ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ED ಅಧಿಕಾರ ಎತ್ತಿಹಿಡಿದ ಸುಪ್ರೀಂ – ʻಅಪಾಯಕಾರಿ ತೀರ್ಪುʼ ಎಂದ ವಿಪಕ್ಷಗಳು

Public TV
2 Min Read
SUPREME COURT

ನವದೆಹಲಿ: ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿ ದಾಖಲಾಗಿರುವ ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರವನ್ನು ಎತ್ತಿ ಹಿಡಿದು ಸುಪ್ರೀಂ ಕೋರ್ಟ್‌ ನೀಡಿದ ತೀರ್ಪಿಗೆ ವಿರೋಧ ಪಕ್ಷಗಳು ಬೇಸರ ವ್ಯಕ್ತಪಡಿಸಿವೆ.

ಪಿಎಂಎಲ್‌ಎ ಅಡಿ ತನಿಖಾ ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರವನ್ನು ಸುಪ್ರೀಂ ಕೋರ್ಟ್‌ ನೀಡಿ ತೀರ್ಪು ಹೊರಡಿಸಿದೆ. ಇದು ʼಅಪಾಯಕಾರಿ ತೀರ್ಪುʼ 17 ವಿರೋಧ ಪಕ್ಷಗಳು ಆಕ್ಷೇಪವನ್ನು ವ್ಯಕ್ತಪಡಿಸಿವೆ. ಇದನ್ನೂ ಓದಿ: ಪಿಎಂಎಲ್‌ಎ ಅಡಿ ಬಂಧನ ಮಾಡಬಹುದು – ಇಡಿಗೆ ಸುಪ್ರೀಂನಿಂದ ಸಿಕ್ತು ಪರಮಾಧಿಕಾರ

ಅಪಾಯಕಾರಿ ತೀರ್ಪು ಅಲ್ಪಕಾಲಿಕವಾಗಿರುತ್ತದೆ. ಸಾಂವಿಧಾನಿಕ ನಿಬಂಧನೆಗಳು ಶೀಘ್ರದಲ್ಲೇ ಮೇಲುಗೈ ಸಾಧಿಸುತ್ತವೆ ಎಂದು ನಾವು ಭಾವಿಸುತ್ತೇವೆ ಎಂದು ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಡಿಎಂಕೆ, ಆಮ್ ಆದ್ಮಿ ಪಕ್ಷ, ಸಿಪಿಐ(ಎಂ), ಸಮಾಜವಾದಿ ಪಕ್ಷ ಮತ್ತು ಆರ್‌ಜೆಡಿ ಪ್ರತಿನಿಧಿಗಳು ಸಹಿ ಹಾಕಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಕಾನೂನು ದುರುಪಯೋಗದ ಮೂಲಕ ಸೇಡಿನ ರಾಜಕೀಯ ಮಾಡಲಾಗುತ್ತಿದೆ ಎಂದು ಕೇಂದ್ರದ ಆಡಳಿತದ ವಿರುದ್ಧ ವಿಪಕ್ಷಗಳು ಗಂಭೀರ ಆರೋಪ ಮಾಡಿವೆ. ಪಿಎಂಎಲ್‌ಎ ತೀರ್ಪನ್ನು ಮರುಪರಿಶೀಲನೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಲು ವಿಪಕ್ಷಗಳು ಮುಂದಾಗಿವೆ.

ನರೇಂದ್ರ ಮೋದಿ ಸರ್ಕಾರದ ಎಂಟು ವರ್ಷಗಳ ಅವಧಿಯಲ್ಲಿ ಹಿಂದಿನ ಸರ್ಕಾರಕ್ಕೆ ಹೋಲಿಸಿದರೆ, ಇ.ಡಿ ದಾಳಿ ಶೇ.26 ಪಟ್ಟು ಹೆಚ್ಚಾಗಿದೆ. ಆದರೆ ಶಿಕ್ಷೆಯ ಪ್ರಮಾಣ ಕಡಿಮೆಯಾಗಿದೆ. 2014 ರಿಂದ ಅಕ್ರಮ ಹಣ ವರ್ಗಾವಣೆ ಆರೋಪದಡಿ 3,010 ಕಡೆ ದಾಳಿ ಮಾಡಿ ಪರಿಶೀಲನೆ ನಡೆಸಲಾಯಿತು. ಆ ಪೈಕಿ ಕೇವಲ 23 ಆರೋಪಿಗಳಿಗೆ ಶಿಕ್ಷೆಯಾಗಿದೆ ಎಂದು ಹಣಕಾಸು ಸಚಿವಾಲಯವು ರಾಜ್ಯಸಭೆಯಲ್ಲಿ ಹಂಚಿಕೊಂಡ ಅಂಕಿಅಂಶದಲ್ಲಿ ತಿಳಿಸಿವೆ. 112 ಪ್ರಕರಣಗಳಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಕಂಡುಬಂದಿಲ್ಲ.

Enforcement Directorate

ನಾವು ನಮ್ಮ ಸರ್ವೋಚ್ಚ ನ್ಯಾಯಾಲಯದ ಮೇಲೆ ಅಪಾರ ಗೌರವ ಹೊಂದಿದ್ದೇವೆ. ಆದರೂ, ತೀರ್ಪಿನ ವಿಚಾರವಾಗಿ ಮರುಪರಿಶೀಲನೆ ಅಗತ್ಯವಿದೆ ಎಂದು ವಿಪಕ್ಷಗಳು ಅಭಿಪ್ರಾಯಪಟ್ಟಿವೆ. ಇದನ್ನೂ ಓದಿ: ಉಪರಾಷ್ಟ್ರಪತಿ ಚುನಾವಣೆ – NDA ಅಭ್ಯರ್ಥಿಗೆ BSP ಬೆಂಬಲ

ಈ ದೂರಗಾಮಿ ತಿದ್ದುಪಡಿಗಳು ಸರ್ಕಾರದ ಕೈಗಳನ್ನು ಬಲಪಡಿಸಿವೆ. ಇದರಿಂದಾಗಿ ರಾಜಕೀಯ ಸೇಡು ತೀರಿಸಿಕೊಳ್ಳಲು ಆಡಳಿತ ಪಕ್ಷ ತೊಡಗಿಕೊಂಡಿದೆ. ಅತ್ಯುತ್ತಮ ನ್ಯಾಯಾಂಗ ವ್ಯವಸ್ಥೆಯು, ಕಾರ್ಯಾಂಗವು ಬೆಂಬಲಿಸುವ ವಾದಗಳನ್ನು ವಾಸ್ತವಿಕವಾಗಿ ಪುನರುಚ್ಛರಿಸಿರುವುದು ಬೇಸರ ತರಿಸಿದೆ ಎಂದು ವಿಪಕ್ಷಗಳು ಹೇಳಿವೆ.

ಏನಿದು ಸುಪ್ರೀಂ ತೀರ್ಪು?
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌) ಅಡಿಯಲ್ಲಿ ವಿಧಿಸಲಾಗಿರುವ ನಿಬಂಧನೆ ಮತ್ತು ಆರೋಪಿಗಳನ್ನು ಬಂಧಿಸುವ ಜಾರಿ ನಿರ್ದೇಶನಾಲಯದ ಅಧಿಕಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿತ್ತು. ಇ.ಡಿ ಅಧಿಕಾರ ವ್ಯಾಪ್ತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿತ್ತು.

ಪಿಎಂಎಲ್‌ಎ ಅಡಿ ದಾಖಲಾಗಿರುವ ಪ್ರಕರಣಗಳಲ್ಲಿ ಇಡಿ ಅಧಿಕಾರವನ್ನು ಸುಪ್ರೀಂ ಎತ್ತಿ ಹಿಡಿದಿದೆ. ತನಿಖೆಗೆ ಪೂರಕವಾಗಿ ಆರೋಪಿಗಳ ಆಸ್ತಿ, ಮನೆ ಮತ್ತು ಕಚೇರಿ ಹಾಗೂ ಸಂಬಂಧಿತ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಬಹುದು. ಕಾಯ್ದೆ ಅಡಿ ಬಂಧನ ಮತ್ತು ಆಸ್ತಿ, ನಗದು ವಶಪಡಿಸಿಕೊಳ್ಳಲು ಇ.ಡಿಗೆ ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿತ್ತು. ಇದನ್ನೂ ಓದಿ: 10 ವರ್ಷ ದುಡಿದು SUV ಕಾರು ಖರೀದಿಸಿದ ಅಭಿಮಾನಿ – ಆನಂದ್ ಮಹೀಂದ್ರಾ ಮೆಚ್ಚುಗೆ ಮಾತು

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *