ದರ್ಶನ್ (Darshan) ಪತ್ನಿ ವಿಜಯಲಕ್ಷ್ಮಿ (Vijaylakshmi) ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ತಾ ಇರುತ್ತಾರೆ. ಇದೀಗ ಪತಿ ಮತ್ತು ಮಗನೊಂದಿಗೆ ಖುಷಿಯಿಂದ ಕ್ಲಿಕ್ಕಿಸಿರುವ ಫೋಟೋವನ್ನು ವಿಜಯಲಕ್ಷ್ಮಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಉದ್ಯಮಿ ಮಗಳೊಂದಿಗೆ ಪ್ರಭಾಸ್ ಮದುವೆ ವಿಚಾರ ಸುಳ್ಳು- ಆಪ್ತರಿಂದ ಸ್ಪಷ್ಟನೆ
ಆನೆ ಅಭಿಮನ್ಯು ಜೊತೆ ನಿಂತು ಪತಿ ದರ್ಶನ್ ಹಾಗೂ ಪುತ್ರನೊಂದಿಗೆ ಇರುವ ಫೋಟೋವನ್ನು ವಿಜಯಲಕ್ಷ್ಮಿ ಹಂಚಿಕೊಂಡಿದ್ದಾರೆ. ಖುಷಿ ಖುಷಿಯಾಗಿರುವ ಇವರ ಫ್ಯಾಮಿಲಿ ಫೋಟೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ನಿಮ್ಮ ಕುಟುಂಬದ ಮೇಲೆ ಯಾರ ಕೆಟ್ಟ ಕಣ್ಣು ಬೀಳದಿರಲಿ ಎಂದು ಫ್ಯಾನ್ಸ್ ಕಾಮೆಂಟ್ ಮಾಡಿದ್ದಾರೆ. ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ.
View this post on Instagram
ಇನ್ನೂ ನಟ ದರ್ಶನ್ ಸದ್ಯ ರಾಜಸ್ಥಾನದಲ್ಲಿ ‘ಡೆವಿಲ್’ (Devil) ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರವನ್ನು ಮಿಲನಾ ಪ್ರಕಾಶ್ ನಿರ್ದೇಶನ ಮಾಡುತ್ತಿದ್ದಾರೆ.