ಚಾಲೆಂಜಿಂಗ್ ಸ್ಟಾರ್‌ ದರ್ಶನ್ ಕೈ ಸರ್ಜರಿ ಸಕ್ಸಸ್

Public TV
1 Min Read
darshan 5

ಸ್ಯಾಂಡಲ್‌ವುಡ್ ನಟ ದರ್ಶನ್ (Darshan) ಡೆವಿಲ್ (Devil Film) ಸಿನಿಮಾದ ಚಿತ್ರೀಕರಣ ವೇಳೆ ಕೈಗೆ ಪೆಟ್ಟಾಗಿತ್ತು. ಇದೀಗ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದರ್ಶನ್‌ ಕೈ ಸರ್ಜರಿ (Hand Surgery) ಮಾಡಲಾಗಿದೆ. ಸದ್ಯ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ‘ಅಹಂ ಪ್ರೇಮಾಸ್ಮಿ’ ನಟಿ

darshan 4

ಏ.4ರಂದು ಮಂಡ್ಯದಲ್ಲಿ ನಡೆದ ಸುಮಲತಾ ಅವರ ಬಹಿರಂಗ ಸಭೆಯಲ್ಲಿ ದರ್ಶನ್ ಕೂಡ ಭಾಗಿಯಾಗಿದ್ದರು. ಈ ವೇಳೆ, ದರ್ಶನ್ ಅವರೇ ಹೇಳಿಕೊಂಡಿದ್ದಾರೆ. ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು ಆಸ್ಪತ್ರೆಗೆ ಅಡ್ಮಿಟ್ ಆಗಿ ಆಪರೇಷನ್‌ಗೆ ಒಳಗಾಗಲಿದ್ದೇನೆ ಎಂದು ತಿಳಿಸಿದ್ದರು.

‘ಡೆವಿಲ್’ ಸಿನಿಮಾದ ಸಾಹಸ ಸನ್ನಿವೇಶ ಶೂಟಿಂಗ್ ಸಮಯದಲ್ಲಿ ಅವರ ಕೈಗೆ ಏಟು ಬಿದ್ದಿದೆ. ಕೈಗೆ ಬೆಲ್ಟ್ ಕಟ್ಟಿಕೊಂಡು ಈವರೆಗೂ ಓಡಾಡುತ್ತಿದ್ದರು. ವೈದ್ಯರ ಸಲಹೆ ಮೇರೆಗೆ ದರ್ಶನ್ ಇದೀಗ ಆಪರೇಷನ್‌  ಮಾಡಿಸಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ ನಟ ವಿಶ್ರಾಂತಿ ಪಡೆಯುತ್ತಿರುವ ವಿಚಾರ ಕೇಳಿ ಅಭಿಮಾನಿಗಳಿಗೂ ಖುಷಿಯಾಗಿದೆ.

Share This Article