ಲಕ್ನೋ: ಡ್ಯಾನ್ಸ್ ಮಾಡುವುದನ್ನು ನಿಲ್ಲಿಸಿದ ಮಹಿಳೆ ಮೇಲೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ಘಟನೆ ಡಿಸೆಂಬರ್ 1ರಂದು ಉತ್ತರ ಪ್ರದೇಶದ ಚಿತ್ರಕೂಟ್‍ನಲ್ಲಿ ನಡದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಈ ಘಟನೆಯ ವಿಡಿಯೋ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್ ಆಗುತ್ತಿದೆ. ಒಂದು ನಿಮಿಷದ ವಿಡಿಯೋದಲ್ಲಿ ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಮಹಿಳೆ ಡ್ಯಾನ್ಸ್ ಮಾಡಿ ನಿಲ್ಲಿಸಿದ ತಕ್ಷಣ ಗುಂಡು ಹಾರಿಸುತ್ತೇನೆ ಎಂದು ಹೇಳಿದ್ದಾನೆ.
Advertisement
ಈ ಸಂದರ್ಭದಲ್ಲಿ ಆರೋಪಿ ಜೊತೆ ಮತ್ತೊಬ್ಬ ವ್ಯಕ್ತಿ, ಅಣ್ಣ ನೀನು ಈಗ ಗುಂಡು ಹಾರಿಸಲೇ ಬೇಕು ಎಂದು ಹೇಳಿದ್ದಾನೆ. ಈ ವೇಳೆ ಗುಂಡು ಹಾರಿ ಮಹಿಳೆಯ ಮುಖಕ್ಕೆ ತಾಗಿದೆ. ತಕ್ಷಣ ಎಲ್ಲರೂ ಆಘಾತಕ್ಕೆ ಒಳಗಾದರು. ಮಹಿಳೆಯ ಮುಖಕ್ಕೆ ಗುಂಡು ಬಿದ್ದಿದೆ.
Advertisement
Advertisement
ಡಿಸೆಂಬರ್ 1ರಂದು ಈ ವಿಡಿಯೋ ಸೆರೆ ಹಿಡಿಯಲಾಗಿದ್ದು, ಮಹಿಳೆ ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದಳು. ಗ್ರಾಮದ ಮುಖ್ಯಸ್ಥರ ಕುಟುಂಬದ ಸದಸ್ಯರೊಬ್ಬರು ಮಹಿಳೆಗೆ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ಅಪರಿಚಿತ ವ್ಯಕ್ತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement
ಈ ಬಗ್ಗೆ ಪ್ರತಿಕ್ರಿಯಿಸಿದ ಹಿರಿಯ ಪೊಲೀಸ್ ಅಧಿಕಾರಿ ಅಂಕಿತ್ ಮಿಥಲ್, ನಾವು ಆರೋಪಿಯನ್ನು ಬಂಧಿಸಲು ಪ್ರಯತ್ನ ಮಾಡುತ್ತಿದ್ದೇವೆ. ಆರೋಪಿಯನ್ನು ನ್ಯಾಯಾಲಯಕ್ಕೆ ತರಲು ಎಲ್ಲ ಪ್ರಯತ್ನ ಮಾಡುತ್ತಿದ್ದೇವೆ. ಕಾನ್ಪುರ ಆಸ್ಪತ್ರೆಯಲ್ಲಿ ಮಹಿಳೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಈಗ ಆಕೆಯ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು ತಿಳಿಸಿದರು.