ನವದೆಹಲಿ: ಲೋಕಸಭೆಯ ಬಹುಜನ ಸಮಾಜವಾದಿ ಪಕ್ಷದ (ಬಿಎಸ್‍ಪಿ) ನಾಯಕರಾಗಿ ಡ್ಯಾನಿಶ್ ಅಲಿ ಆಯ್ಕೆಯಾಗಿದ್ದಾರೆ.
ಆನಂದ್ ಕುಮಾರ್ ಅವರನ್ನು ಬಿಎಸ್‍ಪಿಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಆಕಾಶ್ ಆನಂದ್ ಮತ್ತು ರಾಮ್‍ಜಿ ಗೌತಮ್ ಅವರು ಬಿಎಸ್‍ಪಿ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ ಆಗಿದ್ದಾರೆ.
Advertisement
Advertisement
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಕಟ್ಟಿಹಾಕಲು ಬಿಎಸ್‍ಪಿ ಹಾಗೂ ಎಸ್‍ಪಿ ಮೈತ್ರಿ ಮಾಡಿಕೊಂಡಿದ್ದವು. ಆದರೆ ಈ ಮೈತ್ರಿ ವಿಫಲವಾದ ಪರಿಣಾಮ ಬಿಎಸ್‍ಪಿ ಕೇವಲ ಒಟ್ಟು 10 ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು. ಬಿಎಸ್‍ಪಿಯ 10 ಸಂಸದರಿಗೆ ಡ್ಯಾನಿಶ್ ಅಲಿ ನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ.
Advertisement
ಡ್ಯಾನಿಶ್ ಅಲಿ ಅವರು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಆಪ್ತರು. ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ವರಿಷ್ಠರ ಒಪ್ಪಿಗೆ ಪಡೆದು ಬಿಎಸ್‍ಪಿಯಿಂದ ಉತ್ತರ ಪ್ರದೇಶದ ಅವ್ರೋಹಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.
Advertisement
Danish Ali has been elected as the leader of BSP in Lok Sabha. Anand Kumar appointed as the Vice President of the party. Akash Anand and Ramji Gautam to be the National Coordinator of BSP. pic.twitter.com/s5FvENI98u
— ANI (@ANI) June 23, 2019
ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯ ಸರ್ಕಾರ ರಚನೆಯಲ್ಲಿ ಡ್ಯಾನಿಶ್ ಅಲಿ ಪ್ರಮುಖ ಪಾತ್ರ ವಹಿಸಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗೆ ನಡೆದಿದ್ದ ಕರ್ನಾಟಕ ಲೋಕಸಭಾ ಸೀಟುಗಳ ಹಂಚಿಕೆ ವಿಚಾರವಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಜೊತೆಗೆ ಡ್ಯಾನಿಶ್ ಅಲಿ ಮಾತುಕತೆ ನಡೆಸಿದ್ದರು.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]