅಧಿಕಾರವನ್ನು ಬಳಸಿತು. ಸಂವಿಧಾನದ 142 ನೇ ವಿಧಿಯು ನ್ಯಾಯದ ಹಿತದೃಷ್ಟಿಯಿಂದ ಯಾವುದೇ ಆದೇಶವನ್ನು ಹೊರಡಿಸಲು ಉನ್ನತ ನ್ಯಾಯಾಲಯಕ್ಕೆ ಅಧಿಕಾರ ನೀಡುತ್ತದೆ. ಇದನ್ನೂ ಓದಿ: ದೇಶಿ ಹಸುಗಳನ್ನು ‘ರಾಜ್ಯಮಾತಾ’ ಎಂದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಈ ಬಗ್ಗೆ ಮಾಧ್ಯಮದೊಂದಿಗೆ ಸಂತೋಷ ಹಂಚಿಕೊಂಡ ಯುವಕ ಅತುಲ್, ನನಗೆ ಪ್ರವೇಶ ಸಿಕ್ಕಿರುವುದು ತುಂಬಾ ಸಂತೋಷವಾಗಿದೆ. ಹಣಕಾಸಿನ ಸಮಸ್ಯೆಯಿಂದ ನನ್ನ ಸೀಟು ಕಸಿದುಕೊಳ್ಳುವುದಕ್ಕೆ ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ‘ಹಳಿ ತಪ್ಪಿದ ರೈಲು ಮತ್ತೆ ಹಳಿ ಸೇರಿದೆ’. ನಾನು ಕಷ್ಟಪಟ್ಟು ಕೆಲಸ ಮಾಡಿ ಎಲೆಕ್ಟ್ರಿಕಲ್ ಇಂಜಿನಿಯರ್ ಆಗುತ್ತೇನೆ ಎಂದು ಹರುಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಕಲಿ ನೋಟು ಕೇಸ್‌ನಲ್ಲಿ ಗುಜರಾತ್‌ ಪೊಲೀಸರಿಗೆ ಶಾಕ್‌ – ನೋಟುಗಳಲ್ಲಿ ಗಾಂಧೀಜಿ ಬದಲಿಗೆ ಇತ್ತು ಬಾಲಿವುಡ್‌ ನಟನ ಫೋಟೋ

TAGGED:Dalit StudentIIT DhanbadNew DelhiSupreme Courtದಲಿತ ವಿದ್ಯಾರ್ಥಿನವದೆಹಲಿಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

You Might Also Like

Ahmedabad Air India Plane Crash 1
Latest

Air India Crash | 2 ಎಂಜಿನ್‌ಗಳಿಗೆ ಇಂಧನ ಪೂರೈಕೆ ಆಗದಿದ್ದೇ ದುರಂತಕ್ಕೆ ಕಾರಣ – AAIB ಪ್ರಾಥಮಿಕ ವರದಿ ಬಹಿರಂಗ

Public TV
By Public TV
8 minutes ago
Kitty Party Fruad Case Fake Lawyer copy
Bengaluru City

ಬೆಂಗಳೂರಲ್ಲಿ ಕಿಟ್ಟಿ ಪಾರ್ಟಿ ಆಯೋಜಿಸಿ 50 ಕೋಟಿ ವಂಚನೆ ಕೇಸ್ – ಲಾಯರ್ ಎಂದು ಪೊಲೀಸರಿಗೆ ಅವಾಜ್ ಹಾಕಿದ್ದ ಮತ್ತೋರ್ವ ಅರೆಸ್ಟ್

Public TV
By Public TV
10 minutes ago
Myanmar buddha monastery 1
Latest

ಮ್ಯಾನ್ಮಾರ್‌ನಲ್ಲಿ ಬೌದ್ಧ ವಿಹಾರದ ಮೇಲೆ ವೈಮಾನಿಕ ದಾಳಿಗೆ 23 ಮಂದಿ ಬಲಿ

Public TV
By Public TV
8 hours ago
Chinnaswamy Stampede 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ‌ ಪ್ರಕರಣ | ಆರ್‌ಸಿಬಿ A1, ಡಿಎನ್‌ಎ A2 – ಮ್ಯಾಜಿಸ್ಟ್ರೇಟ್ ತನಿಖಾ ವರದಿ

Public TV
By Public TV
8 hours ago
Delhi Weather 1
Latest

ದೆಹಲಿಯಲ್ಲಿ ಭೂಕಂಪನ ಅನುಭವ – ಬೆಚ್ಚಿಬಿದ್ದ ಜನ

Public TV
By Public TV
9 hours ago
Narendra Modi
Latest

ಮೋದಿ ನಿವೃತ್ತಿಗೆ‌ ಮೋಹನ್ ಭಾಗವತ್ ಸೂಚನೆ? – ವಿಪಕ್ಷಗಳಿಂದ ಬಿಜೆಪಿಗೆ ಪ್ರಶ್ನೆಗಳ ಸುರಿಮಳೆ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?