ಬೆಂಗಳೂರು: ದರ್ಶನ್‌ಗೆ (Darshan) ಅಪರಾಧ ಹಿನ್ನೆಲೆ ಇದೆ. ಬೆನ್ನು ನೋವಿನ ಕಾರಣಕ್ಕೆ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ಪಡೆದು ಮರುದಿನವೇ ಚಲನಚಿತ್ರ ಪ್ರದರ್ಶನದಲ್ಲಿ ಭಾಗವಹಿಸಿದ್ದಾರೆ. ಹೀಗಾಗಿ ದರ್ಶನ್‌ಗೆ ನೀಡಲಾಗಿರುವ ಜಾಮೀನು (Bail) ರದ್ದು ಮಾಡಿ ಎಂದು ಬೆಂಗಳೂರು ಪೊಲೀಸರ (Bengaluru Police) ಪರ ವಕೀಲರು ಸುಪ್ರೀಂ ಕೋರ್ಟ್‌ಗೆ (Supreme Court) ಲಿಖಿತ ರೂಪದಲ್ಲಿ ವಾದ ಸಲ್ಲಿಸಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ದರ್ಶನ್ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ ಜಾಮೀನನ್ನು ರದ್ದು ಮಾಡುವಂತೆ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಈಗ ತೀರ್ಪನ್ನು ಕಾಯ್ದಿರಿಸಿದೆ. ಇದನ್ನೂ ಓದಿ: ಅಪಹರಣಕ್ಕೆ ಸೂಚನೆ ನೀಡಿಲ್ಲ, ಯಾವುದೇ ಪುರಾವೆ ಇಲ್ಲ – ಜಾಮೀನು ರದ್ದು ಮಾಡ್ಬೇಡಿ: ದರ್ಶನ್ ವಾದ ಏನು?
ಜುಲೈ 24 ರಂದು ನಡೆದ ಕೊನೆಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠ ನಿಮ್ಮ ವಾದ-ಪ್ರತಿವಾದವನ್ನು ಮೂರು ಪುಟಗಳಲ್ಲಿ ಸಂಕ್ಷಿಪ್ತವಾಗಿ ಒಂದು ವಾರದಲ್ಲಿ ತಿಳಿಸಿ ಎಂದು ಸೂಚಿಸಿದ್ದರು. ಅದರಂತೆ ಪವಿತ್ರಾ ಗೌಡ, ದರ್ಶನ್ ಮತ್ತು ಬೆಂಗಳೂರು ಪೊಲೀಸರ ಪರ ವಕೀಲರು ಲಿಖಿತ ರೂಪದಲ್ಲಿ ವಾದವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಚಾಮುಂಡಿ ಬೆಟ್ಟಕ್ಕೆ ದರ್ಶನ್ ದಿಢೀರ್ ಭೇಟಿ
ಬೆಂಗಳೂರು ಪೊಲೀಸರ ಪರ ವಕೀಲರ ವಾದ ಏನು?
ಮೃತ ರೇಣುಕಾಸ್ವಾಮಿ ದರ್ಶನ್ ಅಭಿಮಾನಿಯಾಗಿದ್ದ. ದರ್ಶನ್ ಲಿವ್-ಇನ್ ಸಂಬಂಧದಲ್ಲಿದ್ದ ಪವಿತ್ರಾ ಗೌಡಗೆ ಇನ್ಸ್ಟಾಗ್ರಾಂನಲ್ಲಿ ಅವಹೇಳನಕಾರಿ ಸಂದೇಶಗಳನ್ನು ಕಳುಹಿಸಿದ್ದ. ಇದರಿಂದ ರೇಣುಕಾಸ್ವಾಮಿಯನ್ನು ಅಪಹರಿಸಿ, ಪಟ್ಟಣಗೆರೆಯ ಶೆಡ್‌ನಲ್ಲಿ ಕೊಲೆ ಮಾಡಲಾಯಿತು. ಆರೋಪಿಗಳು ಕೊಲೆ ನಡೆದ ಸ್ಥಳದಲ್ಲಿದ್ದರು ಎನ್ನುವುದು ತನಿಖೆಯಿಂದ ಬಯಲಾಗಿದೆ. ಅಪಹರಣದ ಸಮಯದಲ್ಲಿ ಮತ್ತು ಕೊಲೆ ನಡೆದ ಸ್ಥಳದಲ್ಲಿ ಆರೋಪಿಗಳು ಇದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮಗಳಿದ್ದಾಳೆ, ಜಾಮೀನು ರದ್ದು ಮಾಡಬೇಡಿ: ಸುಪ್ರೀಂಗೆ ಪವಿತ್ರಾ ಗೌಡ ಮನವಿ
ಪಟ್ಟಣಗೆರೆಯ ಶೆಡ್‌ಗೆ ಆರೋಪಿಗಳು, ಮೃತ ವ್ಯಕ್ತಿ ಪ್ರವೇಶಿಸುವುದನ್ನು ಐವರು ಸಾಕ್ಷಿಗಳು ನೋಡಿದ್ದಾರೆ. ಕೊಲೆ ನಡೆದ ಸ್ಥಳದಿಂದ ಸಂಗ್ರಹಿಸಲಾದ ಮಣ್ಣಿನ ಮಾದರಿ ಮತ್ತು ಎ2 ದರ್ಶನ್, ಎ4 ರಾಘವೇಂದ್ರ, ಎ5 ನಂದೀಶ್ ಮತ್ತು ಎ11 ನಾಗರಾಜು ಅವರ ಪಾದರಕ್ಷೆಗಳಿಂದ ಸಂಗ್ರಹಿಸಲಾದ ಮಣ್ಣಿನ ಮಾದರಿಗಳು ಹೊಂದಾಣಿಕೆಯಾಗುತ್ತವೆ. ಡಿಎನ್‌ಎ ವಿಶ್ಲೇಷಣೆಯಿಂದ ಮೃತ ರೇಣುಕಾಸ್ವಾಮಿ ರಕ್ತದ ಕಲೆಗಳು ಹಲವು ಆರೋಪಿ ಬಟ್ಟೆಗಳ ಮೇಲೆ ಕಂಡುಬಂದಿವೆ. ಕೊಲೆ ನಡೆದ ಸಮಯದಲ್ಲಿ ಎ1 ಪವಿತ್ರಾ ಗೌಡ ಮತ್ತು ಎ2 ದರ್ಶನ್ ಇಬ್ಬರೂ ಸಕ್ರಿಯವಾಗಿ ಭಾಗಿಯಾಗಿದ್ದರು. ಹೈಕೋರ್ಟ್ನ ಜಾಮೀನು ನೀಡುವ ತೀರ್ಪು ಸರಿಯಾಗಿಲ್ಲ ಮತ್ತು ದಾಖಲೆಗಳಿಗೆ ವಿರುದ್ಧವಾಗಿದೆ. ಕೊಲೆ ಮಾಡಲು ಬಳಸಿದ ಆಯುಧಗಳು ಮಾರಕವಲ್ಲ ಎಂದು ಹೈಕೋರ್ಟ್ ಹೇಳಿರುವುದು ತಪ್ಪು. ಮೃತನ ಮೇಲಿನ ಗಾಯಗಳು ಇದನ್ನು ಸುಳ್ಳಾಗಿಸುತ್ತವೆ. ಇದನ್ನೂ ಓದಿ: ವೆಬ್ ಸಿರೀಸ್‌ಗಾಗಿ ಬಣ್ಣ ಹಚ್ಚಿದ ಲೂಸಿಯಾ ನಿರ್ದೇಶಕ ಪವನ್
ಸಾಕ್ಷಿಯಾದ ಪುನೀತ್ ಹೇಳಿಕೆಯನ್ನು ತಡವಾಗಿ ದಾಖಲಿಸಲಾಗಿದೆ ಎಂಬ ಕಾರಣಕ್ಕೆ ಅನುಮಾನಿಸಿರುವುದು ಸರಿಯಲ್ಲ. ಈ ತಡಕ್ಕೆ ಸೂಕ್ತ ಕಾರಣಗಳನ್ನು ನೀಡಲಾಗಿದೆ ಎಂದು ಸರ್ಕಾರ ಹೇಳಿದೆ. ಪ್ರಕರಣದಲ್ಲಿ ಸೂಕ್ತ ವಿಧಿ ವಿಜ್ಞಾನ, ಎಲೆಕ್ಟ್ರಾನಿಕ್ ಮತ್ತು ಸಿಡಿಆರ್ ಪುರಾವೆಗಳಿವೆ ಎಂದು ಹೈಕೋರ್ಟ್ ಪರಿಗಣಿಸಿಲ್ಲ. ಜಾಮೀನು ವಿಚಾರಣೆಯ ಹಂತದಲ್ಲಿ ಹೈಕೋರ್ಟ್ ‘ಮಿನಿ ಟ್ರಯಲ್’ ನಡೆಸಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಉಕ್ಕು ವಲಯ ಅಭಿವೃದ್ಧಿ – ಒಡಿಶಾ ಮುಖ್ಯಮಂತ್ರಿ ಜೊತೆ ಹೆಚ್‌ಡಿಕೆ ಚರ್ಚೆ