ಬೆಂಗಳೂರು: ಜೈಲಿನಲ್ಲಿ ದರ್ಶನ್‌ಗೆ ರಾಜ ಮರ್ಯಾದೆ (Darshan VIP Treatment In Jail) ನೀಡಿದ ಪ್ರಕರಣ ಬೆಳಕಿಗೆ ಬಂದ ನಂತರ ಗೃಹ ಸಚಿವ ಪರಮೇಶ್ವರ್ (Parameshwar) ಇಮೇಜ್‌ಗೆ ಮತ್ತೆ ಧಕ್ಕೆಯಾಗಿದೆ.
ಒಂದು ವರ್ಷದಿಂದ ಪರಮೇಶ್ವರ್‌ಗೆ ಸವಾಲಿನ ಮೇಲೆ ಸವಾಲು ಎದುರಾಗುತ್ತಿದೆ. ಬಯಸದೇ ಬಂದ ಖಾತೆಯಿಂದ ಸವಾಲು ಜೊತೆ ಮುಜುಗರವೇ ಹೆಚ್ಚಾಗುತ್ತಿದೆ.
Advertisement
ಗೃಹ ಇಲಾಖೆಗೆ ಡ್ಯಾಮೇಜ್ ಆಗಿರುವ ಹಿನ್ನೆಲೆಯಲ್ಲಿ ಮುಜುಗರಕ್ಕೆ ಒಳಗಾಗಿರುವ ಗೃಹ ಸಚಿವ ಜಿ.ಪರಮೇಶ್ವರ್ ಸೋಮವಾರ ವಿಧಾನಸೌಧದಲ್ಲಿ ಮಾಧ್ಯಮಗಳ ಮೇಲೆಯೇ ಗರಂ ಆಗಿದ್ದರು. ಇದನ್ನೂ ಓದಿ: ಪರಪ್ಪನ ಜೈಲಿಂದ ಹಿಂಡಲಗಾ ಜೈಲಿಗೆ ‘ಜಗ್ಗುದಾದ’ ಶಿಫ್ಟ್ ಸಾಧ್ಯತೆ – ಬೆಳಗಾವಿ ಜೈಲಿನ ವಿಶೇಷತೆ ಏನು?
Advertisement
Advertisement
ದರ್ಶನ್ ವಿಐಪಿ ಪ್ರಕರಣದಲ್ಲಿ ಸೂಕ್ತ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಸೂಚನೆ ಕೊಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದ ಪರಮೇಶ್ವರ್ ಹಿಂಗೆಲ್ಲ ಬಂದ್ರೆ ನಾನು ಮಾತಾಡಲ್ಲ ಎಂದು ನೇರವಾಗಿಯೇ ಸಿಟ್ಟು ಹೊರ ಹಾಕಿದ್ದರು. ಇದನ್ನೂ ಓದಿ: ಬೆಂಗಳೂರಿಗರೇ ಗಮನಿಸಿ – ಇಂದು ನಗರದಲ್ಲಿ ಟ್ರಾಫಿಕ್ ಸಮಸ್ಯೆಯಾಗುವ ಸಾಧ್ಯತೆ
Advertisement
ಪರಂಗೆ ಸವಾಲು ತಂದಿಟ್ಟ ಪ್ರಕರಣಗಳು
ದರ್ಶನ್‌ಗೆ ಜೈಲ್‌ನಲ್ಲಿ ರಾಜಾತಿಥ್ಯ ನೀಡಿದ ಪ್ರಕರಣ
ರೇವಣ್ಣ, ಪ್ರಜ್ವಲ್, ಸೂರಜ್ ರೇವಣ್ಣ ಪ್ರಕರಣ
ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ
ಹುಬ್ಬಳ್ಳಿಯಲ್ಲಿ ಕಾಲೇಜು ವಿದ್ಯಾರ್ಥಿನಿ ನೇಹಾ ಕೊಲೆ
ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣ
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ
ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ
ವಿಧಾನಸೌಧದಲ್ಲಿ ಪಾಕ್ ಜಿಂದಾಬಾದ್ ಘೋಷಣೆ
ಹಾವೇರಿ ಸಾಮೂಹಿಕ ಅತ್ಯಾಚಾರ ಪ್ರಕರಣ
ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ
ಉಡುಪಿ ಕಾಲೇಜ್‌ನಲ್ಲಿ ವಿಡಿಯೋ ಮಾಡಿದ ಕೇಸ್