Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಣಿದು ಕುಣಿಸೋಕೆ ಬರ್ತಿದೆ ʻಡಾನ್ಸ್ ಕರ್ನಾಟಕ ಡಾನ್ಸ್ʼ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | TV Shows | ಕುಣಿದು ಕುಣಿಸೋಕೆ ಬರ್ತಿದೆ ʻಡಾನ್ಸ್ ಕರ್ನಾಟಕ ಡಾನ್ಸ್ʼ

TV Shows

ಕುಣಿದು ಕುಣಿಸೋಕೆ ಬರ್ತಿದೆ ʻಡಾನ್ಸ್ ಕರ್ನಾಟಕ ಡಾನ್ಸ್ʼ

Public TV
Last updated: November 13, 2025 5:55 pm
Public TV
Share
2 Min Read
DKD 2025
SHARE

ವಿಭಿನ್ನ ಫಿಕ್ಷನ್ ಮತ್ತು ನಾನ್ ಫಿಕ್ಷನ್ ಕಾರ್ಯಕ್ರಮಗಳ ಮೂಲಕ ವೀಕ್ಷಕರನ್ನ ರಂಜಿಸುತ್ತಾ ಬಂದಿರುವ ಜೀ ಕನ್ನಡ ಇದೀಗ ವೀಕ್ಷಕರಿಗೆ ಮತ್ತೊಂದು ಸರ್ಪ್ರೈಸ್ ನೀಡಿದೆ. ಜನಮನ್ನಣೆ ಗಳಿಸಿರುವ ಎಲ್ಲರ ಅಚ್ಚುಮೆಚ್ಚಿನ ಡಾನ್ಸ್ ರಿಯಾಲಿಟಿ ಶೋ ‘ಡಾನ್ಸ್ ಕರ್ನಾಟಕ ಡಾನ್ಸ್’ ಹೊಸ ಸೀಸನ್ನೊಂದಿಗೆ ಮರಳಿ ಬರುತ್ತಿದೆ. ಡಾನ್ಸ್ ಮೂಲಕ ಪ್ರೇಕ್ಷಕರ ಹೃದಯ ಗೆದ್ದ ಈ ಶೋ ಈ ಬಾರಿ ಇನ್ನಷ್ಟು ವಿಭಿನ್ನವಾಗಿರಲಿದೆ. ಹೊಸ ಥೀಮ್‌ಗಳು, ಅದ್ಭುತ ಪ್ರತಿಭೆಗಳ ಪ್ರದರ್ಶನಗಳೊಂದಿಗೆ ಈ ಬಾರಿಯ ಶೋ ಮತ್ತಷ್ಟು ಮನರಂಜನೆ ನೀಡಲು ಸಜ್ಜಾಗಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಶೋ ನವೆಂಬರ್ 15ರಂದು ಪ್ರೀಮಿಯರ್ ಆಗಲಿದ್ದು, ಪ್ರತೀ ಶನಿವಾರ ಮತ್ತು ಭಾನುವಾರ ಸಂಜೆ 7:30ಕ್ಕೆ ಪ್ರಸಾರವಾಗಲಿದೆ.

DKD 2025 2

ತನ್ನ ಮಾತಿನ ಮೂಲಕ ಜನಮನ್ನಣೆ ಪಡೆದ ಅನುಶ್ರೀ ಅವರು ಈ ಸೀಸನ್ನ ಆಂಕರ್ ಆಗಿರಲಿದ್ದು, ಜಡ್ಜಸ್ ಪ್ಯಾನೆಲ್ನಲ್ಲಿ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ಕುಮಾರ್, ಡಿಂಪಲ್ ಕ್ವೀನ್ ರಚಿತಾ ರಾಮ್, ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಮತ್ತು ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಇರಲಿದ್ದಾರೆ. ಕರುನಾಡ ಚಕ್ರವರ್ತಿ ಎಂದು ಚಿರಪರಿಚಿತರಾಗಿರುವ ಡಾ.ಶಿವರಾಜ್ ಕುಮಾರ್ ಅವರು ಅತ್ಯುತ್ತಮ ನಟ ಮಾತ್ರವಲ್ಲದೆ ಒಳ್ಳೆಯ ಡ್ಯಾನ್ಸರ್ ಆಗಿದ್ದು ತನ್ನ ಡಿಫರೆಂಟ್ ಸ್ಟೈಲ್ ಗೆ ಜನಪ್ರಿಯ. ಇನ್ನು ಇವರ ವರುಷಗಳ ಅನುಭವ, ಜ್ಞಾನ ಸ್ಪರ್ಧಿಗಳಿಗೆ ಹುಮ್ಮಸ್ಸು ನೀಡಲಿದೆ. ನಟಿ ಮಾತ್ರವಲ್ಲದೆ, ಶಾಸ್ತ್ರೀಯ ನೃತ್ಯಗಾರ್ತಿಯೂ ಆಗಿರುವ ರಚಿತಾರಾಮ್ ಅವರ ನಾಲೆಡ್ಜ್, ಬಹುಮುಖ ಪ್ರತಿಭೆ, ರಾಷ್ಟ್ರಪ್ರಶಸ್ತಿ ವಿಜೇತ ವಿಜಯ ರಾಘವೇಂದ್ರ ಅವರ ನಟನೆ, ಸಂಗೀತ ಮತ್ತು ಡಾನ್ಸ್ ಬಗೆಗಿನ ಜ್ಞಾನ, ಮತ್ತು ಅರ್ಜುನ್ ಜನ್ಯ ಅವರಿಗಿರುವ ಸಂಗೀತ, ತಾಳ, ಲಯಗಳ ಅರಿವು ಈ ಶೋಗೆ ಹೆಚ್ಚಿನ ಶಕ್ತಿ ತುಂಬಲಿದೆ.

ZEE Kannada 3

ಈ ಸೀಸನ್‌ನಲ್ಲಿ ಬಿಗ್ ಟ್ವಿಸ್ಟ್ ಇರಲಿದ್ದು ಜನಪ್ರಿಯ ಸೆಲೆಬ್ರಿಟಿಗಳು ರಾಜ್ಯದಾದ್ಯಂತ ಆಯ್ಕೆಯಾದ ಪ್ರತಿಭಾವಂತ ನೃತ್ಯಗಾರರೊಂದಿಗೆ ಜೋಡಿಯಾಗಿ ಪಾಲ್ಗೊಳ್ಳಲಿದ್ದಾರೆ. ಸೆಲೆಬ್ರಿಟಿಗಳ ಸಾಲಿನಲ್ಲಿ ಧನಂಜಯ್, ಭವ್ಯಾ ಗೌಡ, ಆರತಿ ಪಡುಬಿದ್ರಿ, ಅಮೋಘ್, ಪ್ರತೀಕ್ಷಾ, ನಂದಿನಿ, ಅನೂಪ್, ಸ್ಮೈಲ್ ಗುರು ರಕ್ಷಿತ್, ಜಗಪ್ಪ, ಅನನ್ಯ, ಪೂಜಾ ರಮೇಶ್ ಮತ್ತು ಅಶ್ವಿನ್ ಇರಲಿದ್ದಾರೆ. ಮೊದಲ ಎಪಿಸೋಡ್ ನಲ್ಲಿ ಸೆಲೆಬ್ರಿಟಿ ಡ್ಯಾನ್ಸರ್ ಗಳು ಇರಲಿದ್ದು, ಕರ್ನಾಟಕದ ವಿವಿಧ ಭಾಗಗಳಲ್ಲಿ ನಡೆದ ಆಡಿಷನ್ ನಲ್ಲಿ ಸೆಲೆಕ್ಟ್ ಆದ ಡ್ಯಾನ್ಸರ್ ಗಳು ಮುಂಬರಲಿರುವ ಎಪಿಸೋಡ್ ಗಳಲ್ಲಿ ಇವರಿಗೆ ಜೋಡಿಯಾಗಲಿದ್ದಾರೆ. ಯಾವ ಸೆಲೆಬ್ರಿಟಿಗೆ ಯಾರು ಜೋಡಿ ಆಗ್ತಾರೆ ಎಂಬುದು ವೀಕ್ಷಕರಲ್ಲಿ ಕುತೂಹಲ ಮೂಡಿಸಲಿದೆ.

ಜೀ ಕನ್ನಡ ಮನರಂಜನೆ ಲೋಕದಲ್ಲಿ ತನ್ನ ಪ್ರೇಕ್ಷಕರಿಗೆ ಸದಾ ಹೊಸತನವನ್ನು ನೀಡುತ್ತಾ ಕರ್ನಾಟಕದ ಮನೆಮಾತಾಗಿದೆ. ಇದೀಗ ಈ ಪರಂಪರೆಯನ್ನು ಮುಂದುವರೆಸುತ್ತಾ ಬಂದಿರುವ ಜೀ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಹೊಸ ಸೀಸನ್ ಮೂಲಕ ಡಾನ್ಸ್ ಹಬ್ಬವನ್ನು ಸೃಷ್ಠಿಸಲಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ನ ಹೊಸ ಸೀಸನ್ ಡಾನ್ಸ್ ಮತ್ತು ಕ್ರಿಯೇಟಿವಿಟಿ ಎದ್ದು ಕಾಣಲಿದೆ. ಪ್ರತಿ ಎಪಿಸೋಡ್ನಲ್ಲಿ ವಿಭಿನ್ನ ಥೀಮ್ಗಳು, ರೋಮಾಂಚನಕಾರಿ ಫೇಸ್ಆಫ್ಗಳು ಮತ್ತು ಕರ್ನಾಟಕದ ಸಂಸ್ಕೃತಿ, ರಿದಮ್ ಮತ್ತು ಆತ್ಮಸ್ಥೈರ್ಯವನ್ನು ಪ್ರತಿಬಿಂಬಿಸುವ ಡಾನ್ಸ್ ಗಳು ಇರಲಿದ್ದು ಇದು ಪ್ರೇಕ್ಷಕರನ್ನು ತನ್ನತ್ತ ಸೆಳೆಯಲಿದೆ. ಇನ್ನು ವರುಷದ ಬಳಿಕ ಈಗ ಡಾನ್ಸ್ ಕರ್ನಾಟಕ ಡಾನ್ಸ್ ಪ್ರೇಕ್ಷಕರನ್ನು ಮತ್ತೊಮ್ಮೆ ಮೋಡಿ ಮಾಡಲು ಸಿದ್ಧವಾಗಿದೆ.

TAGGED:Dance Karnataka Dance 2025DKD 2025Rachita RamShivarajKumarಅನುಶ್ರೀಡಾನ್ಸ್ ಕರ್ನಾಟಕ ಡಾನ್ಸ್ಡಿಕೆಡಿ 2025ರಚಿತಾ ರಾಮ್ಶಿವರಾಜ್‍ಕುಮಾರ್
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

ಸಾಂದರ್ಭಿಕ ಚಿತ್ರ
Latest

ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಭಾರೀ ಇಳಿಕೆ!

Public TV
By Public TV
2 minutes ago
pm modi mann ki baat
Bengaluru City

ಮಧ್ಯಪ್ರಾಚ್ಯ ಬಿಕ್ಕಟ್ಟು: ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ

Public TV
By Public TV
19 minutes ago
Kurubarahalli Accident
Bengaluru City

ಸ್ಟೀಲ್ ಸಾಗಿಸ್ತಿದ್ದ ಲಾರಿ ಕಾರಿಗೆ ಡಿಕ್ಕಿ – ಗುದ್ದಿದ ರಭಸಕ್ಕೆ ಗುಜರಿ ಗೋಡೌನ್ ಬೆಂಕಿಗಾಹುತಿ, ವ್ಯಕ್ತಿ ಸಾವು

Public TV
By Public TV
23 minutes ago
Shivamogga
Districts

ಆಗುಂಬೆ ಘಾಟ್‌ನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಸಂಚಾರ ಬಂದ್

Public TV
By Public TV
56 minutes ago
Iran Foreign Minister Abbas Araghchi
Latest

ಶತ್ರುಗಳಿಗೆ ಹಾರ್ಮುಜ್‌ ಜಲಸಂಧಿ ನಿರ್ಬಂಧಿಸುವುದು ಇರಾನ್‌ನ ಕಾನೂನುಬದ್ಧ ಹಕ್ಕು: ವಿಶ್ವಸಂಸ್ಥೆಯಲ್ಲಿ ಅರಘ್ಚಿ ಮಾತು

Public TV
By Public TV
1 hour ago
Fake Govt job
Districts

ಸರ್ಕಾರಿ ನೌಕರಿ ಕೊಡಿಸೋ ನಕಲಿ ನೇಮಕಾತಿ ಜಾಲ ಪತ್ತೆ – ಲಕ್ಷ ಲಕ್ಷ ಹಣ ನುಂಗಿ ಉದ್ಯೋಗಾಕಾಂಕ್ಷಿಗಳಿಗೆ ನಾಮ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?