ಮಂಡ್ಯ (Mandya) ಲೋಕಸಭಾ ಸಂಸದೆ ಸುಮಲತಾ ಅಂಬರೀಶ್ (Sumalatha Ambarish), ಈ ಬಾರಿಯ ಚುನಾವಣೆಯ 9Election) ಕುರಿತಂತೆ ಏಪ್ರಿಲ್ 3ರಂದು ಮಂಡ್ಯದಲ್ಲೇ ಮಹತ್ವದ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ನಟ ದರ್ಶನ್ ಕೂಡ ಹಾಜರಿರಲಿದ್ದಾರೆ. ಕಳೆದ ಚುನಾವಣೆಯಲ್ಲೂ ದರ್ಶನ್ ಮತ್ತು ಯಶ್ ಜೊತೆಗಿದ್ದರು. ಈ ಬಾರಿಯೂ ಜೊತೆಗಿರುವುದಾಗಿ ದರ್ಶನ್ (Darshan) ಘೋಷಣೆ ಮಾಡಿದ್ದರು.
Advertisement
3ನೇ ತಾರೀಖಿನ ಮಹತ್ವದ ಘೋಷಣೆ ಕುರಿತಂತೆ ಸ್ವತಃ ಸುಮಲತಾ ಅವರೇ ತಮ್ಮ ಅಭಿಮಾನಿಗಳನ್ನು ಮತ್ತು ಹಿತೈಷಿಗಳನ್ನು ಉದ್ದೇಶಿಸಿ ಮಾತನಾಡಿದ್ದರು. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ.
Advertisement
Advertisement
ನಿಮ್ಮ ಭಾವನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ನಿಮ್ಮ ಸಮಯವನ್ನು ನನಗೆ ಕೊಟ್ಟು ಮನೆವರೆಗೂ ಬಂದಿದ್ದೀರಿ. ಕೆಲವರು ತಾವು ಇದ್ದಲ್ಲೇ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದೀರಿ. ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ದೊಡ್ಡದು.
Advertisement
ಏಪ್ರಿಲ್ 3ನೇ ತಾರೀಖು ಮಂಡ್ಯ ಲೋಕಸಭೆ ಚುನಾವಣೆ ಕುರಿತಂತೆ ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆಯೇ ಮಂಡ್ಯದಲ್ಲಿ ಪ್ರಕಟಿಸುತ್ತೇನೆ. ತಮ್ಮ ಸಲಹೆ ಮತ್ತು ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ ಎಂದು ಮಾಧ್ಯಮಗಳೊಂದಿಗೆ ಅವರು ಮಾತನಾಡಿದ್ದರು.