ಅಯ್ಯೋ ತಗಡೇ ಎಂದು ಉಮಾಪತಿಗೆ ಗುಮ್ಮಿದ ದರ್ಶನ್‌

Public TV
1 Min Read
darshan 1

ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅವರು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು 25 ವರ್ಷಗಳಾಗುದೆ. ಈ ಸಂಭ್ರಮದ ಬೆನ್ನಲ್ಲೇ ‘ಕಾಟೇರ’ (Kaatera) ಸಿನಿಮಾ 50 ದಿನಗಳನ್ನು ಪೂರೈಸಿದೆ. ಸಕ್ಸಸ್ ಸಂಭ್ರಮದಲ್ಲಿ ನಿರ್ಮಾಪಕ ಉಮಾಪತಿಗೆ ದರ್ಶನ್ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ:ತಮಿಳಿನತ್ತ ‘ಬೆಂಗಳೂರು ಡೇಸ್’ ನಿರ್ದೇಶಕಿ- ಸಾಥ್ ನೀಡಿದ ‘ಕೆಆರ್‌ಜಿ’ ಸಂಸ್ಥೆ

Darshan 1 2

ತರುಣ್ ಸುಧೀರ್ ನಿರ್ದೇಶನದ ‘ಕಾಟೇರ’ ಸಿನಿಮಾ 50 ದಿನಗಳನ್ನು ಪೂರೈಸಿ ಮುನ್ನುಗ್ಗುತ್ತಿದೆ. ಈ ವೇಳೆ, ಹಿರಿಯ ಶ್ರುತಿ, ನಾಯಕಿ ಆರಾಧನಾ ಸೇರಿದಂತೆ ತಂಡದ ಹಲವರಿಗೆ ಪ್ರಶಸ್ತಿ ನೀಡಿ ಚಿತ್ರತಂಡ ಗೌರವಿಸಿದೆ. ಈ ವೇಳೆ, ಕಾಟೇರ ಟೈಟಲ್ ಕೊಟ್ಟಿದ್ದು ನಾನೇ ಎಂದ ನಿರ್ಮಾಪಕ ಉಮಾಪತಿಗೆ ದರ್ಶನ್ ಟಾಂಗ್ ಕೊಟ್ಟಿದ್ದಾರೆ. ಉಮಾಪತಿ ಆರೋಪಕ್ಕೆಲ್ಲಾ ದರ್ಶನ್ ಸ್ಪಷ್ಟನೆ ನೀಡಿದ್ದಾರೆ.

umapathy producer

ಅಯ್ಯೋ ತಗಡೆ ಅಂದು ‘ರಾಬರ್ಟ್’ ಕತೆ ಕೊಟ್ಟಿದ್ದೆ ನಾವು. ಆದರೂ ಬುದ್ಧಿ ಕಲಿತ್ತಿಲ್ಲ ಅಂದರೆ ಏನು ಹೇಳೋಣ. ಕಾಟೇರ ಎಂತಹ ಒಳ್ಳೆಯ ಕಥೆ ಯಾಕೆ ಈ ಸಿನಿಮಾ ಬಿಟ್ಟೆ ಎಂದು ದರ್ಶನ್ ಪ್ರಶ್ನಿಸಿದ್ದಾರೆ. ಬಳಿಕ ‘ಕಾಟೇರ’ ಟೈಟಲ್ ಹೇಳಿದ್ದು ಕೂಡ ನಾನು ಎಂದು ದರ್ಶನ್ ಮಾತನಾಡಿದ್ದಾರೆ. ಅಂದು ಚಿತ್ರದ ಟೈಟಲ್ ರಿಜಿಸ್ಟರ್ ಮಾಡಿಸುವಂತೆ ತರುಣ್ ಸುಧೀರ್‌ಗೆ ಹೇಳಿದ್ದೆ ಎಂದರು, ಬಳಿಕ ವೇದಿಕೆಯಲ್ಲಿ ಡೈರೆಕ್ಟರ್ ತರುಣ್ ಬಳಿಯೇ ದರ್ಶನ್ ಸ್ಪಷ್ಟನೆ ಕೊಡಿಸಿದ್ದರು.

darshan

ಯಾಕಪ್ಪ, ಯಾವಾಗಲೂ ಬಂದು ಬಂದು ನಮ್ಮ ಕೈಯಲ್ಲೇ ಗುಮ್ಮಿಸಿಕೊಳ್ತಿಯಾ? ಗುಮ್ಮಿಸಿಕೊಳ್ಳಬೇಡ ಅಂತ ದರ್ಶನ್ ಟಾಂಗ್ ಕೊಟ್ಟಿದ್ದಾರೆ. ಎಲ್ಲೋ ಇದ್ಯಾ ಚೆನ್ನಾಗಿ ಇರು. ತಪ್ಪು ಇದು ಅಂತ ದರ್ಶನ್ ಹೇಳಿದರು.

ಹಲವು ಸಂದರ್ಶನಗಳಲ್ಲಿ ದರ್ಶನ್ ಚಿತ್ರಕ್ಕೆ ‌’ಕಾಟೇರ’ ಟೈಟಲ್ ಕೊಟ್ಟಿದ್ದು ನಾನೇ ಎಂದು ಉಮಾಪತಿ ಹೇಳಿದ್ದರು. ಇದಕ್ಕೆಲ್ಲ ಈಗ ದರ್ಶನ್ ಸಖತ್ ಆಗಿ ಟಾಂಗ್ ಕೊಟ್ಟಿದ್ದಾರೆ.

Share This Article