Wednesday, 15th August 2018

Recent News

ಚಲಿಸುತ್ತಿದ್ದ ಬಸ್ಸಿನಲ್ಲಿ ಪೊಲೀಸ್ ಸಿಬ್ಬಂದಿ ಸಾವು

ಉಡುಪಿ: ಚಲಿಸುತ್ತಿದ್ದ ಬಸ್ಸಿನಲ್ಲಿ ಡಿಎಆರ್ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ.

ಹೃದಯಾಘಾತದಿಂದ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದಾರೆ. ಮಡಾಮಕ್ಕಿ ನಿವಾಸಿ ವಸಂತ್ ಪೂಜಾರಿ ಮೃತ ಪೊಲೀಸ್ ಸಿಬ್ಬಂದಿ. ಇವರು ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಮೃತ ವಸಂತ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಕರ್ತವ್ಯ ಮುಗಿಸಿ ಖಾಸಗಿ ಬಸ್ ಹತ್ತಿ ಮನೆಗೆ ಹೊರಟಿದ್ದರು. ಈ ಸಂದರ್ಭ ಸೀಟಿನಲ್ಲೇ ವಸಂತ್ ಕುಸಿದಿದ್ದಾರೆ. ನಂತರ ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಅಷ್ಟರ್ಲಲಿಯೇ ಅವರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಪಾಸಣೆ ನಡೆಸಿದ ವೈದ್ಯರು ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *