ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಸೆಷನ್ಸ್ ಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಿ ಕೊಲೆ ಆರೋಪಿ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರದೋಷ್ ಅವರನ್ನ ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸಿರುವ ಸೆಷನ್ಸ್ ಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ಕೋರಿ ದರ್ಶನ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಪ್ರದೋಷ್ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ.
ಮಾಫಿ ಸಾಕ್ಷಿ ಕ್ರಮಬದ್ಧತೆ ಪ್ರಶ್ನಿಸಿದ ದರ್ಶನ್
ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವ ಕ್ರಮದ ಕಾನೂನುಬದ್ಧತೆಯನ್ನ ದರ್ಶನ್ ತಮ್ಮ ಅರ್ಜಿಯಲ್ಲಿ ಪ್ರಶ್ನಿಸಿದ್ದಾರೆ. ಮಾಫಿ ಸಾಕ್ಷಿಯಾಗಿ ಹೇಳಿಕೆ ನೀಡಲು ಪ್ರದೋಷ್ ಅವರಿಗೆ ಸೆಷನ್ಸ್ ಕೋರ್ಟ್ ಈಗಾಗಲೇ ಸಮನ್ಸ್ ಜಾರಿ ಮಾಡಿದೆ.

ಸೆಷನ್ಸ್ ಕೋರ್ಟ್ ಆದೇಶಕ್ಕೆ ತಡೆ ಕೋರಿ ಅರ್ಜಿ
ಮಾಫಿ ಸಾಕ್ಷಿ ಸಂಬಂಧ ಸೆಷನ್ಸ್ ಕೋರ್ಟ್ ನೀಡಿರುವ ಆದೇಶಕ್ಕೆ ತಡೆ ನೀಡಬೇಕು ಹಾಗೂ ಆ ಆದೇಶವನ್ನ ರದ್ದುಗೊಳಿಸಬೇಕು ಎಂದು ದರ್ಶನ್ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯುವ ಸಾಧ್ಯತೆ ಇದೆ.
ಪ್ರಕರಣದ ಮುಂದಿನ ಬೆಳವಣಿಗೆ ಇದೀಗ ಹೈಕೋರ್ಟ್ ವಿಚಾರಣೆಯತ್ತ ಗಮನ ಸೆಳೆದಿದೆ.
