-ತೆನೆಯ ಹೊರೆ ಹೊತ್ತ ಡಿ ಫ್ಯಾನ್ಸ್
ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಂತೆ ದರ್ಶನ್ ಅಭಿಮಾನಿಗಳು ನಿಷ್ಠೆ ಬದಲಿಸಿದ್ದು, ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಬೆಂಬಲಿಸಲು ನಿರ್ಧರಿಸಿದ್ದಾರೆ.
ಹೌದು, ಕಳೆದೊಂದು ವಾರದ ಹಿಂದೆ ದರ್ಶನ್ ಜೊತೆ ಇದ್ದ ಗಿರೀಶ್ ಎಂಬ ಅಭಿಮಾನಿ ಹಾಗೂ ಇನ್ನೂ ಒಂದೂವರೆ ಸಾವಿರ ಯುವಕರು ಜೆಡಿಎಸ್‍ಗೆ ಬೆಂಬಲಿಸಲು ಮುಂದಾಗಿದ್ದಾರೆ. ನಿಖಿಲ್ ಗೆದ್ದರೆ ಜಿಲ್ಲೆಯಲ್ಲಿ ಅಭಿವೃದ್ಧಿ ಆಗಲಿದೆ. ಅವರ ತಂದೆ ಸಿಎಂ ಆಗಿರುವುದರಿಂದ ಅಭಿವೃದ್ಧಿ ಕಾರ್ಯ ಜಿಲ್ಲೆಯಲ್ಲಿ ನಡೆಯುತ್ತದೆ. ಅಲ್ಲದೆ ಜಿಲ್ಲೆಯಲ್ಲಿ ಕಾವೇರಿ ನದಿಯಲ್ಲಿ ಡಿಸ್ನಿ ಲ್ಯಾಂಡ್ ಯೋಜನೆ ಕಾರ್ಯರೂಪಕ್ಕೆ ಬಂದರೆ ಈ ಭಾಗದ ಜನರಿಗೆ ಉದ್ಯೋಗ ಅವಕಾಶ ದೊರಕಲಿದೆ. ಆದರಿಂದ ನಾವು ನಿಖಿಲ್ ಪರ ಪ್ರಚಾರಕ್ಕೆ ಮುಂದಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಇನ್ನೊಂದೆಡೆ ಮೋದಿ ಹಾಗೂ ಬಿಜೆಪಿ ಸುಮಲತಾರಿಗೆ ಬೆಂಬಲ ನೀಡುತ್ತಿರುವುದಕ್ಕೆ ಅಲ್ಪಸಂಖ್ಯಾತರು ಮತ ಕೂಡ ಪಕ್ಷೇತರ ಅಭ್ಯರ್ಥಿ ಕೈತಪ್ಪುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಿಜೆಪಿ ಅವರು ಅಲ್ಪಸಂಖ್ಯಾತರನ್ನು ಕಡೆಗಣಿಸುತ್ತ ಬಂದಿದ್ದಾರೆ. ನಮ್ಮನ್ನು ಟಾರ್ಗೆಟ್ ಮಾಡಿ ಆರೋಪಗಳನ್ನು ಮಾಡುತ್ತಾರೆ. ಧರ್ಮದ ಆಧಾರದ ಮೇಲೆ ರಾಜಕೀಯ ಮಾಡುತ್ತಾರೆ. ಈಗ ಸುಮಲತಾರಿಗೆ ಬಿಜೆಪಿ ಬೆಂಬಲ ನೀಡುತ್ತಿದೆ. ಪರೋಕ್ಷವಾಗಿ ಸುಮಲತಾ ಅವರು ಬಿಜೆಪಿ ಪರ ಇದ್ದಾರೆ ಎನ್ನುವುದನ್ನು ಇದು ತೋರಿಸುತ್ತದೆ. ಆದರಿಂದ ನಾವು ಸುಮಲತಾರಿಗೆ ಬೆಂಬಲ ನೀಡಲ್ಲ ಎಂದು ಅಲ್ಪಸಂಖ್ಯಾತರು ಆರೋಪಿಸಿದ್ದಾರೆ.