ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ಆರೋಪಿ ನಟ ದರ್ಶನ್ (Actor Darshan) ವಕೀಲರನ್ನು ಬದಲಾಯಿಸಿದ್ದಾರೆ. ಈ ಬೆನ್ನಲ್ಲೇ ನೂತನ ವಕೀಲರ ಮೂಲಕ ಪ್ರಕರಣದ 60 ಸಾಕ್ಷಿಗಳ ವಿಚಾರಣೆಗೆ ನಿಗದಿಪಡಿಸಲಾಗಿರುವ ಒಂದು ವರ್ಷದ ಗಡುವನ್ನು ಕಡಿತಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ (Supreme Court) ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ. ಒಂದು ವರ್ಷದ ಅವಧಿಯನ್ನು ಮರುಪರಿಶೀಲಿಸಿ, ಕಡಿಮೆ ಮಾಡುವಂತೆ ಅರ್ಜಿಯಲ್ಲಿ ಕೋರಲಾಗಿದೆ.
ಕೇಸ್ ವಾದದಿಂದ ವಕೀಲ ಸುನಿಲ್ ಕುಮಾರ್ ಹಿಂದೆ ಸರಿದು 59ನೇ ಸೆಷನ್ಸ್ ನ್ಯಾಯಾಲಯಕ್ಕೆ ಮೆಮೋ ಸಲ್ಲಿಸಿಕೆ ಮಾಡಿದ್ದಾರೆ. ದರ್ಶನ್, ಲಕ್ಷ್ಮಣ್ ಮತ್ತು ನಾಗರಾಜ್ ಸೇರಿದಂತೆ ಮೂವರು ಆರೋಪಿಗಳ ಪರ ವಕಾಲತ್ತಿನಿಂದ ಹಿಂದೆ ಸರಿಯೋದಾಗಿ ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ನ್ಯಾಯಾಲಯವು ದರ್ಶನ್‌ಗೆ, ಹಿರಿಯ ವಕೀಲ ಹಷ್ಮತ್ ಪಾಷಾ ನಿಮ್ಮ ಪರ ವಕಾಲತ್ತು ಹಾಕಿದ್ದಾರೆ ಎಂದು ತಿಳಿಸಿತು. ಇದನ್ನೂ ಓದಿ: ಬಾಸ್ ಸಿನಿಮಾ ಬಿಡುಗಡೆಗೆ ತಾತ್ಕಾಲಿಕ ನಿರ್ಬಂಧ
ಪ್ರಕರಣದ ದಾಖಲೆಗಳನ್ನು ನೂತನ ವಕೀಲರಿಗೆ ಹಸ್ತಾಂತರಿಸುವಂತೆ ಕೋರ್ಟ್ ಸೂಚಿಸಿತು. ದಾಖಲೆಗಳನ್ನು ಈಗಾಗಲೇ ಕುಟುಂಬಸ್ಥರಿಗೆ ನೀಡಲಾಗಿದೆ ಎಂದು ಸುನೀಲ್ ಪರ ವಕೀಲರು ಕೋರ್ಟ್‌ಗೆ ತಿಳಿಸಿದರು. ಇದನ್ನೂ ಓದಿ: ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ ಪ್ರಕರಣ – ಮೂವರು ಆರೋಪಿಗಳ ಜಾಮೀನು ಅರ್ಜಿ ವಜಾ
