ನಟ ದರ್ಶನ್ (Darshan) ಮತ್ತು ಉಮಾಪತಿ (Umapati Srinivas Gowda) `ಕಾಟೇರ’ ಟೈಟಲ್ ಕದನ ಕಳೆದ 5 ದಿನಗಳಿಂದ ಭಾರೀ ಸದ್ದು ಮಾಡುತ್ತಿದೆ. ಈ ಬೆಳವಣಿಕೆಯ ಬಗ್ಗೆ ಇಂದ್ರಜಿತ್ (Indrajit Lankesh) ರಿಯಾಕ್ಟ್ ಮಾಡಿದ್ದಾರೆ. ಇಬ್ಬರ ಜಗಳ ಚಿತ್ರರಂಗದ ದೃಷ್ಟಿಯಿಂದ ಒಳ್ಳೆಯದಲ್ಲ ಎಂದು ನಿರ್ದೇಶಕ ಇಂದ್ರಜಿತ್ ಮಾತನಾಡಿದ್ದಾರೆ.
Advertisement
ಕಾಟೇರ ಸಿನಿಮಾ ಯಶಸ್ವಿಯಾಗಿದೆ. ಬಹಳಷ್ಟು ವರ್ಷಗಳ ಬಳಿಕ ದರ್ಶನ್‌ಗೆ ಒಂದು ಸಕ್ಸಸ್ ಸಿಕ್ಕಿದೆ. `ಕಾಟೇರ’ ಸಿನಿಮಾ ನೋಡಿ ಜನ ಮೆಚ್ಚಿಕೊಂಡಿದ್ದಾರೆ. ಈ ಟೈಮ್‌ನಲ್ಲಿ ಈ ರೀತಿ ಮಾಡಿಕೊಳ್ಳಬಾರದಿತ್ತು ಎಂದು ಇಂದ್ರಜಿತ್ ಹೇಳಿದ್ದಾರೆ.
Advertisement
Advertisement
ನನ್ನ ಪ್ರೀತಿಯ ರಾಮು, `ಸಂಗೊಳ್ಳಿ ರಾಯಣ್ಣ’ ಬಳಿಕ ದರ್ಶನ್ ಕಾಟೇರದಲ್ಲಿ ಅದ್ಭುತವಾಗಿ ನಟಿಸಿದ್ದಾರೆ. ಸಿನಿಮಾ ಹಿಟ್ ಆಗಿದೆ. ಇಂತಹ ಸಮಯದಲ್ಲಿ ಅವರುಗಳೇ ಕುಳಿತು ಇದನ್ನು ಸರಿಮಾಡಿಕೊಳ್ಳಬೇಕು. ಇದು ಇಂಡ್ರಸ್ಟಿçಗೆ ಶೋಭೆ ತರುವಂತಹ ವಿಚಾರವಲ್ಲ. ಈ ವಿಚಾರದ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ. ಮುಂದೆ ಅದು ಕೆಟ್ಟ ಬೆಳವಣಿಗೆ ಆಗುತ್ತೆ.
Advertisement
ಸೋಷಿಯಲ್ ಮೀಡಿಯಾ ಒಂದು ಅದ್ಬುತ ಜಗತ್ತು. ಆದರೆ ಕೆಲವು ಕಿಡಿಗೇಡಿಗಳು ದುರುಪಯೋಗ ಮಾಡಿಕೊಳ್ತಿದ್ದಾರೆ. ಒಬ್ಬರನ್ನು ತುಳಿಯೋದ್ದಕ್ಕೆ ಬಳಕೆ ಮಾಡ್ತಿದ್ದಾರೆ. ಇದು ಕನ್ನಡ ಇಂಡಸ್ಟಿçಯ ಮೇಲೆ ಕೆಟ್ಟ ಪರಿಣಾಮ ಬಿರುತ್ತೆ. ಮತ್ತೆ ಸಿನಿಮಾಗಳು ಗಡಿ ದಾಟಿ ರೀಚ್ ಆಗಿರೋದ್ದಕ್ಕೆ ಕಾರಣ ಸೋಷಿಯಲ್ ಮೀಡಿಯಾ ಅದನ್ನು ಒಳ್ಳೆಯ ರೀತಿಯಲ್ಲಿ ಬಳಸಿಕೊಳ್ಳೋಣ ಎಂದು ಇಂದ್ರಜಿತ್ ಮಾತನಾಡಿದ್ದಾರೆ.
ಸದ್ಯ ಇಂದ್ರಜಿತ್ ಲಂಕೇಶ್ ನಿರ್ದೇಶನದ `ಗೌರಿ’ ಸಿನಿಮಾದಲ್ಲಿ ಪುತ್ರ ಸಮರ್ಜಿತ್, ಸಾನ್ಯ ಅಯ್ಯರ್‌ಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. 90%ರಷ್ಟು ಶೂಟಿಂಗ್ ಕಂಪ್ಲೀಟ್ ಆಗಿದೆ. ಸದುದಲ್ಲೇ ರಿಲೀಸ್ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ.