ಕೊಲೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ದರ್ಶನ್ (Darshan) ಬಿಡುಗಡೆಗಾಗಿ ತೂಗುದೀಪ್ ಫ್ಯಾಮಿಲಿ ಈಗ ದೇವರ ಮೊರೆ ಹೋಗಿದ್ದಾರೆ. ದಿನಕರ್ ತೂಗುದೀಪ್ (Dinakar Thoogudeepa) ದಂಪತಿ ಜೊತೆ ನಟ ಚಿಕ್ಕಣ್ಣ ಚಾಮುಂಡಿ ತಾಯಿಯ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ:ಧ್ರುವ ಸರ್ಜಾ ಫ್ಯಾನ್ಸ್‌ಗೆ ಗುಡ್ ನ್ಯೂಸ್- ಜು.29ರಂದು ಹೊರಬೀಳಲಿದೆ ‘ಕೆಡಿ’ ಚಿತ್ರದ ಅಪ್‌ಡೇಟ್
ಮೈಸೂರಿನಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ದರ್ಶನ್ ಸಹೋದರ ದಿನಕರ್ ತೂಗುದೀಪ್ ಕುಟುಂಬದ ಜೊತೆ ಚಿಕ್ಕಣ್ಣ ಕೂಡ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಣ್ಣನನ್ನು ಸಂಕಷ್ಟದಿಂದ ಪಾರು ಮಾಡುವಂತೆ ಪ್ರಾರ್ಥನೆ ಮಾಡಿದ್ದಾರೆ.
ಇನ್ನೂ ಇಂದು (ಜು.26) ಬೆಳಗ್ಗೆ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ವಿಜಯಲಕ್ಷ್ಮಿ ಚಂಡಿಕಾ ಯಾಗ ಮಾಡಿಸಿದ್ದಾರೆ. ದರ್ಶನ್‌ರನ್ನು ಸಂಕಷ್ಟದಿಂದ ಪಾರಾಗಲಿ ಎಂದು ದೇವಿಗೆ ವಿಜಯಲಕ್ಷ್ಮಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.