ಬಾಗಲಕೋಟೆ: ರಬಕವಿ ಬನಹಟ್ಟಿ (Rabakavi Banahatti) ತಾಲ್ಲೂಕಿನ ಬಂಡಿಗಣಿ ಗ್ರಾಮದ ಬಸವಗೋಪಾಲ ನೀಲಮಾಣಿಕ ಮಠದ ದಾನೇಶ್ವರ ಸ್ವಾಮೀಜಿ(75) ಲಿಂಗೈಕ್ಯರಾಗಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿ (Daneshwara Swamiji) ಅವರನ್ನು ನಾಲ್ಕು ದಿನದ ಹಿಂದೆ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ 11 ಗಂಟೆಗ ನಿಧನರಾದರು.
ದಾಸೋಹ ಚಕ್ರವರ್ತಿ ಅನ್ನದಾನೇಶ್ವರ ಎಂದೇ ಹೆಸರಾಗಿದ್ದ ಇವರಿಗೆ ಬಾಗಲಕೋಟೆ, ವಿಜಯಪುರ, ಬೆಳಗಾವಿ ಭಾಗದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರಿದ್ದಾರೆ. ಇದನ್ನೂ ಓದಿ: ಇಂಡಿಗೋ ಸಮಸ್ಯೆ – ಪೈಲಟ್ ರಜೆ ನಿಯಮಗಳನ್ನು ಸಡಿಲಿಸಿದ DGCA
ಮಧ್ಯಾಹ್ನ ಬೆಳಗಾವಿ ಆಸ್ಪತ್ರೆಯಿಂದ ಪಾರ್ಥೀವ ಶರೀರ ಮೊದಲು ಅವರ ಹುಟ್ಟೂರು ಬೆಳಗಾವಿ ಜಿಲ್ಲೆ ಸವದಿ ಗ್ರಾಮಕ್ಕೆ ತರಲಾಗುತ್ತದೆ. ನಂತರ ರಾತ್ರಿ ಬಂಡಿಗಣಿ ಗ್ರಾಮದ ಮಠಕ್ಕೆ ತಂದು ನಾಳೆ ಸಂಜೆ 4 ಗಂಟೆಯವರೆಗೆ ಮಠದ ಆವರಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ನಾಳೆ ಸಂಜೆ 4 ಗಂಟೆಗೆ ವೀರಶೈವ ಲಿಂಗಾಯತ ವಿಧಿವಿಧಾನ ಪ್ರಕಾರ ಅಂತ್ಯಸಂಸ್ಕಾರ ನಡೆಸಲಾಗುತ್ತದೆ. ಇದನ್ನೂ ಓದಿ: ನಾವು ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದ್ದೇವೆ – ಪುಟಿನ್ ಜೊತೆಗಿನ ಸಂವಾದದಲ್ಲಿ ಮೋದಿ ಮಾತು

