Connect with us

Bengaluru City

‘ರಾಬರ್ಟ್’ ಗೆ ಜೋಡಿಯಾದ ಸೌತ್ ಸುಂದರಿ

Published

on

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯ ‘ರಾಬರ್ಟ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ದರ್ಶನ್ ಸಿನಿಮಾ ಅಂದರೆ ಸಾಕು ಅವರಿಗೆ ನಾಯಕಿಯಾಗಿ ಯಾರು ಬರುತ್ತಾರೆ ಎಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಿರುತ್ತಾರೆ. ಇದೀಗ ಅವರ ಕುತೂಹಲಕ್ಕೆ ತೆರೆಬಿದ್ದಿದ್ದು, ರಾಬರ್ಟ್ ಸಿನಿಮಾದಲ್ಲಿ ದರ್ಶನ್‍ಗೆ ಜೋಡಿಯಾಗಿ ಟಾಲಿವುಡ್ ಬೆಡಗಿ ಆಯ್ಕೆಯಾಗಿದ್ದಾರೆ.

ತೆಲುಗು ಚಿತ್ರರಂಗದಲ್ಲಿ ಖ್ಯಾತಿಗಳಿಸಿರುವ ನಟಿ ಮೆಹರಿನ್ ಪಿರ್ಜಾದಾ ಅವರು ರಾಬರ್ಟ್ ಸಿನಿಮಾದಲ್ಲಿ ದರ್ಶನ್‍ಗೆ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ನಾಯಕಿಯರ ಆಯ್ಕೆ ವಿಚಾರದಲ್ಲಿ ‘ರಾಬರ್ಟ್’ ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರು ಹೆಸರು ಕೂಡ ಕೇಳಿ ಬಂದಿತ್ತು. ಇದೀಗ ಮೆಹರಿನ್ ನಾಯಕಿಯಾಗಿ ಬರುವುದು ಬಹುತೇಕ ಖಚಿತವಾಗಿದೆ.

ಸದ್ಯಕ್ಕೆ ‘ರಾಬರ್ಟ್’ ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಂದಿನ ತಿಂಗಳು ಪ್ರಾರಂಭವಾಗಲಿದೆ. ಈಗಾಗಲೇ ನಾಯಕಿ ಇಲ್ಲದೆ ಚಿತ್ರತಂಡ ಮೊದಲ ಹಂತದ ಚಿತ್ರೀಕರಣವನ್ನು ಮುಗಿಸಿದೆ. ಮುಂದಿನ ತಿಂಗಳು ನಟಿ ಮೆಹರಿನ್ ಚಿತ್ರತಂಡ ಭಾಗಿಯಾಗಲಿದ್ದಾರೆ. ಇದೇ ಮೊದಲ ಬಾರಿಗೆ ಮೆಹರಿನ್ ಕನ್ನಡ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

ಚಿತ್ರತಂಡ ಎರಡನೇ ಹಂತದ ಚಿತ್ರೀಕರಣವನ್ನು ಹೈದರಾಬಾದ್‍ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆಸಲು ಪ್ಲ್ಯಾನ್ ಮಾಡಿಕೊಂಡಿದ್ದೆ. ಅದಕ್ಕಾಗಿ ಸೆಟ್ ಕೂಡ ನಿರ್ಮಾಣವಾಗುತ್ತಿದೆ ಎಂದು ತಿಳಿದು ಬಂದಿದ್ದು, ಒಟ್ಟು 15 ದಿನಗಳಲ್ಲಿ ಶೂಟಿಂಗ್ ಮಾಡಿ ಮುಗಿಸಲು ಚಿತ್ರತಂಡ ಯೋಜನೆ ಮಾಡಿದೆ. ಈ ಸಿನಿಮಾದಲ್ಲಿ ಖಳನಟ ಜಗಪತಿ ಬಾಬು ಕಾಣಿಸಿಕೊಳ್ಳುತ್ತಿದ್ದು, ಈಗಾಗಲೇ ಅವರು ಚಿತ್ರತಂಡ ಸೇರಿಕೊಂಡಿದ್ದಾರೆ. ಈ ಸಿನಿಮಾ ತರುಣ್ ಸುಧೀರ್ ಸಾರಥ್ಯದಲ್ಲಿ ಮೂಡಿ ಬರುತ್ತಿದೆ.