Wednesday, 18th July 2018

ದರ್ಶನ್ ‘ತಾರಕ್’ ಟೀಸರ್ ಇಂದು ರಿಲೀಸ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನದ ತಾರಕ್ ಚಿತ್ರದ ಟೀಸರ್ ಇಂದು ಸಂಜೆ 5 ಗಂಟೆಗೆ ಬಿಡುಗಡೆಯಾಗಲಿದೆ. ದರ್ಶನ್ ಚಿತ್ರದ ಟೀಸರ್ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಸ್ಟೈಲಿಶ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ದರ್ಶನ್ ಅವರು ಈ ಸಿನೆಮಾದಲ್ಲಿ ರಗ್ಬಿ ಪ್ಲೇಯರ್ ಆಗಿ ಕಾಣಿಸಿಕೊಂಡಿದ್ದಾರೆ. ಶಾನ್ವಿ ಶ್ರೀವಾಸ್ತವ, ಶೃತಿ ಹರಿಹರನ್, ದೇವರಾಜ್ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಮಿಲನ ಪ್ರಕಾಶ್ ತಾರಕ್ ಚಿತ್ರವನ್ನು ನಿರ್ದೇಶನ ಮಾಡಿದ್ದು, ಚಿತ್ರದ ಹಾಡುಗಳು ಈಗಾಗಲೇ ಪ್ರೇಕ್ಷಕರ ಮನ ಗೆದ್ದಿವೆ. ಲಹರಿ ಮ್ಯೂಸಿಕ್ ಯೂಟ್ಯೂಬ್ ತಾಣದಲ್ಲಿ ನೀವು ತಾರಕ್ ಹಾಡನ್ನು ಕೇಳಬಹುದು.

ಚಿತ್ರದಲ್ಲಿ ಒಟ್ಟು 6 ಹಾಡುಗಳಿದ್ದು ಅರ್ಜುನ್ ಜನ್ಯ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಜಯಂತ್ ಕಾಯ್ಕಿಣಿ, ಹರಿ ಸಂತೋಷ್, ವಿ.ನಾಗೇಂದ್ರ ಪ್ರಸಾದ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಬೆಂಗಳೂರು, ಮಲೇಷ್ಯಾ, ಸ್ವಿಜರ್ ಲ್ಯಾಂಡ್ ನಲ್ಲಿ ಚಿತ್ರದ ಶೂಟಿಂಗ್ ನಡೆದಿದೆ. ಇದೇ ಸೆಪ್ಟೆಂಬರ್ 29ರಂದು ಚಿತ್ರ ರಿಲೀಸ್ ಆಗಲಿದೆ.

 

 

 

Leave a Reply

Your email address will not be published. Required fields are marked *