– ಸುಜಾತಾ ಭಟ್ ವಿರುದ್ಧವೂ ಧರ್ಮಸ್ಥಳ ಪೊಲೀಸ್ ಠಾಣೆಗೆ ಕಂಪ್ಲೆಂಟ್
ಮಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ (Darmasthala Case) ಸುಜಾತ ಭಟ್ ಅವರನ್ನ ಮುಂದಿಟ್ಟುಕೊಂಡು ಸುಳ್ಳು ಆರೋಪಗಳನ್ನು ಮಾರುತ್ತಿದ್ದಾರೆಂದು ಆರೋಪಿಸಿ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ಅವರು ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ.
ಮಹೇಶ್‌ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಸಮೀರ್ ಎಂ.ಡಿ ಹಾಗೂ ಸುಜಾತಾ ಭಟ್ ಅವರ ವಿರುದ್ಧ ಪೊಲೀಸ್ ಠಾಣೆಗೆ (Darmasthala Police Station) ದೂರು ನೀಡಿದ್ದಾರೆ. ಇದನ್ನೂ ಓದಿ: Exclusive | ಧರ್ಮಸ್ಥಳ ಪ್ರಕರಣದ ಅನಾಮಿಕನ ಹುಟ್ಟೂರಲ್ಲಿ ʻಪಬ್ಲಿಕ್ ಟಿವಿʼ – ಮಾಸ್ಕ್ ಮ್ಯಾನ್ ಊರು ಯಾವ್ದು? ಓದಿದ್ದೇನು?
ಈ ಕುರಿತು ʻಪಬ್ಲಿಕ್ ಟಿವಿʼ ಜೊತೆಗೆ ಮಾತನಾಡಿರುವ ಸ್ನೇಹಮಯಿ ಕೃಷ್ಣ, ಸುಜಾತ ಭಟ್ ತನಗೆ ಮಗಳಿದ್ದಾಳೆ ಅಂತ ಸುಳ್ಳು ಹೇಳಿದ್ದಾರೆ. ಅವರಿಗೆ ಅನನ್ಯಾ ಭಟ್ ಅನ್ನೋ ಮಗಳೇ ಇಲ್ಲ ಎಂಬುದು ಗೊತ್ತಾಗಿದೆ. ವಾಸಂತಿ ಎನ್ನುವವರ ಫೋಟೋ ತೋರಿಸಿ ಇವಳೇ ನನ್ನ ಮಗಳು ಅನನ್ಯಾ ಭಟ್ ಅಂತ ಹೇಳಿದ್ದಾರೆ. ಪ್ರತಿದಿನ ಒಂದೊಂದು ಸುಳ್ಳು ಹೇಳ್ತಿದ್ದಾರೆ. ಅದಕ್ಕೆ ಅವರ ವಿರುದ್ಧ ದೂರು ಕೊಟ್ಟಿದ್ದೀನಿ. ಜೊತೆಗೆ ಸುಜಾತಾ ಭಟ್ ಅವರನ್ನ ಮುಂದಿಟ್ಟುಕೊಂಡು ಸುಳ್ಳು ಆರೋಪ ಮಾಡಿದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಸಮೀರ್ ಎಂ.ಡಿ ವಿರುದ್ಧ ದೂರು ಕೊಟ್ಟಿದ್ದೇನೆ. ಸೇರಿ ಪುಣ್ಯ ಕ್ಷೇತ್ರದ ವಿರುದ್ಧ ಅವಹೇಳನ ಮಾಡ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Exclusive | ಅನನ್ಯಾ ಭಟ್ ಎಂಬಿಬಿಎಸ್ ಓದಿಲ್ಲ, ಇದೆಲ್ಲ `ಬುರುಡೆ’: ಮಹೇಶ್ ಠಾಕೂರ್