ಕಾರಿಗೆ ಹತ್ತಿಸಿಕೊಂಡು ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – ಡ್ಯಾನ್ಸ್ ಮಾಸ್ಟರ್ ಅರೆಸ್ಟ್

Public TV
1 Min Read
Dance Master Arrestes in Kadugodi bengaluru crime

ಬೆಂಗಳೂರು: ಡ್ಯಾನ್ಸ್ ಕ್ಲಾಸ್ ಬಗ್ಗೆ ಮಾಹಿತಿ ನೀಡುವುದಾಗಿ ಹೇಳಿ ಅಪ್ರಾಪ್ತೆಯನ್ನು ಕಾರು ಹತ್ತಿಸಿಕೊಂಡು ಡ್ಯಾನ್ಸ್ ಮಾಸ್ಟರ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಗರದ ಕಾಡುಗೋಡಿಯಲ್ಲಿ (Kadugodi) ನಡೆದಿದೆ.

ಭಾರತಿ ಕಣ್ಣನ್ (28) ಬಂಧಿತ ಆರೋಪಿ. ಅಪ್ರಾಪ್ತ ಬಾಲಕಿ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಆರೋಪಿ ಕಾರು ನಿಲ್ಲಿಸಿ, ತಾನು ಡ್ಯಾನ್ಸ್ ಮಾಸ್ಟರ್ ಎಂದು ಪರಿಚಯ ಮಾಡಿಕೊಂಡಿದ್ದಾನೆ. ಜೊತೆಗೆ ಡ್ಯಾನ್ಸ್ ಕ್ಲಾಸ್ ಬಗ್ಗೆ ಮಾಹಿತಿ ನೀಡುವುದಾಗಿ ಹೇಳಿ ಆಕೆಯನ್ನು ನಂಬಿಸಿ, ಕಾರು ಹತ್ತಿಸಿಕೊಂಡಿದ್ದಾನೆ.ಇದನ್ನೂ ಓದಿ: ಕಾಂಗ್ರೆಸ್‌ ಹುದ್ದೆಗಳಿಗೆ ರಾಜೀನಾಮೆ – ಸಿಡಿದ ದಕ್ಷಿಣ ಕನ್ನಡ ಮುಸ್ಲಿಮರು

ಒಳಗೆ ಕುಳಿತ ಬಳಿಕ ಕಾರ್ ಲಾಕ್ ಮಾಡಿಕೊಂಡಿದ್ದಾನೆ. ಸ್ವಲ್ಪ ದೂರ ಹೋಗುತ್ತಲೇ ಕಾರು ನಿಲ್ಲಿಸಿ, ಲೈಂಗಿಕ ಕಿರುಕುಳ ನೀಡಿದ್ದಾನೆ. ಬಳಿಕ ಆಕೆಯನ್ನು ಹತ್ತಿಸಿಕೊಂಡಿದ್ದ ಸ್ಥಳಕ್ಕೆ ಬಿಟ್ಟು ಹೋಗಿದ್ದಾನೆ.

ಘಟನೆ ಬಗ್ಗೆ ಅಪ್ರಾಪ್ತೆ ತನ್ನ ಪೋಷಕರಿಗೆ ತಿಳಿಸಿದ್ದು, ತಕ್ಷಣ ಕಾಡುಗೋಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಇದನ್ನೂ ಓದಿ: ಬೆಳಗಾವಿಯಲ್ಲಿ ಕೊರಾನಾಗೆ ಮೊದಲ ಬಲಿ

Share This Article