– ದರ್ಶನ್ ಕುಟುಂಬಕ್ಕೆ ಹಿಡಿಶಾಪ
– ಸಿಬಿಐ ತನಿಖೆಗೆ ಆಗ್ರಹ
ಚಿತ್ರದುರ್ಗ: ನಟ ದರ್ಶನ್‍ನನ್ನು ಸಿನಿಮಾ ಇಂಡಸ್ಟ್ರಿಯಿಂದಲೇ ಬ್ಯಾನ್ ಮಾಡಬೇಕು. ದರ್ಶನ್ (Darshan) ಯಾವುದೇ ಸಿನಿಮಾಗಳನ್ನ ರಿಲೀಸ್ ಮಾಡಬಾರದು ಎಂದು ಮೃತ ರೇಣುಕಾಸ್ವಾಮಿ (Renukaswamy) ತಾಯಿ ರತ್ನಪ್ರಭಾ ಆಕ್ರೋಶ ಹೊರಹಾಕಿದ್ದಾರೆ.
ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಡಿಬಾಸ್ ಎಂದು ಖ್ಯಾತಿ ಪಡೆದ ದರ್ಶನ್ ಖಳನಟ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ದೊಡ್ಡ ಮನುಷ್ಯನ ಗುಣ ದರ್ಶನಗಿಲ್ಲ, ಅವನು ಕಳ್ಳ. ಸಿನಿಮಾ ಇಂಡಸ್ಟ್ರಿಯಿಂದಲೇ ದರ್ಶನ್ ಬ್ಯಾನ್ ಮಾಡಬೇಕು. ದರ್ಶನ್ ಯಾವುದೇ ಸಿನಿಮಾಗಳನ್ನ ರಿಲೀಸ್ ಮಾಡಬಾರದು. ಡಿ ಬಾಸ್ ಎನ್ನುವ ಅಭಿಮಾನಿಗಳ ಇವನ ಹೇಯ ಕೃತ್ಯವನ್ನು ನೋಡಿ ಕಲಿಯಲಿ. ನನ್ನ ಮಗನಿಗೆ ಆದ ಸ್ಥಿತಿಯೇ ದರ್ಶನ್ ಮಗನಿಗೆ ಆಗಬೇಕು. ಅವರ ಕುಟುಂಬವೇ ಸರ್ವನಾಶ ಆಗಬೇಕು ಎಂದು ದರ್ಶನ್ ವಿರುದ್ದ ರೇಣುಕಾಸ್ವಾಮಿ ತಾಯಿ ಆಕ್ರೋಶ ವ್ಯಕ್ತಪಡಿಸಿದರು.
ಸಿಬಿಐ ತನಿಖೆಗೆ ಆಗ್ರಹ: ರೇಣುಕಾಸ್ವಾಮಿ ದರ್ಶನ್ ಅಭಿಮಾನಿ ಎಂದು ತೋರಿಸಿಕೊಂಡಿಲ್ಲ. ಮೆಸೇಜ್ ಮಾಡಿದ ಕಾರಣಕ್ಕೆ ಕಿಡ್ನಾಪ್ ಮಾಡಿ ಭೀಕರ ಕೊಲೆ ಮಾಡಿದ್ದಾರೆ. ಮುಖ, ಮಮಾರ್ಂಗಕ್ಕೆ ಭೀಕರ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾರೆ. ಈ ಸಂಬಂಧ ಸರ್ಕಾರ ಸೂಕ್ತ ತನಿಖೆ ಮಾಡಿ ಕಠಿಣ ಕ್ರಮ ಕೈಗೊಳ್ಳಬೇಕು. ಸಿಬಿಐ ತನಿಖೆ ಮೂಲಕ ನಟ ದರ್ಶನ್ & ಗ್ಯಾಂಗ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. ಇದನ್ನೂ ಓದಿ: ಇನ್‍ಸ್ಟಾದಲ್ಲಿ ದರ್ಶನ್ ಅನ್‍ಫಾಲೋ, ಡಿಪಿ ಡಿಲೀಟ್ ಮಾಡಿದ ಪತ್ನಿ ವಿಜಯಲಕ್ಷ್ಮಿ!
ಪತ್ನಿಗೆ ಸರ್ಕಾರಿ ಉದ್ಯೋಗಕ್ಕೆ ಬೇಡಿಕೆ: ರೇಣುಕಾಸ್ವಾಮಿ ಪತ್ನಿ 4 ತಿಂಗಳ ಗರ್ಭಿಣಿ ಇದ್ದಾಳೆ. ರೇಣುಕಾಸ್ವಾಮಿ ಪತ್ನಿ ಸಹನಾಳ ಮುಂದಿನ ಬದುಕೇನು?. ಸರ್ಕಾರ ರೇಣುಕಾಸ್ವಾಮಿ ಪತ್ನಿಗೆ ಪರಿಹಾರ ಕಲ್ಪಿಸಬೇಕು. ಸರ್ಕಾರಿ ನೌಕರಿ ನೀಡಿ ಬದುಕಿಗೆ ಆಸರೆ ಆಗಬೇಕೆಂದು ಆಗ್ರಹ ಮಾಡಿದರು.