ಜೈಲು ಪಾಲಾಗಿರುವ ದರ್ಶನ್ (Darshan) ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮಿ (Vijaylakshmi) ಶಕ್ತಿ ದೇವತೆಯ ಮೊರೆ ಹೋಗಿದ್ದಾರೆ. ಇದೀಗ ಅಸ್ಸಾಂನ ಗುವ್ಹಾಟಿಯಲ್ಲಿರುವ ಕಾಮಾಕ್ಯ ದೇಗುಲಕ್ಕೆ ದರ್ಶನ್ ಪತ್ನಿ ಭೇಟಿ ನೀಡಿದ್ದಾರೆ. ಇದನ್ನೂ ಓದಿ:ರಾಗಿಣಿ, ಶುಭಾಗೂ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್: ‘ಚಾರ್ಜ್‌ಶೀಟ್’ನಲ್ಲಿ ಬಯಲು
ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮಿ ಕಾನೂನು ಹೋರಾಟ ಮುಂದುವರೆಸಿದ್ದಾರೆ. ಅದಕ್ಕೆ ಸಿದ್ಧತೆ ಮಾಡಿಕೊಂಡಿರೋ ಬೆನ್ನಲ್ಲೇ ದರ್ಶನ್ ಪತ್ನಿ 51 ಶಕ್ತಿಪೀಠಗಳಲ್ಲಿ ಒಂದಾಗಿರುವ ಕಾಮಾಕ್ಯ ದೇವಿಯ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಭೇಟಿ ನೀಡಿರುವ ಫೋಟೋ ಶೇರ್ ಮಾಡಿ Prayer is Powerfull ಎಂದು ವಿಜಯಲಕ್ಷ್ಮಿ ಅಡಿಬರಹ ನೀಡಿದ್ದಾರೆ. ಆದರೆ ಎಲ್ಲೂ ದೇವಸ್ಥಾನ ಹೆಸರನ್ನು ಅವರು ಉಲ್ಲೇಖಿಸಿಲ್ಲ.
ಅಂದಹಾಗೆ, ಕಳೆದ ವಾರ ಬಳ್ಳಾರಿ ಜೈಲಿಗೆ ತೆರಳಿ ದರ್ಶನ್‌ರನ್ನು ಪತ್ನಿ ಭೇಟಿಯಾಗಿದ್ದರು. ಕಾನೂನು ಸಮರದ ಕುರಿತು ಪತಿ ಜೊತೆ ಚರ್ಚಿಸಿ ಬಂದಿದ್ದರು.