ChikkamagaluruDistrictsKarnatakaLatestMain Post

ದಲಿತರು ಬಿಜೆಪಿ ಜೊತೆಗಲ್ಲ, ನನ್ನ ಹೃದಯದಲ್ಲಿದ್ದಾರೆ: ಸಿ.ಟಿ.ರವಿ

ಚಿಕ್ಕಮಗಳೂರು: ದಲಿತರು ಬಿಜೆಪಿ (BJP) ಜೊತೆಗಿಲ್ಲ ಎಂದು ಕೆಲವರು ಆರೋಪ ಮಾಡುತ್ತಾರೆ. ಆದರೆ ದಲಿತ (Dalit) ರು ಬಿಜೆಪಿಯ ಹೃದಯದಲ್ಲಿದ್ದಾರೆ. ನನ್ನ ಹೃದಯದಲ್ಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ (CT Ravi) ಹೇಳಿದ್ದಾರೆ.

ನಗರದ ಕುವೆಂಪು ಕಲಾಮಂದಿರದಲ್ಲಿ ಬಿಜೆಪಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೋರ್ಚಾದಿಂದ ರಾಜ್ಯ ಸರ್ಕಾರ (State Government) ಮೀಸಲಾತಿ ಹೆಚ್ಚಳ ಮಾಡಿರುವ ಹಿನ್ನೆಲೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ನನ್ನ 34 ವರ್ಷದ ರಾಜಕೀಯ ಜೀವನದಲ್ಲಿ ಯಾವತ್ತೂ ತಾರತಮ್ಯ ಮಾಡಿಲ್ಲ ಎಂದರು. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ದುಡುಕುವವರಲ್ಲ, ಕಾಂಗ್ರೆಸ್ ಸಹವಾಸದಿಂದ ಹೀಗಾಗಿದೆ: ಬೊಮ್ಮಾಯಿ

i

ಕೆಲವರು ಚಿಕ್ಕಮಗಳೂರು (Chikkamagaluru) ಕ್ಷೇತ್ರದಲ್ಲಿ ಶಾಶ್ವತ ಅಭಿವೃದ್ಧಿ ಕಾಮಗಾರಿ ಮಾಡಿಲ್ಲ ಎಂದು ಆರೋಪಿಸುತ್ತಾರೆ. ಆದರೆ ಜಿಲ್ಲೆಗೆ ಮೆಡಿಕಲ್ ಕಾಲೇಜು (Medical College) ತರಲಾಗಿದೆ. ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗುತ್ತಿದೆ. ಇವೆಲ್ಲವೂ ಶಾಶ್ವತ ಅಭಿವೃದ್ಧಿ ಕಾಮಗಾರಿಗಳಲ್ಲವೇ ಎಂದು ಆರೋಪ ಮಾಡುವವರಿಗೆ ಪ್ರಶ್ನಿಸಿದ್ದಾರೆ.

ಇದೇ ವೇಳೆ ಮಾಜಿ ಸಚಿವ ಹಾಗೂ ಕೊಳ್ಳೆಗಾಲ ಶಾಸಕ ಎನ್.ಮಹೇಶ್ (N Mahesh) ಮಾತನಾಡಿ, ಅಂಬೇಡ್ಕರ್ ಅವರು ಬದುಕಿದ್ದಾಗ ಕಾಂಗ್ರೆಸ್ (Congress) ಪಕ್ಷ ಅವರಿಗೆ ಹೆಜ್ಜೆ-ಹೆಜ್ಜೆಗೂ ಅಪಮಾನ ಮಾಡಿದೆ. ಆ ಪಕ್ಷಕ್ಕೆ ಪರಿಶಿಷ್ಟ ಜಾತಿಯವರು ಮತ ಹಾಕಬಾರದು. ಪರಿಶಿಷ್ಟರ ಜನಸಂಖ್ಯೆಗೆ ಅನುಗುಣವಾಗಿ 1958ರಿಂದ ಮೀಸಲಾತಿಯನ್ನು ಹೆಚ್ಚಳ ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಲಿಲ್ಲ. ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಳ ಮಾಡುವ ಐತಿಹಾಸಿಕ ನಿರ್ಧಾರವನ್ನು ಬಿಜೆಪಿ ಸರ್ಕಾರ ಮಾಡಿದೆ ಎಂದರು.

Live Tv

Leave a Reply

Your email address will not be published. Required fields are marked *

Back to top button