– ದರ್ಶನ್‌ಗೆ ಕಾಲಿನಲ್ಲಿ ಫಂಗಸ್ ಆಗಿಲ್ಲ, ಚರ್ಮ ಒಡೆದಿದೆ ಅಷ್ಟೇ
– ಎಲ್ಲಾ ಖೈದಿಗಳಿಗೆ ಟಿವಿ ಕೊಡೋಕಾಗಲ್ಲ; ಸೊಳ್ಳೆಬತ್ತಿ, ಬಾಚಣಿಗೆಯೂ ಕೊಡುವಂತಿಲ್ಲ
ಬೆಂಗಳೂರು: ಹಾಸಿಗೆ, ದಿಂಬು ಸೇರಿದಂತೆ ಜೈಲಿನಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಕೇಳಿಕೊಂಡಿದ್ದ ಕೊಲೆ ಆರೋಪಿ, ನಟ ದರ್ಶನ್‌ಗೆ ಕಾನೂನು ಸೇವಾ ಪ್ರಾಧಿಕಾರದ (Legal Services Authority) ವರದಿ ಮಾಸ್ಟರ್ ಸ್ಟ್ರೋಕ್ ಕೊಟ್ಟಿದೆ. ದರ್ಶನ್‌ಗೆ ಬಿಸಿಲು ಹೊರತುಪಡಿಸಿದ್ರೆ ಜೈಲು ಮ್ಯಾನ್ಯುವಲ್ ಪ್ರಕಾರ, ಉಳಿದೆಲ್ಲ ಸೌಲಭ್ಯಗಳು ಸಿಗುತ್ತಿವೆ ಎಂದು ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಕೋರ್ಟ್‌ಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ. ದರ್ಶನ್ (Darshan) ಫಂಗಸ್ ನಾಟಕಕ್ಕೂ ವರದಿಯಲ್ಲಿ ಉತ್ತರ ಕೊಡಲಾಗಿದೆ.
ಪ್ರಾಧಿಕಾರದ ವರದಿಯಲ್ಲಿ ಏನಿದೆ…? ದರ್ಶನ್‌ಗೆ ಏನು ಸೌಲಭ್ಯ ಸಿಕ್ಕಿದೆ…?
ದರ್ಶನ್ ಇರುವ ಬ್ಯಾರಕ್‌ನಲ್ಲಿ 1 ಇಂಡಿಯನ್ ಟಾಯ್ಲೆಟ್, 2 ವೆಸ್ಟ್ರನ್ ಟಾಯ್ಲೆಟ್ ಇದೆ. ದರ್ಶನ್ 2 ಬಾತ್ ರೂಂಗಳು (ಸ್ನಾನಗೃಹ) ಇವೆ. ದರ್ಶನ್ ಬ್ಯಾರಕ್‌ನಲ್ಲಿ ಸಿಬ್ಬಂದಿಯ ಬಾಡಿ ಓರ್ನ್ ಕ್ಯಾಮೆರಾ ಕೂಡ ಪರಿಶೀಲಿಸಲಾಗಿದೆ. ದರ್ಶನ್ ಇರುವ ಬ್ಯಾರಕ್‌ನಲ್ಲಿ ಅಗತ್ಯ ಬೆಳಕಿನ ವ್ಯವಸ್ಥೆ ಇದೆ ಎಂದು ಹೇಳಿದೆ.
ಇನ್ನೂ ಇಡೀ ರಾತ್ರಿ ಲೈಟ್ ಇರೋದ್ರಿಂದ ನಿದ್ರೆಗೆ ಸಮಸ್ಯೆಯಾಗ್ತಿದೆ. ಸಂಜೆ 6 ಗಂಟೆಗೆ ಲೈಟ್ ಹಾಕೋದ್ರಿಂದ ನಿದ್ರೆ ಮಾಡೋದಕ್ಕೆ ಆಗ್ತಿಲ್ಲ ಅನ್ನೋದು ದರ್ಶನ್ ಆರೋಪ. ಆದ್ರೆ ಕೈದಿಗಳ (Prisoners) ಭದ್ರತೆಯ ಕಾರಣಕ್ಕೆ ಇಡೀ ರಾತ್ರಿ ಲೈಟ್ ಹಾಕಲಾಗುತ್ತೆ.
ದರ್ಶನ್ ದಿಂಬು ಹಾಸಿಗೆ ಕೇಳಿದ್ದಾರೆ. ಶಿಕ್ಷಿತ ಅಪರಾಧಿಗಳಿಗೆ (ಸಜಾ ಖೈದಿ) ಮಾತ್ರ ಹಾಸಿಗೆ, ದಿಂಬು ಹೊದಿಕೆ ನೀಡಲು ಅವಕಾಶ ಇದೆ. ವಿಚಾರಾಣಾಧೀನ ಕೈದಿಗೆ ಹಾಸಿಗೆ, ದಿಂಬು ನೀಡಲು ಜೈಲ್ ಮ್ಯಾನುವಲ್‌ನಲ್ಲಿ ಅವಕಾಶ ಇಲ್ಲ. ಅಲ್ಲದೇ ದರ್ಶನ್ ಸೆಲೆಬ್ರಿಟಿ ಆಗಿರೋದ್ರಿಂದ ಕಾರಿಡಾರ್‌ನಲ್ಲಿ ವಾಕಿಂಗ್ ಮಾಡುವಾಗ ಇತರೆ ಕೈದಿಗಳು ಕಿರುಚುತ್ತಾರೆ. ಅಕ್ಕಪಕ್ಕದ ಅಪಾರ್ಟ್‌ಮೆಂಟ್‌ಗಳಿಂದ ದರ್ಶನ್ ಫೋಟೋ ತೆಗೆಯುವ ಸಾಧ್ಯತೆ ಇದೆ. ಆದ್ದರಿಂದ ಜೈಲು ಮ್ಯಾನುವಲ್ ಪ್ರಕಾರ 1 ಗಂಟೆಗೆ ವಾಕಿಂಗ್‌ಗೆ, ಆಟಕ್ಕೆ ಅವಕಾಶ ಕೊಡಲಾಗಿದೆ. ಎಲ್ಲ ಸೌಲಭ್ಯಗಳನ್ನ ನೀಡಲಾಗಿದೆ. ಅಗತ್ಯಬಿದ್ದರೆ ಜೈಲಿನಲ್ಲಿ ಶಿಸ್ತುಪಾಲನೆ, ನಿರ್ವಹಣೆಗಾಗಿ ವಾಕಿಂಗ್/ಆಟಕ್ಕೂ ನಿರ್ಬಂಧ ಏರಬಹುದು ಎಂದು ಕೂಡ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಟಿವಿ, ಕನ್ನಡಿ, ಬಾಚಣಿಗೆ ಕೊಡೋಕಾಗಲ್ಲ
ದರ್ಶನ್ ಟಿವಿ ಕೇಳಿದ್ದಾನೆ, ಆದ್ರೆ ಎಲ್ಲಾ ಖೈದಿಗಳಿಗೂ ಟಿವಿ ನೀಡಲು ಅವಕಾಶ ಇಲ್ಲ. ಎಲ್ಲಾ ಬ್ಯಾರಕ್ ಅಲ್ಲಿ ಕೂಡ ಟಿವಿ ಸೌಲಭ್ಯ ಮಾಡಲು ಸಾಧ್ಯವಿಲ್ಲ. ಫೋನ್‌ನಲ್ಲಿ ಮಾತಾಡುವಾಗ ಸ್ಪೀಕರ್ ಆನ್ ಮಾಡ್ತಾರೆ ಎಂಬ ಆರೋಪವನ್ನು ದರ್ಶನ್ ಮಾಡಿದ್ದಾರೆ. ಆರೋಪಿಗಳ ಸುರಕ್ಷತೆ ದೃಷ್ಟಿಯಿಂದ ಸ್ಪೀಕರ್ ಆನ್ ಮಾಡುವುದು ನಿಯಮ. ಏಕೆಂದ್ರೆ ಖೈದಿಗಳಿಗೆ ಹೇಳಿ ಫೋನ್‌ಕಾಲ್ ರೆಕಾರ್ಡ್ ಮಾಡುವ ಅವಕಾಶ ಇದೆ.
ಫಂಗಸ್ ನಾಟಕಕ್ಕೂ ಉತ್ತರ
ಇನ್ನೂ ದರ್ಶನ್ ಕಾಲಿನಲ್ಲಿ ಫಂಗಸ್ ಬಂದಿದೆ ಅಂತ ದರ್ಶನ್ ಆರೋಪ ಮಾಡಿದ್ದಾರೆ. ಆದ್ರೆ ಅದು ಫಂಗಸ್ ಅಲ್ಲ, ಚರ್ಮ ಒಡೆದಿರೋದು (ಕಾಲಿನಲ್ಲಿ ಆಗಿರೋ ಬಿರುಕು) ಅಷ್ಟೇ. ಚರ್ಮರೋಗ ತಜ್ಞೆ ಡಾ.ಜ್ಯೋತಿ ಬಾಯ್ ಅವರಿಂದ ದರ್ಶನ್‌ಗೆ ಚಿಕಿತ್ಸೆ ಕೊಡಿಸಲಾಗಿದೆ. ಜೊತೆಗೆ ಜೈಲಿನ ವೈದ್ಯರಿಂದ ಫಿಸಿಯೋ ತೆರಪಿ ಕೂಡ ಮಾಡಿಸಲಾಗಿದೆ. ಸೊಳ್ಳೆಬತ್ತಿ, ಕನ್ನಡಿ ಮತ್ತು ಬಾಚಣಿಗೆ ನೀಡಿಲ್ಲ ಎಂಬುದು ದರ್ಶನ್ ಆರೋಪ, ಶಿಕ್ಷಿತ ಅಪರಾಧಿಗೆ ಮಾತ್ರ ಇದೆಲ್ಲ ನೀಡಲು ಅವಕಾಶ ಇದೆ. ವಿಚಾರಾಣಾಧೀನ ಖೈದಿಗಳಿಗೆ ನೀಡಲು ಅವಕಾಶ ಇಲ್ಲ. ಅಲ್ಲದೇ ಕನ್ನಡಿ ಬಾಚಣಿಗೆ ನೀಡಿದ್ರೆ ಅನಾಹುತ ಆಗುವ ಸಾಧ್ಯತೆ ಇದೆ. ಹಾಗಾಗಿ ಹೆಚ್ಚುವರಿ ಸೌಲಭ್ಯ ನೀಡೋಕಾಗೋದಿಲ್ಲ ಎಂದು ಕಾನೂನು ಸೇವಾ ಪ್ರಾಧಿಕಾರ ಕೋರ್ಟ್‌ಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ.