– `ದಾಸ’ನಿಗೆ ಬರ್ತ್‌ಡೇ ವಿಶ್ ಮಾಡಿದ ಧನ್ವೀರ್, ಚಿಕ್ಕಣ್ಣ
ಬೆಂಗಳೂರು: ನಟ ದರ್ಶನ್ (Darshan) 48ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಪತಿ ದರ್ಶನ್ ಜೊತೆಗಿನ ಫೋಟೊ ಹಂಚಿಕೊಂಡು ಪತ್ನಿ ವಿಜಯಲಕ್ಷ್ಮೀ (Vijayalakshmi) ಬರ್ತ್‌ಡೇ (Birthday) ವಿಶ್ ಮಾಡಿದ್ದಾರೆ.
Advertisement
View this post on Instagram
Advertisement
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಜೈಲು ಸೇರಿದ್ದ ಸಂದರ್ಭದಿಂದಲೂ ಜೊತೆಯಾಗಿದ್ದ ನಟ ಧನ್ವೀರ್ (Dhanveer) ಸಹ ಶುಭಾಶಯ ತಿಳಿಸಿದ್ದಾರೆ. ಧನ್ವೀರ್ ದರ್ಶನ್ ಜೊತೆಗಿನ ಫೋಟೋವನ್ನು ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿ, ಸಂತೋಪ ಮತ್ತು ಯಶಸ್ಸು ಸದಾ ನಿಮ್ಮ ಜೊತೆಗಿರಲಿ. ನೀವು ನಡೆವ ಪ್ರತಿ ಹೆಜ್ಜೆಯೂ ಯಶಸ್ಸಿನ ಪಥವಾಗಲಿ. ಹುಟ್ಟುಹಬ್ಬದ ಶುಭಾಶಯಗಳು ಅಣ್ಣ (ಬಾಸ್) #ಉಸಿರಿರುವವರೆಗೂ ಇರ್ತಿವಿ ನಿಮ್ಮಿಂದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ : ದಾಂಪತ್ಯ ಜೀವನಕ್ಕೆ ಕಾಲಿಟ್ಟ ಆ್ಯಕ್ಟರ್ & ಡಾಕ್ಟರ್ – ಮೈಸೂರಲ್ಲಿ ಅದ್ದೂರಿಯಾಗಿ ನಡೆದ ಡಾಲಿ, ಧನ್ಯತಾ ಮದುವೆ
Advertisement
View this post on Instagram
Advertisement
ನಟ ಚಿಕ್ಕಣ್ಣ ಸಹ ತಮ್ಮ ಇನ್‌ಸ್ಟಾ ಖಾತೆಯಲ್ಲಿ, ಹುಟ್ಟುಹಬ್ಬದ ಶುಭಾಶಯಗಳು ಸರ್ ಎಂದು ಬರೆದುಕೊಂಡು ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ.
View this post on Instagram
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಪ್ರತಿವರ್ಷ ಅಭಿಮಾನಿಗಳೊಂದಿಗೆ ಭರ್ಜರಿಯಾಗಿ ಬರ್ತ್‌ಡೇ ಸೆಲೆಬ್ರೆಟ್ ಮಾಡುತ್ತಿದ್ದ ದರ್ಶನ್, ಈ ಬಾರಿ ಅನಾರೋಗ್ಯದ ಕಾರಣ ಇವೆಲ್ಲದರಿಂದಲೂ ದೂರ ಉಳಿದಿದ್ದಾರೆ. ಇದನ್ನೂ ಓದಿ : ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ – ಮೃತರ ಕುಟುಂಬಗಳಿಗೆ ಕೇಂದ್ರದಿಂದ ತಲಾ 10 ಲಕ್ಷ ಪರಿಹಾರ ಘೋಷಣೆ
ಇದೀಗ ಅಭಿಮಾನಿಗಳಿಂದ ದರ್ಶನ್‌ಗೆ ಸೋಷಿಯಲ್ ಮೀಡಿಯಾದಲ್ಲಿ ಶುಭಾಶಯಗಳ ಸುರಿಮಳೆಯೇ ಹರಿದುಬರುತ್ತಿದೆ.