Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಾರ್ಲಿಂಗ್ ಕೃಷ್ಣ ಅಭಿನಯದ ಬ್ರ್ಯಾಟ್ ಚಿತ್ರದ ʻನಾನೇ ನೀನಂತೆʼ ಹಾಡಿಗೆ ಮೆಚ್ಚುಗೆಯ ಸುರಿಮಳೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಡಾರ್ಲಿಂಗ್ ಕೃಷ್ಣ ಅಭಿನಯದ ಬ್ರ್ಯಾಟ್ ಚಿತ್ರದ ʻನಾನೇ ನೀನಂತೆʼ ಹಾಡಿಗೆ ಮೆಚ್ಚುಗೆಯ ಸುರಿಮಳೆ

Cinema

ಡಾರ್ಲಿಂಗ್ ಕೃಷ್ಣ ಅಭಿನಯದ ಬ್ರ್ಯಾಟ್ ಚಿತ್ರದ ʻನಾನೇ ನೀನಂತೆʼ ಹಾಡಿಗೆ ಮೆಚ್ಚುಗೆಯ ಸುರಿಮಳೆ

Public TV
Last updated: July 26, 2025 8:00 pm
Public TV
Share
3 Min Read
Brat
SHARE

ಸದಭಿರುಚಿಯ ಚಿತ್ರಗಳ ನಿರ್ದೇಶಕ ಶಶಾಂಕ್ ನಿರ್ದೇಶನದ, ತಮ್ಮ ನಟನೆಯ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಹಾಗೂ ಮಂಜುನಾಥ್ ಕಂದಕೂರ್ ನಿರ್ಮಾಣದ ʻಬ್ರ್ಯಾಟ್ʼ (BRAT) ಚಿತ್ರ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಮೂಡಿಬರುತ್ತಿದೆ. ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿರುವ ಈ ಚಿತ್ರದ ʻನಾನೇ ನೀನಂತೆʼ ಎಂಬ ಹಾಡು ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.

ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಈ ಹಾಡು ಬಿಡುಗಡೆಯಾಗಿದೆ. ಕನ್ನಡ ಹಾಗೂ ತೆಲುಗಿನಲ್ಲಿ ಈ ಹಾಡನ್ನು ಜನಪ್ರಿಯ ಗಾಯಕ ಸಿದ್ ಶ್ರೀರಾಮ್ ಹಾಡಿದ್ದಾರೆ. ಕನ್ನಡದ ಫಿಮೇಲ್ ವರ್ಷನ್ ʻಸರಿಗಮಪʼ ಖ್ಯಾತಿಯ ಲಹರಿ ಮಹೇಶ್ ಹಾಡಿದ್ದಾರೆ. ಉಳಿದ ನಾಲ್ಕು ಭಾಷೆಗಳಲ್ಲಿ ಫೀಮೇಲ್ ವರ್ಷನ್ ಸಿರೀಶ ಹಾಡಿದ್ದಾರೆ. ಹಿಂದಿಯಲ್ಲಿ ಮೇಲ್ ವರ್ಷನ್ ನಿಹಾಲ್ ತವ್ರು ಹಾಗೂ ತೆಲುಗು – ತಮಿಳಿನಲ್ಲಿ ಶ್ರೀಕಾಂತ್ ಹರಿಹರನ್ ಹಾಡಿದ್ದಾರೆ. ಇದನ್ನೂ ಓದಿ: 200 ಕೋಟಿ ಕ್ಲಬ್ ಸೇರಿದ ಸೆನ್ಸೇಷನ್ `ಸೈಯಾರ’

Brat 1

ಈ ಹಿಂದೆ ಶಶಾಂಕ್, ಅರ್ಜುನ್ ಜನ್ಯ ಹಾಗೂ ಸಿದ್ ಶ್ರೀರಾಮ್ ಅವರ ಕಾಂಬಿನೇಶನ್ ನಲ್ಲಿ ಲವ್ 360 ಚಿತ್ರದ ʻಜಗವೇ ನೀನು ಗೆಳತಿಯೇʼ ಹಾಡು ಭರ್ಜರಿ ಯಶಸ್ಸು ಕಂಡಿತ್ತು‌. ಈಗ ಈ ಹಾಡಿಗೂ ಎಲ್ಲಾ ಭಾಷೆಗಳಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯೂ ಆಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ʻಕೌಸಲ್ಯ ಸುಪ್ರಜಾ ರಾಮʼ ಚಿತ್ರದ ನಂತರ ನನ್ನ ಹಾಗೂ ಶಶಾಂಕ್ ಅವರ ಕಾಂಬಿನೇಶನ್ ನಲ್ಲಿ ಬರುತ್ತಿರುವ ಚಿತ್ರ ಬ್ರ್ಯಾಟ್. ನನ್ನ ಈ ಚಿತ್ರದ ಲುಕ್ ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದಕ್ಕೆ ಕಾರಣರಾದ ನಿರ್ದೇಶಕ ಶಶಾಂಕ್ ಹಾಗೂ ತಂಡಕ್ಕೆ ಧನ್ಯವಾದ. ಇಂದು ಬಿಡುಗಡೆಯಾಗಿರುವ ಹಾಡು ತುಂಬಾ ಚೆನ್ನಾಗಿದೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಸಿದ್ ಶ್ರೀರಾಮ್ ಹಾಗೂ ಲಹರಿ ಅವರ ಗಾಯನ ಹಾಡಿಗೆ ಪೂರಕವಾಗಿದೆ. ಮುಂದಿನ ತಿಂಗಳು ಚಿತ್ರದ ಇನ್ನೊಂದು ಹಾಡು ಬಿಡುಗಡೆಯಾಗಲಿದೆ. ಆ ಹಾಡಂತೂ ನನ್ನ ಮಗಳಿಗೆ ಬಹಳ ಇಷ್ಟ ಎಂದು ನಾಯಕ ಡಾರ್ಲಿಂಗ್ ಕೃಷ್ಣ ತಿಳಿಸಿದರು. ಇದನ್ನೂ ಓದಿ: ನಟ ಪ್ರಥಮ್‌ಗೆ ಡ್ಯಾಗರ್ ತೋರಿಸಿ ಜೀವಬೆದರಿಕೆ – ಬಾಸ್‌ ಬಗ್ಗೆ ಮಾತಾಡ್ತೀಯಾ ಅಂತ ಅವಾಜ್‌

Brat Cinema

ನನ್ನ ಹಾಗೂ ಅರ್ಜುನ್ ಜನ್ಯ ಅವರ ಕಾಂಬಿನೇಶನ್ ನಲ್ಲಿ ಬಂದಿರುವ ಎಲ್ಲಾ ಹಾಡುಗಳು ಅತೀ ಹೆಚ್ಚು ಜನಪ್ರಿಯವಾಗಿದೆ. ಈಗ ಆ ಸಾಲಿಗೆ ʻನಾನೇ ನೀನಂತೆʼ ಹಾಡು ಕೂಡ ಸೇರಲಿದೆ. ನನ್ನ ಸಿನಿ ಜರ್ನಿಯಲ್ಲೇ ಅತೀ ಹೆಚ್ಚು ವೆಚ್ಚದಲ್ಲಿ ಮೂಡಿಬಂದಿರುವ ಹಾಡಿದು. ಈ ಹಾಡಿನ ಟ್ಯೂನ್ ಅಂತಿಮಗೊಳಿಸಲು ಸುಮಾರು 6 ತಿಂಗಳ ಸಮಯ ಬೇಕಾಯಿತು. ನಿರ್ಮಾಪಕ ಮಂಜುನಾಥ್ ಅವರಂತೂ ಯಾವುದೇ ಕೊರತೆ ಬಾರದ ಹಾಗೆ ಈ ಹಾಡನ್ನು ನಿರ್ಮಾಣ ಮಾಡಿದ್ದಾರೆ.

ಕನ್ನಡ ಹಾಗೂ ತೆಲುಗಿನಲ್ಲಿ ಸಿದ್ ಶ್ರೀರಾಮ್ ಅವರ ಧ್ವನಿಯಂತೂ ಹೇಳಿ ಮಾಡಿಸಿದ ಹಾಗಿದೆ. ಹಿಂದಿಯಲ್ಲಿ ಕನ್ನಡದ ಹುಡುಗ ನಹಾಲ್ ತವ್ರು, ತಮಿಳು, ಮಲೆಯಾಳಂ ನಲ್ಲಿ ಶ್ರೀಕಾಂತ್ ಹರಿಹರನ್ ಈ ಹಾಡನ್ನು ಹಾಡಿದ್ದಾರೆ‌. ಕನ್ನಡದಲ್ಲಿ ಫೀಮೇಲ್ ವರ್ಷನ್ ಲಹರಿ ಮಹೇಶ್ ಹಾಡಿದ್ದು , ಉಳಿದ ನಾಲ್ಕು ಭಾಷೆಗಳಲ್ಲಿ ಹೆಣ್ಣು ಧ್ವನಿ ಸಿರೀಶ ಅವರ ಕಂಠಸಿರಿಯಲ್ಲಿ ಮೂಡಿಬಂದಿದೆ. ಕನ್ನಡದಲ್ಲಿ ಈ ಹಾಡನ್ನು ನಾನೇ ಬರೆದಿದ್ದೇನೆ. ಆನಂದ್ ಆಡಿಯೋ ಮೂಲಕ ನಮ್ಮ ಚಿತ್ರದ ಹಾಡು ಬಿಡುಗಡೆಯಾಗಿದೆ. ಸದ್ಯದಲ್ಲೇ ಉಳಿದ ಹಾಡುಗಳು ಸಹ ಬಿಡುಗಡೆಯಾಗಲಿದೆ. ಅಂದುಕೊಂಡ ಹಾಗೆ ಆದರೆ ಅಕ್ಟೋಬರ್ ನಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ಶಶಾಂಕ್ ತಿಳಿಸಿದರು.

Brat Cinema 1 ನಮ್ಮ ಮೊದಲ ನಿರ್ಮಾಣದ ʻಫಸ್ಟ್ ರ‍್ಯಾಂಕ್ ರಾಜುʼ ಚಿತ್ರದ ಗೆಲುವಿಗೆ ನೀವೆಲ್ಲಾ ನೀಡಿದ ಪ್ರೋತ್ಸಾಹವೇ ಕಾರಣ. ಇದು ನಮ್ಮ ಸಂಸ್ಥೆಯ ನಿರ್ಮಾಣದ ಎರಡನೇ ಚಿತ್ರ. ಅರ್ಜುನ್ ಜನ್ಯ ಅವರು ಸಂಗೀತ ಸಂಯೋಜಿಸಿರುವ ಈ ಹಾಡು ಸುಮಧುರವಾಗಿದೆ‌. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಎಂದರು ನಿರ್ಮಾಪಕ ಮಂಜುನಾಥ್ ಕಂದಕೂರ್. ಇದನ್ನೂ ಓದಿ: ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್

ನಾನು ಕನ್ನಡದವಳು. ಕನ್ನಡದಲ್ಲಿ ಇದು ನನ್ನ ಮೊದಲ ಚಿತ್ರ. ಈ ಚಿತ್ರದಲ್ಲಿ ನನ್ನದು ಮಧ್ಯಮವರ್ಗದ ಹುಡುಗಿ ಪಾತ್ರ. ಚಿತ್ರದಲ್ಲೂ ನನ್ನ ಪಾತ್ರದ ಹೆಸರು ಮನಿಶಾ. ಇಂದು ಬಿಡುಗಡೆಯಾಗಿರುವ ʻನಾನೇ ನೀನಂತೆʼ ನನ್ನ ಇಷ್ಟದ ಹಾಡು ಎಂದರು ನಾಯಕಿ ಮನಿಶಾ ಕಂದಕೂರ್.

ಗಾಯಕಿ ಲಹರಿ, ಆನಂದ್ ಆಡಿಯೋ ಶ್ಯಾಮ್, ನೃತ್ಯ ನಿರ್ದೇಶಕ‌ ಕಲೈ ಮಾಸ್ಟರ್ ಹಾಗೂ ಛಾಯಾಗ್ರಾಹಕ ಅಭಿಷೇಕ್ ಕಲ್ಲತ್ತಿ ಸಹ ʻನಾನೇ ನೀನಂತೆʼ ಹಾಡಿನ ಕುರಿತು ಮಾತನಾಡಿದರು.

TAGGED:BRATcinemaDarling Krishnasandalwoodಡಾರ್ಲಿಂಗ್ ಕೃಷ್ಣಬ್ರ್ಯಾಟ್‌ಸಿನಿಮಾ
Share This Article
Facebook Whatsapp Whatsapp Telegram

Cinema news

again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World

You Might Also Like

Modi
Latest

Pariksha Pe Charcha | ಚೀಪ್‌ ಆಗಿ ಸಿಗುತ್ತೆ ಅಂತ ಟೈಂ ವೇಸ್ಟ್‌ ಮಾಡಬೇಡಿ – ಎಕ್ಸಾಂ ಟೆನ್ಷನ್‌ಗೆ ಮೋದಿ ಮಾರ್ಗದರ್ಶಿ

Public TV
By Public TV
52 minutes ago
Sanjay Malhotra
Latest

ಆರ್‌ಬಿಐ ರೆಪೋ ದರ ಯಥಾಸ್ಥಿತಿಯಲ್ಲೇ ಮುಂದುವರಿಕೆ

Public TV
By Public TV
55 minutes ago
Helicopter Rides
Districts

ರಾಯಚೂರು ಜಿಲ್ಲಾ ಉತ್ಸವ | 3,500 ರೂ.ಗೆ ಹೆಲಿ ರೈಡ್‌, ಮುಗಿಬಿದ್ದ ಜನ – ಯಾರಿಗೆಲ್ಲ ಉಚಿತ?

Public TV
By Public TV
1 hour ago
WPL 2026 final rcb captain Smriti Mandhana takes orange cap
Cricket

ಹಿಂದಿನ ದಿನ 103 ಡಿಗ್ರಿ ಜ್ವರ, ಮರುದಿನ ಸ್ಫೋಟಕ ಬ್ಯಾಟಿಂಗ್‌ – ಸ್ಮೃತಿಯ ಬೆಂಕಿ ಆಟ, ಆರ್‌ಸಿಬಿ ಚಾಂಪಿಯನ್‌

Public TV
By Public TV
2 hours ago
CID Raid
Bengaluru City

ಮ್ಯೂಲ್ ಅಕೌಂಟ್ ಸೈಬರ್ ದಂಧೆಗೆ ಸಿಐಡಿ ಶಾಕ್ – ಏಕಕಾಲಕ್ಕೆ ನೂರಾರು ಕಡೆ ದಾಳಿ

Public TV
By Public TV
3 hours ago
Fire breaks out in over 100 sheds of illegal Bengali migrants Bengaluru
Bengaluru City

ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ 100ಕ್ಕೂ ಹೆಚ್ಚು ಶೆಡ್‌ಗಳಿಗೆ ಬೆಂಕಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?