ಮೈಸೂರು: ಮಾಜಿ ಸಂಸದ ದಿವಂಗತ ಆರ್. ಧ್ರುವನಾರಾಯಣ ಅವರ ಪುತ್ರ ದರ್ಶನ್ ಧ್ರುವನಾರಾಯಣ (Darshan Dhruvanarayana) ಇದೇ ಮೊದಲಬಾರಿಗೆ ಸಾರ್ವಜನಿಕ ವೇದಿಕೆಯಲ್ಲಿ ಮಾತನಾಡಿದ್ದಾರೆ.
ಹೆಚ್.ಡಿ ಕೋಟೆ ತಾಲ್ಲೂಕು ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಕೆಪಿಸಿಸಿ (KPCC) ಕಾರ್ಯಾಧ್ಯಕ್ಷ ದಿವಂಗತ ಆರ್.ಧ್ರುವನಾರಾಯಣ (R Dhruvanarayana) ಅವರ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ಧನ್ಯವಾದ, ಮನೆ ಖಾಲಿ ಮಾಡುವೆ – ಲೋಕಸಭೆಯ ವಸತಿ ಸಮಿತಿ ಪತ್ರಕ್ಕೆ ರಾಗಾ ಉತ್ತರ
`ನಮ್ಮ ತಂದೆ ನಮ್ಮೊಂದಿಗೆ ದೈಹಿಕವಾಗಿ ಇಲ್ಲ. ಆದರೆ ಮಾನಸಿಕವಾಗಿ ಇದ್ದಾರೆ. ನಮ್ಮ ತಂದೆಯವರ ಅಂತಿಮ ಕಾರ್ಯಕ್ಕೆ ರಾಜ್ಯಾದ್ಯಂತ ಜನ ಬಂದಿದ್ದರು. ಕುಟುಂಬಕ್ಕೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು. ಸಿದ್ದರಾಮಯ್ಯ, ಜಾರಕಿಹೊಳಿ ಸೇರಿದಂತೆ ಎಲ್ಲರಿಗೂ ನಾನು ಧನ್ಯವಾದ, ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ದರ್ಶನ್ ಭಾವುಕರಾಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯಾವುದೇ ಕ್ರಮ ಕೈಗೊಂಡಿಲ್ಲ, ಈಗ ಬಿಜೆಪಿ ಮೇಲೆ ಗೂಬೆ ಕೂರಿಸ್ತಿದೆ: ಆರಗ ಜ್ಞಾನೇಂದ್ರ
ನನ್ನ ತಂದೆ ನನಗೆ ಯಾವತ್ತೂ ರಾಜಕೀಯ ಪಾಠ ಹೇಳಿಕೊಡಲಿಲ್ಲ. ಅವರ ಜನಸೇವೆಯನ್ನ ನೋಡಿ ಬೆಳೆದವನು ನಾನು. ನಮ್ಮ ಇಡೀ ಕುಟುಂಬ ಜನಸೇವೆ ಮಾಡುತ್ತಾ ಬಂದಿದೆ. ಇನ್ನಷ್ಟು ಪ್ರಾಮಾಣಿಕ ಪ್ರಯತ್ನ ಮಾಡಲು ಆಶೀರ್ವಾದ ನಮ್ಮ ಕುಟುಂಬದ ಮೇಲೆ ಇರಲಿ. ನನ್ನ ತಂದೆಯ ಮೇಲೆ ಇಟ್ಟಂತೆ ನನ್ನ ಮೇಲೆ ನಂಬಿಕೆ ಇಡಿ. ಉಳಿಸಿಕೊಂಡು ಹೋಗುತ್ತೇನೆ ಎಂದು ಮನವಿ ಮಾಡಿದ್ದಾರೆ.
ನುಡಿ ನಮನ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah), ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಶಾಸಕ ಅನಿಲ್ ಚಿಕ್ಕಮಾದು, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜೆ ವಿಜಯಕುಮಾರ್ ಮೊದಲಾದವರು ಪಾಲ್ಗೊಂಡಿದ್ದರು.