ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದಲ್ಲಿರುವ ಐತಿಹಾಸಿಕ ದೊಡ್ಡ ಬಸವೇಶ್ವರ ಮೂರ್ತಿ ಜೊತೆಗೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ ಭಾವಚಿತ್ರಕ್ಕೂ ಪೂಜೆ ಮಾಡಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಆಕ್ರೋಶ ಭುಗಿಲೆದ್ದಿದೆ. ಭಾನುವಾರ ಅಮವಾಸ್ಯೆ ದಿನದಂದು ನಟ ದರ್ಶನ ಪೋಟೋಗಳಿಗೆ ಪೂಜೆ ಮಾಡಲಾಗಿದೆ. ವಿಶೇಷ ಧಾರ್ಮಿಕ ಪೂಜೆಯ ಮೂಲಕ ಮೂರ್ತಿ ಕೆಳಗೆ ದರ್ಶನ್ ಪೋಟೋ ಇಟ್ಟು ಪೂಜೆ ಸಲ್ಲಿಕೆ ಮಾಡಲಾಗಿದೆ.
Advertisement
ಅರ್ಚಕರೇ ದರ್ಶನ್ ಅವರ ಪೋಟೋ ಇಟ್ಟು ಪೂಜೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ನಟ ದರ್ಶನ ಅವರ ಐದಾರು ಭಾವಚಿತ್ರಗಳನ್ನ ಬಸವೇಶ್ವರರ ಮೂರ್ತಿಯ ಅಕ್ಕ-ಪಕ್ಕ ಇಟ್ಟು ಪೂಜೆ ಮಾಡಲಾಗಿದೆ. ಸದ್ಯ ಪೂಜೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಮೂರ್ತಿ ಕೆಳಗೆ ನಟನ ಭಾವಚಿತ್ರ ಹಾಕಿದ ಹಿನ್ನಲೆ ಪರ ವಿರೋಧ ಚರ್ಚೆ ಶುರುವಾಗಿದೆ.
Advertisement
Advertisement
ಬಳ್ಳಾರಿಯ ಕುರುಗೋಡು ಪಟ್ಟಣದ ಐತಿಹಾಸಿಕ ದೊಡ್ಡಬಸವೇಶ್ವರ ದೇವಸ್ಥಾನದಲ್ಲಿ ನಟ ದರ್ಶನ್ ಪೋಟೊ ಇಟ್ಟು ಪೂಜೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೂಜೆ ಮಾಡಿ ಮಂಗಳಾರತಿ ಮಾಡಿದ ಅರ್ಚಕ ಮಲ್ಲಿ ಎನ್ನುವಾತನನ್ನ ಅರ್ಚಕ ಸ್ಥಾನದಿಂದ ಅಮಾನತು ಮಾಡಲಾಗಿದೆ. ದೇವಸ್ಥಾನದ ರೂಢಿ ಸಂಪ್ರದಾಯಕ್ಕೆ ಧಕ್ಕೆ ಹಾಗೂ ಕರ್ತವ್ಯ ನಿರ್ಲಕ್ಷ್ಯದ ಹಿನ್ನೆಲೆ ಅರ್ಚಕ ಮಲ್ಲಿ ಅವರನ್ನ ಅಮಾನತು ಮಾಡಲಾಗಿದೆ. ಅರ್ಚಕ ಮಲ್ಲಿ ಎನ್ನುವಾತನ ಅಮಾನತ್ತು ಮಾಡಿರುವ ದಾರ್ಮಿಕ ದತ್ತಿ ಇಲಾಖೆ ಕಾರ್ಯ ನಿರ್ವಾಹಕ ಅಧಿಕಾರಿ ಹನುಮಂತಪ್ಪ, ವಿಚಾರಣೆ ಮುಗಿಯೋವರೆಗೂ ದೇವಸ್ಥಾನಕ್ಕೆ ಬಾರದಂತೆ ನಿಷೇಧ ಹೇರಿದ್ದಾರೆ.
Advertisement
ದೊಡ್ಡ ಬಸವೇಶ್ವರ ಮೂರ್ತಿ ಜೊತೆಗೆ ನಟ ದರ್ಶನ ಭಾವಚಿತ್ರಕ್ಕೂ ಪೂಜೆ ಮಾಡಿದ್ದ ಈ ಅರ್ಚಕ. ವಿಶೇಷ ಧಾರ್ಮಿಕ ಪೂಜೆಯ ಮೂಲಕ ಮೂರ್ತಿ ಕೆಳಗೆ ದರ್ಶನ್ ಪೋಟೋ ಇಟ್ಟು ಪೂಜೆ ಸಲ್ಲಿಕೆ ಮಾಡಲಾಗಿತ್ತು. ಪೂಜೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದರು. ನಟ ದರ್ಶನ ಅವರ ಐದಾರು ಭಾವಚಿತ್ರಗಳನ್ನ ಮೂರ್ತಿಯ ಅಕ್ಕ-ಪಕ್ಕ ಇಟ್ಟು ಪೂಜೆ ಮಾಡಲಾಗಿತ್ತು.