– ಪ್ರಿಸನ್ ಕಾಲ್ ಸಿಸ್ಟಮ್ ಮೂಲಕ ಪತ್ನಿ ಜೊತೆ 5 ನಿಮಿಷ ಮಾತನಾಡಿದ ಆರೋಪಿ
ಬಳ್ಳಾರಿ: ಇಲ್ಲಿನ ಸೆಂಟ್ರಲ್ ಜೈಲಿನಲ್ಲಿರೋ ಕೊಲೆ ಆರೋಪಿ ದರ್ಶನ್ (Darshan) ಪತ್ನಿ ವಿಜಯಲಕ್ಷ್ಮಿ (Vijayalakshmi) ಜೊತೆ ಪ್ರಿಸನ್ ಕಾಲ್ ಸಿಸ್ಟಮ್ ಮೂಲಕ 5 ನಿಮಿಷಗಳ ಕಾಲ ಮಾತನಾಡಿದ್ದಾರೆ.
ಹೈಸೆಕ್ಯೂರಿಟಿ ಸೆಲ್‌ನಿಂದಲೇ ಪ್ರಿಸನ್ ಕಾಲ್ ಸಿಸ್ಟಮ್ ಮೂಲಕ ಮಾತನಾಡಿದ ದರ್ಶನ್, ಪತ್ನಿ ವಿಜಯಲಕ್ಷ್ಮಿ ಜೊತೆ ಮುಂದಿನ ಕಾನೂನು ಹೋರಾಟದ ಬಗ್ಗೆಯೇ ಚರ್ಚಿಸಿದ್ದಾರೆ. ಇದೇ ವೇಳೆ ಪತ್ನಿ ಜೊತೆ ಮಾತನಾಡುವಾಗ ಆರೋಪಿ ದರ್ಶನ್ ಭಾವುಕರಾಗಿದ್ದಾರೆ. ಇದನ್ನೂ ಓದಿ: ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರಾಜ್ಯದಲ್ಲಿ ರದ್ದು ಮಾಡಿ- ಸಿಎಂಗೆ ಕುರುಬೂರು ಶಾಂತಕುಮಾರ್ ಮನವಿ
Advertisement
Advertisement
ಬುಧವಾರ (ಸೆ.11) ಜೈಲಿಗೆ ಬರುವಂತೆ ಪತ್ನಿಗೆ ಆರೋಪಿ ತಿಳಿಸಿದ್ದಾರೆ. ಈ ಬಗ್ಗೆ ಜೈಲಾಧಿಕಾರಿಗಳಿಗೂ ದರ್ಶನ್ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಹಾಗೂ ದರ್ಶನ್ ತಾಯಿ ಮೀನಾ ಬುಧವಾರ ಸಂಜೆ 4 ಗಂಟೆಯ ನಂತರ ಬಳ್ಳಾರಿ ಸೆಂಟ್ರಲ್ ಜೈಲಿಗೆ ಬರಲಿದ್ದಾರೆ ಎಂದು ಜೈಲಾಧಿಕಾರಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
Advertisement
ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಫಾಸ್ಟ್‌ಟ್ರ್ಯಾಕ್ ಕೋರ್ಟ್ ಅಥವಾ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂಬ ಕೂಗೆದ್ದಿದೆ. ಈ ನಿಟ್ಟಿನಲ್ಲಿನ ರಾಜ್ಯ ಸರ್ಕಾರ ಕೂಡ ಚಿಂತನೆ ನಡೆಸಿದೆ. ಇನ್ನೂ ದರ್ಶನ್ ಸೇರಿ ಆರೋಪಿಗಳ ಪರ ವಕೀಲರು, ಚಾರ್ಜ್‌ಶೀಟ್ ಪರಿಶೀಲನೆ ಮಾಡ್ತಿದ್ದು, ಶೀಘ್ರವೇ ಜಾಮೀನು ಕೋರಿ ಅರ್ಜಿ ಸಲ್ಲಿಸಲಿದ್ದಾರೆ. ಇದನ್ನೂ ಓದಿ:Haryana Poll | ಬಿಜೆಪಿಯಿಂದ 21 ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್ – ವಿನೇಶ್ ವಿರುದ್ಧ ಪ್ರಬಲ ಅಭ್ಯರ್ಥಿ ಅಖಾಡಕ್ಕೆ
Advertisement
ದರ್ಶನ್ ಪರ ಸಿ.ವಿ ನಾಗೇಶ್ ವಾದ ಮಂಡಿಸಲಿದ್ದಾರೆ. ಮಧ್ಯೆ, ದರ್ಶನ್ ಬಿಡುಗಡೆಗಾಗಿ ಅವರ ಪತ್ನಿ ವಿಜಯಲಕ್ಷ್ಮಿ ಅಸ್ಸಾಂನ ಕಾಮಾಕ್ಯ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ನಿಲ್ಲಿಸಿ, ದುರ್ಗಾಪೂಜೆಗೆ ಗಮನ ಹರಿಸಿ – ದೀದಿ ಹೇಳಿಕೆಗೆ ಮೃತ ಟ್ರೈನಿ ವೈದ್ಯೆಯ ತಾಯಿ ಆಕ್ರೋಶ