ನವ ದೆಹಲಿ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಇಂದು ರೈಲು ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಇಲ್ಲಿಯವರೆಗೆ 15 ಜನರು ಸಾವನ್ನಪ್ಪಿದ್ದಾರೆ ಮತ್ತು 60 ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಇದೀಗ ಈ ಅವಘಡದ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪ್ರತಿಕ್ರಿಯಿಸಿ ಸಂತಾಪ ಸೂಚಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರು, ಪಶ್ಚಿಮ ಬಂಗಾಳದ (West Bengal Train) ಜಲ್ಪೈಗುರಿಯಲ್ಲಿ ಕಾಂಚನ್ ಜುಂಗಾ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾಗಿ ಹಲವಾರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವುದು ನನಗೆ ಅತೀವ ದುಃಖ ತಂದಿದೆ ಎಂದು ಹೇಳಿದ್ದಾರೆ. ಇದೇ ವೇಳೆ ನರೇಂದ್ರ ಮೋದಿ (Narendra Modi) ಸರ್ಕಾರವನ್ನು ಟೀಕಿಸಿದರು.
Advertisement
Extremely distressed by the Kanchanjunga Express train collision accident in Jalpaiguri, West Bengal, where many people have lost their lives and several have been injured.
The scenes of the accident are painful. Our heart goes out to the families of the victims. In this hour…
— Mallikarjun Kharge (@kharge) June 17, 2024
Advertisement
ಅಪಘಾತದ ದೃಶ್ಯಗಳನ್ನು ನೋಡಿದಾಗ ಬಹಳ ಬೇಸರವಾಗುತ್ತದೆ. ಸಂತ್ರಸ್ತರ ಕುಟುಂಬಗಳೊಂದಿಗೆ ನಾವಿದ್ದೇವೆ. ಈ ದುಃಖದ ಸಮಯದಲ್ಲಿ, ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇವೆ. ಇನ್ನು ಘಟನೆಯಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇವೆ. ಸಂತ್ರಸ್ತರಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಇದೇ ವೇಳೆ ಖರ್ಗೆ ಒತ್ತಾಯಿಸಿದರು.
Advertisement
Advertisement
ಕಳೆದ 10 ವರ್ಷಗಳಲ್ಲಿ ಮೋದಿ ಸರ್ಕಾರದ ರೈಲ್ವೆ ಸಚಿವಾಲಯವು ಸಂಪೂರ್ಣ ದುರಾಡಳಿತದಲ್ಲಿ ತೊಡಗಿದೆ ಎಂದು ಖರ್ಗೆ ಗಂಭೀರ ಆರೋಪ ಮಾಡಿದರು. ಇದನ್ನೂ ಓದಿ: ಕಳೆದ 3 ದಶಕಗಳಲ್ಲಿ ದೇಶ ಕಂಡ ಡೆಡ್ಲಿ ರೈಲು ದುರಂತಗಳ ಬಗ್ಗೆ ನಿಮಗೆ ಗೊತ್ತಾ?
ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ (Kanchanjungha Express) ಅಸ್ಸಾಂನ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ದಾಗೆ ಚಲಿಸುತ್ತಿದ್ದ ಸಂದರ್ಭ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿವೆ ಎಂದು ವರದಿಗಳು ತಿಳಿಸಿವೆ.