ಯಜಮಾನ ಶೂಟಿಂಗ್ ಸೆಟ್ಟಿನಲ್ಲಿ ಕಾಣಿಸಿಕೊಂಡ್ರು ಯಜಮಾನಿ – ಫೋಟೋ ವೈರಲ್

Public TV
1 Min Read
DHARSHAN copy

ಬೆಂಗಳೂರು: ಸ್ಯಾಂಡಲ್‍ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸುತ್ತಿರುವ ಬಹು ನಿರೀಕ್ಷಿತ ‘ಯಜಮಾನ’ ಚಿತ್ರದ ಶೂಟಿಂಗ್ ಸ್ಥಳಕ್ಕೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಭೇಟಿ ನೀಡಿದ್ದಾರೆ.

ನಗರದ ಪ್ಯಾಲೇಸ್ ಗ್ರೌಂಡ್‍ನಲ್ಲಿ ಯಜಮಾನ ಚಿತ್ರದ ಹಾಡಿನ ಚಿತ್ರೀಕರಣ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದಾರೆ. ಕೆಲ ಸಮಯ ಚಿತ್ರತಂಡದೊಂದಿಗೆ ಕಾಲ ಕಳೆದ ವಿಜಯಲಕ್ಷ್ಮೀ ಅವರು ದರ್ಶನ್ ರೊಂದಿಗೆ ಮಾತುಕತೆ ನಡೆಸಿ ಬಳಿಕ ಅಲ್ಲಿಂದ ತೆರಳಿದ್ದಾರೆ.

DHARSHAN 1 copy

ಈ ಹಿಂದೆಯೂ ಹಲವು ಬಾರಿ ದರ್ಶನ್  ಅಭಿನಯದ ಸಿನಿಮಾಗಳ ಚಿತ್ರೀಕರಣದ ವೇಳೆ ವಿಜಯಲಕ್ಷ್ಮಿ ಭೇಟಿ ನೀಡಿದ್ದರು. ಆದರೆ ಕೆಲ ವರ್ಷಗಳ ಗ್ಯಾಪ್ ಬಳಿಕ ಪತಿಯ ಸಿನಿಮಾ ಚಿತ್ರೀಕರಣದ ವೇಳೆ ವಿಜಯಲಕ್ಷ್ಮೀ ಕಾಣಿಸಿಕೊಂಡಿದ್ದಾರೆ. ಸದ್ಯ ಇಬ್ಬರೂ ಪರಸ್ಪರ ಮಾತನಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸತತ ಎರಡ್ಮೂರು ತಿಂಗಳಿನಿಂದ ಯಜಮಾನ ಸಿನಿಮಾ ಚಿತ್ರೀಕರಣದಲ್ಲಿ ಭಾಗಹಿಸುತ್ತಿರುವ ದರ್ಶನ್ ನಿರಂತರ ಶೂಟಿಂಗ್‍ನಲ್ಲಿ ತೊಡಗಿಕೊಂಡಿದ್ದಾರೆ. ಮೈಸೂರು, ಬೆಂಗಳೂರಿನಲ್ಲಿ ನಿರ್ಮಿಸಲಾಗಿದ್ದ ವಿಶೇಷವಾದ ಸೆಟ್ಟಿನಲ್ಲಿ ಸಿನಿಮಾ ಚಿತ್ರೀಕರಣ ನಡೆದಿದ್ದು, ಅಂತಿಮ ಹಂತ ತಲುಪಿದೆ. ಖ್ಯಾತ ನಿರ್ದೇಶಕ ಬಿ. ಸುರೇಶ್ ನಿರ್ಮಾಣದಲ್ಲಿ ಸಿನಿಮಾ ಮೂಡಿ ಬರುತ್ತಿದ್ದು, ದರ್ಶನ್ ಜೊತೆಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಸದ್ಯ ಈ ಚಿತ್ರದಲ್ಲಿ ದರ್ಶನ್ ಅವರ ಲುಕ್ ಹೇಗಿದೆ ಎಂದು ಅಭಿಮಾನಿಗಳಲ್ಲಿ ಕುತೂಹಲ ಇದೆ. ದರ್ಶನ್ ರೊಂದಿಗೆ ರಶ್ಮಿಕಾ ಮಂದಣ್ಣ ಜೋಡಿಯನ್ನು ನೋಡಲು ಸಿನಿರಸಿಕರು ಕಾಯುತ್ತಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article