ಸ್ಯಾಂಡಲ್‌ವುಡ್ ಡಿಬಾಸ್ (Darshan) ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಭಾಗದಲ್ಲಿ ಡಿಬಾಸ್ ಅಭಿಮಾನಿಗಳ (Darshan Fans) ಸಂಘದಿಂದ 1800 ಮಕ್ಕಳಿಗೆ ಪರೀಕ್ಷಾ ಸಾಮಗ್ರಿಗಳನ್ನು ವಿತರಣೆ ಮಾಡುವುದರ ಮೂಲಕ ಅರ್ಥಪೂರ್ಣವಾಗಿ ದರ್ಶನ್ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಣೆಯನ್ನು ಮಾಡಿದ್ದಾರೆ.
ಡಿಬಾಸ್ ಅಭಿಮಾನಿಗಳ ಸಂಘದ ಅಧ್ಯಕ್ಷ ಮಂಜುನಾಥ್ ಹಾಗೂ ಸಂಗಡಿಗರ ಸಹಕಾರದಿಂದ ಅತ್ತಿಬೆಲೆಯ ಶಿಡ್ಲಬಸಪ್ಪ ಕಲ್ಯಾಣ ಮಂಟಪದಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಪೆನ್ನು ಬುಕ್ಸ್ ಜೊತೆ ದರ್ಶನ್ ಫೋಟೋ ಇರುವ ಪರೀಕ್ಷೆ ಪ್ಯಾಡ್ ಸೇರಿದಂತೆ ಕಲಿಕಾ ಸಾಮಗ್ರಿಗಳನ್ನು ನೀಡಲಾಯಿತು. ಇದನ್ನೂ ಓದಿ:ಡಿಬಾಸ್ ಹುಟ್ಟುಹಬ್ಬಕ್ಕೆ ಶುಭಕೋರಿದ ಸ್ಯಾಂಡಲ್‌ವುಡ್ ತಾರೆಯರು
ಮಕ್ಕಳೊಂದಿಗೆ ಡಿಬಾಸ್ ಹೆಸರಿನ ಕೇಕ್ ಕಟ್ ಮಾಡಿ ದರ್ಶನ್ ಅಭಿನಯದ ಸಾಂಗ್‌ಗಳನ್ನು ಹಾಕಿ ನೃತ್ಯ ಮಾಡಿ ಎಂಜಾಯ್ ಮಾಡಿದ್ದರು. ಅಲ್ಲದೇ ಕಲ್ಯಾಣ ಮಂಟಪ ಸುತ್ತಲೂ ದರ್ಶನ್ ಚಿತ್ರಗಳನ್ನು ಮತ್ತು ಕಟೌಟ್‌ಗಳನ್ನು ಹಾಕಿ ಸಂಭ್ರಮಾಚರಣೆಯನ್ನು ಮಾಡಲಾಯಿತು. ಸುಮಾರು 2000ಕ್ಕೆ ಹೆಚ್ಚು ಮಕ್ಕಳಿಗೆ ಊಟದ ವ್ಯವಸ್ಥೆ ಸಹ ಮಾಡಲಾಗಿತ್ತು. ಜೊತೆಗೆ ಮಧ್ಯಾಹ್ನ 3 ಗಂಟೆ ನಂತರ ಅತ್ತಿಬೆಲೆ ಸರ್ಕಲ್‌ನಲ್ಲಿ ಸುಮಾರು 3 ಸಾವಿರಕ್ಕೂ ಹೆಚ್ಚು ಜನರಿಗೆ ಅತ್ತಿಬೆಲೆ ಫ್ಲೈ ಓವರ್ ಕೆಳಗೆ ಊಟದ ವ್ಯವಸ್ಥೆ ಮಾಡಲಾಗಿದೆ.
ಪ್ರತಿ ವರ್ಷ ಡಿಬಾಸ್ ಹೆಸರಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಸೇವೆ ಮಾಡಬೇಕಂತ ಆಶಯ ಕೂಡ ಇದೆ ಅದನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ದರ್ಶನ್ ಅವರಿಗೆ ಆರೋಗ್ಯ ಸಿಗಲಿ ಇನ್ನು ಎತ್ತರಕ್ಕೆ ಬೆಳೆಯಲಿ ಅಂತ ಫ್ಯಾನ್ಸ್ ಶುಭಕೋರಿದರು.