ರಾಜ್ಯಾದ್ಯಂತ ಕಾಟೇರ ಸಿನಿಮಾದ ಅಬ್ಬರ ಜೋರಾಗಿದೆ. ಸಿನಿಮಾ, ನಟನೆ, ಸಂಭಾಷಣೆ, ನಿರ್ದೇಶನ ಹೀಗೆ ಎಲ್ಲದರಲ್ಲೂ ಸಿನಿಮಾ ಪಾಸ್ ಅನಿಸಿಕೊಂಡಿದೆ. ಅದರಲ್ಲೂ ದರ್ಶನ್ ಅಭಿಮಾನಿಗಳು ಚಿತ್ರವನ್ನು ತಲೆಮೇಲೆ ಹೊತ್ತುಕೊಂಡು ಮೆರೆಸುತ್ತಿದ್ದಾರೆ. ಹಾಗಾಗಿ ತಮ್ಮ ಅಭಿಮಾನಿಗಳನ್ನು ಸೆಲೆಬ್ರಿಟಿಸ್ (Celebrities)ಎಂದು ಕರೆಯುವ ದರ್ಶನ್ ಸೋಷಿಯಲ್ ಮೀಡಿಯಾ ಮೂಲಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
Advertisement
ಏನೆಂದು ನಾ ಹೇಳಲಿ, ನಿಮ್ಮಯ ಪ್ರೀತಿ ಆಶೀರ್ವಾದಕ್ಕೆ ಕೊನೆಯೆಲ್ಲಿ. ಧನೋಸ್ಮಿ ಸೆಲೆಬ್ರಿಟಿಸ್. ಹೃದಯಪೂರ್ವಕ ಧನ್ಯವಾದಗಳು ಕರ್ನಾಟಕ ಎಂದು ದರ್ಶನ್ ಬರೆದುಕೊಂಡಿದ್ದಾರೆ. ಜೊತೆಗೆ ಸಿನಿಮಾದ ಜೀವಾಳದಂತಿರುವ ಅವರ ಮತ್ತೊಂದು ಗೆಟಪ್ ಫೋಟೋವನ್ನು ಹಂಚಿಕೊಂಡಿದ್ದಾರೆ.
Advertisement
Advertisement
ಕೋಟಿ ಕೋಟಿ ಗಳಿಕೆ
Advertisement
ಕಾಟೇರ ಸಿನಿಮಾ ರಿಲೀಸ್ ಆಗಿ ಒಂದೇ ದಿನಕ್ಕೆ ಕೋಟಿ ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ (Box Office) ಹರಿದು ಬಂದಿದೆ. ಕಾಟೇರ ಸಿನಿಮಾದ ಮೊದಲ ದಿನದ ಗಳಿಕೆ ಅಂದಾಜು 19.79 ಕೋಟಿ ರೂಪಾಯಿ ಎಂದು ಹೇಳಲಾಗುತ್ತಿದೆ. ಹಾಗಾಗಿ ಸಹಜವಾಗಿಯೇ ಚಿತ್ರತಂಡ ಮತ್ತು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.
ದರ್ಶನ್ ಅಭಿನಯದ ಬಹುನಿರೀಕ್ಷಿತ ಕಾಟೇರ ಸಿನಿಮಾ (Kaatera Cinema) ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಚಕ್ರವರ್ತಿಯ ಅಬ್ಬರ ಜೋರಾಗಿದೆ. ನಿನ್ನೆಯಿಂದ ಸಿನಿಮಾ ಥಿಯೇಟರ್, ಮಾಲ್‌ಗಳ ಮುಂದೆ ಕಿಕ್ಕಿರಿದು ನಿಂತಿರುವ ಅಭಿಮಾನಿಗಳು (Darshan Fans) ದರ್ಶನ್ ಕಟೌಟ್‌ಗೆ ಹಾರ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ. ಡಿಬಾಸ್ ಡಿಬಾಸ್ ಎಂದು ಜಯಘೋಷ ಹಾಕುತ್ತಾ ಹುಚ್ಚೆದ್ದು ಕುಣಿಯುತ್ತಿದ್ದಾರೆ.
ಬೆಂಗಳೂರಿನ ಜೆ.ಪಿ.ನಗರದ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಅಭಿಮಾನಿಗಳಿಗಾಗಿ ಫ್ಯಾನ್ಸ್ ಶೋ ಆಯೋಜನೆ ಮಾಡಲಾಗಿತ್ತು. ಸಿನಿಮಾ ನೋಡಿ ಹೊರ ಬಂದ ಅಭಿಮಾನಿಗಳು ಸಾರಥಿಗೆ ಜೈಕಾರ ಕೂಗತೊಡಗಿದ್ದಾರೆ. ಈ ನಡುವೆ ಕಾಟೇರಮ್ಮನ ಗುಡಿ ಮಾಡಿ ದೇವಿ ಪ್ರತಿಮೆ ಸ್ಥಾಪಿಸಿರುವ ದೃಶ್ಯಗಳು ಕಂಡುಬಂದಿವೆ.
ದರ್ಶನ್ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಕಾಟೇರ ದರ್ಬಾರ್ ನಿನ್ನೆ ಮಧ್ಯರಾತ್ರಿಯಿಂದಲೇ ಶುರುವಾಗಿದೆ. ಮೊದಲ ದಿನ ರಾಜ್ಯದ 21 ಕಡೆ ಮಧ್ಯರಾತ್ರಿ 12 ಗಂಟೆಯಿಂದಲೇ ಶೋ ಆರಂಭಿಸಲಾಗಿತ್ತು. 43 ಥಿಯೇಟರ್‌ಗಳಲ್ಲಿ ಮುಂಜಾನೆ 3 ಗಂಟೆಯಿಂದ, 77 ಥಿಯೇಟರ್‌ಗಳಲ್ಲಿ ಬೆಳಗಿನ ಜಾವ 4 ಗಂಟೆಯಿಂದ ಶೋ ಆರಂಭವಾಗಿತ್ತು. ಸೂರ್ಯೋದಯವಾಗುವುದಕ್ಕೂ ಮುನ್ನವೇ ಕಾಟೇರ 335 ಶೋಗಳಲ್ಲಿ ಅಬ್ಬರಿಸಿದ್ದು, ಅಭಿಮಾನಿಗಳ ಮನಗೆದ್ದಿದೆ. ಮೊದಲ ದಿನ 1,600 ಶೋಗಳ ಪ್ರದರ್ಶನಕ್ಕೆ ಸಜ್ಜಾಗಿತ್ತು.
‘ಕಾಟೇರ’ ಸಿನಿಮಾದ ಕಥೆ ನಡೆಯುವುದು 1974ರ ಕಾಲಘಟ್ಟದಲ್ಲಿ. ಭೀಮನಹಳ್ಳಿ ಎಂಬ ಊರಿನಲ್ಲಿ ಕುಲುಮೆ ಕೆಲಸ ಮಾಡುತ್ತಿರುವ ಯುವಕ ಕಾಟೇರ (ದರ್ಶನ್). ದುಡಿಮೆನೇ ದೇವ್ರು ಅಂತ ನಂಬಿರುವ ವ್ಯಕ್ತಿ. ಆದರೆ ಇದೇ ಊರಿನಲ್ಲಿ ಜಮಿನ್ದಾರನ ದಬ್ಬಾಳಿಕೆ ಇರುತ್ತದೆ, ಗೇಣಿದಾರರಿಗೆ ಅನ್ಯಾಯವಾಗುತ್ತಿರುತ್ತದೆ, ಭತ್ತ ಬೆಳೆಯುವ ರೈತನಿಗೆ ಬದುಕೋದೇ ಕಷ್ಟವಾಗಿರುತ್ತದೆ. ಅಷ್ಟಕ್ಕೂ ಆ ಊರಿನಲ್ಲಿ ಅಂಥದ್ದು ಏನಾಗುತ್ತಿರುತ್ತದೆ? ತನ್ನವರ ಮೇಲಿನ ದಬ್ಬಾಳಿಕೆಗೆ ಕಾಟೇರ ಯಾವ ರೀತಿ ಉತ್ತರ ಕೊಡುತ್ತಾನೆ ಎಂಬ ಕುತೂಹಲದೊಂದಿಗೆ ಸಿನಿಮಾ ಸಾಗುತ್ತದೆ.