ಬೆಂಗಳೂರು: ಬೆನ್ನು ನೋವಿನಿಂದ ಬಳಲುತ್ತಿದ್ದ ಆರೋಪಿ ನಟ ದರ್ಶನ್ (Actor Darshan) ಚಿಕಿತ್ಸೆಗಾಗಿ ಇಂದು (ನ.1) ಬೆಂಗಳೂರಿನ ಕೆಂಗೇರಿ (Kengeri) ಬಳಿಯಿರುವ ಬಿಜಿಎಸ್ ಆಸ್ಪತ್ರೆಯತ್ತ (BGS Hospital) ಹೊರಟಿದ್ದಾರೆ.
ಮಧ್ಯಾಹ್ನ 2:40 ಸುಮಾರಿಗೆ ದರ್ಶನ್ ಪೊಲೀಸ್ ಭದ್ರತೆಯೊಂದಿಗೆ ಮನೆಯಿಂದ ಹೊರಟಿದ್ದಾರೆ. ಆಸ್ಪತ್ರೆಯಲ್ಲಿ ಮೊದಲು ಬೆನ್ನುನೋವಿಗೆ ಸಂಬಂಧಿಸಿದಂತೆ ಸ್ಕ್ಯಾನಿಂಗ್ ಮಾಡಲಿರುವ ವೈದ್ಯರು, ಬಳಿಕ ಸಮಾಲೋಚನೆ ನಡೆಸಿ ಚಿಕಿತ್ಸೆ ನೀಡುವ ಕೆಲಸ ಆರಂಭಿಸಲಿದ್ದಾರೆ. ಹಿರಿಯ ತಜ್ಞ ವೈದ್ಯ ಡಾ. ನವೀನ್ ಚಿಕಿತ್ಸೆ ನೀಡಲಿದ್ದಾರೆ ಎಂದು ಬಿಜಿಎಸ್ ಆಸ್ಪತ್ರೆಯ ಆಡಳಿತ ಮಂಡಳಿ ಮಾಹಿತಿ ನೀಡಿದೆ.ಇದನ್ನೂ ಓದಿ:ಯುವ ರಾಜ್‌ಕುಮಾರ್ ನಟನೆಯ 2ನೇ ಸಿನಿಮಾಗೆ ಟೈಟಲ್ ಫಿಕ್ಸ್
ಆಸ್ಪತ್ರೆಗೆ ಬಿಗಿ ಭದ್ರತೆ:
ಬಿಜಿಎಸ್ ಆಸ್ಪತ್ರೆಗೆ ದಾಖಲಾಗುವುದಕ್ಕೂ ಮುನ್ನ ದರ್ಶನ್ ಬೆಳಗ್ಗೆ ಮಲ್ಲೇಶ್ವರಂನಲ್ಲಿರೋ (Malleshwaram) ಆರ್ಥೋ ಕ್ಲಿನಿಕ್‌ಗೆ (Ortho Clinic) ಭೇಟಿ ನೀಡಿದ್ದರು. ದರ್ಶನ್ ಚಿಕಿತ್ಸೆಗಾಗಿ ದಾಖಲಾಗಲಿರುವ ಹಿನ್ನೆಲೆ ಆಸ್ಪತ್ರೆ ಸುತ್ತಲೂ ಪೊಲೀಸರ ಬಿಗಿ ಬಂದೋ ಬಸ್ತ್ ನಿಯೋಜಿಸಲಾಗಿದೆ. ಆಸ್ಪತ್ರೆ ಮುಂಭಾಗ ಬ್ಯಾರಿಕೇಡ್ ಅಳವಡಿಸಿದ್ದು, ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.ಇದನ್ನೂ ಓದಿ: ಹಾವೇರಿ ಜಿಲ್ಲೆಗೂ ಕಾಲಿಟ್ಟ ವಕ್ಫ್ ಆಸ್ತಿ ವಿವಾದ- ಊರು ಬಿಟ್ಟ ಮುಸ್ಲಿಂ ಕುಟುಂಬಗಳು