ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಪವಿತ್ರಾಗೌಡ (Pavithra Gowda) ಹಾಗೂ ದರ್ಶನ್ (Darshan) ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಈ ಕುರಿತು ಪ್ರತಿಕ್ರಿಯಿಸಿದ್ದು, ನ್ಯಾಯಾಂಗ, ಪೊಲೀಸ್ ಇಲಾಖೆ ಮೇಲೆ ನಮಗೆ ನಂಬಿಕೆ, ಗೌರವ ಇದೆ. ನ್ಯಾಯಾಲಯದ ತೀರ್ಪನ್ನು ಗೌರವಿಸುತ್ತೇವೆ ಎಂದಿದ್ದಾರೆ.
ಡಿ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಪವಿತ್ರಾಗೌಡ ಹಾಗೂ ಎ2 ದರ್ಶನ್ ಜಾಮೀನು ಅರ್ಜಿಯನ್ನು ನ್ಯಾಯಾಲಯ ಸೋಮವಾರ ವಜಾ ಗೊಳಿಸಿದೆ. ಈ ಕುರಿತು ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಶಿನಾಥಯ್ಯ, ಎಸ್‌ಪಿಪಿ ಪ್ರಸನ್ನ ಅವರಿಂದ ಉತ್ತಮ ವಾದ ಮಂಡನೆ ಆಗಿದೆ. ಆರೋಪಿಗಳ ಜಾಮೀನು ಅರ್ಜಿ ವಜಾ ಆಗಿದೆ. ನ್ಯಾಯಾಂಗದ ಮೇಲೆ ಗೌರವವಿದೆ. ಜಾಮೀನು ಅರ್ಜಿ ವಜಾಗೊಳಿಸಿದ್ದನ್ನು ನಾವು ಸ್ವಾಗತಿಸುತ್ತೇವೆ. ಆರೋಪಿಗಳಿಗೆ ಶಿಕ್ಷೆ ಬಗ್ಗೆ ಕೋರ್ಟ್ ಸೂಕ್ತ ತೀರ್ಮಾನ ಮಾಡಲಿದೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯಪಾಲ ಗೆಹ್ಲೋಟ್‌ಗೆ ಈಗ Z ಶ್ರೇಣಿಯ ಭದ್ರತೆ
ಇನ್ನು ಈ ಕುರಿತು ರೇಣುಕಾಸ್ವಾಮಿ ಚಿಕ್ಕಪ್ಪ ಷಡಕ್ಷರಯ್ಯ ಮಾತನಾಡಿ, ನ್ಯಾಯಾಂಗ, ಪೊಲೀಸ್ ಇಲಾಖೆ ಮೇಲೆ ವಿಶ್ವಾಸವಿದೆ. ಹತ್ಯೆ ಪ್ರಕರಣದ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಲಿ. ಶೀಘ್ರಗತಿ ಕೋರ್ಟ್ ಮೂಲಕ ಪ್ರಕರಣದ ಬಗ್ಗೆ ತನಿಖೆ ಆಗಲಿ. ರೇಣುಕಾಸ್ವಾಮಿ ಪತ್ನಿ ಸಹನಾಗೆ ಮುಂದಿನ ತಿಂಗಳು ಹೆರಿಗೆ ಆಗಲಿದೆ. ಸರ್ಕಾರ ಸಹನಾಳ ಜೀವನೋಪಾಯಕ್ಕೆ ನೆರವು ನೀಡಬೇಕಿದೆ. ಸರ್ಕಾರಿ ನೌಕರಿ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿ ಎಂದರು. ಇದನ್ನೂ ಓದಿ: ಕೆಲವೇ ದಿನಗಳಲ್ಲಿ ಕೆಲವು ರಾಜಕೀಯ ಮುಖಂಡರು ಲೈನ್‌ನಲ್ಲಿ ನಿಲ್ಲುವ ಕಾಲ ಬರುತ್ತೆ – ಸಿಎಂ ವಿರುದ್ಧ ರೇವಣ್ಣ ಕಿಡಿ