Connect with us

Bengaluru City

ಮೂರು ಅವತಾರವೆತ್ತಿದ ದಾಸ – ತರುಣ್‍ಗೆ ವಿಶ್ ಮಾಡಿ ಪೋಸ್ಟರ್ ರಿಲೀಸ್

Published

on

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿರ್ದೇಶಕ ತರುಣ್ ಸುಧೀರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಇದನ್ನೂ ಓದಿ: ಅಭಿಮಾನಿಗಳಿಗೆ ತುಂಬು ಹೃದಯದ ಧನ್ಯವಾದ ತಿಳಿಸಿದ ‘ಯಜಮಾನ’

ಇಂದು ನಿರ್ದೇಶಕ ತರುಣ್ ಸುಧೀರ್ ಅವರ ಹುಟ್ಟುಹಬ್ಬ. ಹೀಗಾಗಿ ಅನೇಕ ನಟ, ನಟಿಯರು, ನಿರ್ದೇಶಕರು ಸೋಶಿಯಲ್ ಮೀಡಿಯಾದ ಮೂಲಕ ಶುಭಾಶಯ ಕೋರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಟ್ವೀಟ್ ಮಾಡುವ ಮೂಲಕ ತರುಣ್ ಸುಧೀರ್ ಅವರಿಗೆ ಬರ್ತ್ ಡೇ ವಿಶ್ ಮಾಡಿದ್ದಾರೆ. ಜೊತೆಗೆ ‘ರಾಬರ್ಟ್’ ಸಿನಿಮಾದ ಮತ್ತೊಂದು ಪೋಸ್ಟರ್ ರಿಲೀಸ್ ಮಾಡಿದ್ದಾರೆ.

“A Brother from another Mother. ತರುಣನಿಗೆ ನಮ್ಮ ರಾಬರ್ಟ್ ತಂಡದಿಂದ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು. ನಿನ್ನ ಇಷ್ಟಾರ್ಥಗಳೆಲ್ಲವೂ ಈಡೇರಲಿ ಎಂದು ಆಶಿಸುತ್ತೇನೆ. ನಿಮ್ಮ ದಾಶ ದರ್ಶನ್ ” ಎಂದು ಟ್ವಿಟ್ಟರಿನಲ್ಲಿ ಬರೆದುಕೊಂಡಿದ್ದಾರೆ. ಜೊತೆಗೆ ರಾಬರ್ಟ್ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ. ನಿರ್ದೇಶಕ ತರುಣ್ ಸುಧೀರ್ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಆಗಿದೆ.

ಬಿಡುಗಡೆಯಾಗಿರುವ ಪೋಸ್ಟರ್ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದ್ದು, ದರ್ಶನ್ ಮೂರು ಶೇಡ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ಮೂರು ಅವತಾರವೆತ್ತಿರುವ ಈ ಪೋಸ್ಟರ್ ಸಿನಿಮಾದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಪೋಸ್ಟರ್‌ನಲ್ಲಿ ಸದ್ಯದಲ್ಲೇ ಸಿನಿಮಾ ಚಿತ್ರಮಂದಿರಕ್ಕೆ ಎಂಟ್ರಿ ಕೊಡುವುದಾಗಿ ಹೇಳಿದ್ದಾರೆ. ಆದರೆ ಯಾವಾಗ ಎಂಬುದನ್ನು ಅಧಿಕೃತವಾಗಿ ತಿಳಿಸಿಲ್ಲ.

ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾ ಪೋಸ್ಟರ್ ಮೂಲಕವೇ ಭಾರೀ ಸದ್ದು ಮಾಡುತ್ತಿದೆ. ಸಿನಿಮಾದ ಚಿತ್ರೀಕರಣ ಮುಗಿಸಿ ತೆರೆಗೆ ಬರಲು ಸಜ್ಜಾಗಿದೆ. ಎಲ್ಲ ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ‘ರಾಬರ್ಟ್’ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ಲಾಕ್‍ಡೌಡ್‍ನಿಂದ ಸಿನಿಮಾ ರಿಲೀಸ್ ಮುಂದಕ್ಕೆ ಹೋಗಿದೆ. ಈ ಚಿತ್ರದಲ್ಲಿ ದರ್ಶನ್‍ಗೆ ನಾಯಕಿಯಾಗಿ ಆಶಾ ಭಟ್ ಕಾಣಿಸಿಕೊಂಡಿದ್ದಾರೆ. ಜೊತೆಗೆ ವಿನೋದ್ ಪ್ರಭಾಕರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ತೆಲುಗು ನಟ ಜಗಪತಿ ಬಾಬು ವಿಲನ್ ಆಗಿ ಅಭಿನಯಿಸಿದ್ದಾರೆ.

Click to comment

Leave a Reply

Your email address will not be published. Required fields are marked *