ನಟ ದರ್ಶನ್ ಹುಟ್ಟುಹಬ್ಬದಂದು ಫ್ಯಾನ್ಸ್‌ಗೆ ಗುಡ್ ನ್ಯೂಸ್ ಸಿಕ್ಕಿದೆ. ದರ್ಶನ್ (Darshan) ಅಭಿನಯದ ‘ಡೆವಿಲ್’ (The Devil) ಸಿನಿಮಾದ ಟೀಸರ್ ಭಾನುವಾರ ಬಿಡುಗಡೆಯಾಗಿದೆ.
ಮಿಲನ ಪ್ರಕಾಶ್ ನಿರ್ದೇಶಿಸಿ ನಿರ್ಮಿಸಿರುವ ಚಿತ್ರ ಇದಾಗಿದೆ. ಫೈಟ್ ದೃಶ್ಯಗಳನ್ನೇ ಒಳಗೊಂಡಿರುವ ಟೀಸರ್ ರಿಲೀಸ್ ಆಗಿದೆ. ನನಗೇ ‘ಚಾಲೆಂಜ್’ ಎನ್ನುವಂತೆ ಡೈಲಾಗ್ ಹೊಡೆದಿರುವ ಡೆವಿಲ್, ಫ್ಯಾನ್ಸ್‌ಗೆ ಥ್ರಿಲ್ ನೀಡಿದ್ದಾರೆ.
ಪ್ರಕಾಶ್ ವೀರ್ ನಿರ್ದೇಶನದ ‘ದಿ ಡೆವಿಲ್’ ಚಿತ್ರದಲ್ಲಿ ದರ್ಶನ್ ಡಿಫರೆಂಟ್ ಆಗಿ ಕಾಣಿಸಿಕೊಂಡಿದ್ದಾರೆ. ಇದೊಂದು ರೋಮಾಂಚನಕಾರಿ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದೆ. ಈ ಚಿತ್ರದಲ್ಲಿ ರಚನಾ ರೈ, ಮಹೇಶ್ ಮಂಜ್ರೇಕರ್ ಮತ್ತು ವಿನಯ್ ಗೌಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.