ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ನಟನೆಯ ಬ್ಯಾಡ್ ಮ್ಯಾನರ್ಸ್ ಚಿತ್ರದ ಟೀಸರ್ (Teaser) ಇದೇ ನವೆಂಬರ್ 12ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಖ್ಯಾತ ನಟ ದರ್ಶನ್ (Darshan) ಮತ್ತು ನಟಿ, ಸಂಸದೆ ಸುಮಲತಾ ಅಂಬರೀಶ್ (Sumalatha) ಅವರು ಟೀಸರ್ ಅನ್ನು ಬಿಡುಗಡೆ ಮಾಡಲಿದ್ದಾರೆ. ಇದು ಸೂರಿ ಸಿನಿಮಾವಾಗಿದ್ದರಿಂದ ಟೀಸರ್ ಬಗ್ಗೆ ಕುತೂಹಲ ಮೂಡಿದೆ.
ಭಾವ ತುಂಬಿದ ಹಾಡುಗಳ ಮೂಲಕ ಫೇಮಸ್ ಆಗಿದ್ದ ಜಯಂತ್ ಕಾಯ್ಕಿಣಿ, ಇದೀಗ ಅಭಿಷೇಕ್ ಅಂಬರೀಶ್ (Abhishek Ambarish) ನಟನೆಯ ‘ಬ್ಯಾಡ್ ಮ್ಯಾನರ್ಸ್’ (Bad Manners) ಸಿನಿಮಾಗಾಗಿ ಮಾಸ್ ಗೀತೆಯೊಂದನ್ನು ಬರೆದಿದ್ದಾರೆ. ‘ಓಗ.. ಓಗ..’ ಎಂದು ಶುರುವಾಗುವ ಗೀತೆಯಲ್ಲಿ ಕೇಳದೇ ಇರುವಂಥ ಹಲವು ಪದಗಳನ್ನು ಬಳಸಲಾಗಿದೆ. ಅವೆಲ್ಲವೂ ಗ್ರಿಬಿಶ್ ಪದಗಳಾಗಿವೆಯಂತೆ. ಹೀಗಾಗಿ ಹಾಡು ಹೊಸ ರೀತಿಯಲ್ಲೇ ಕೇಳಿಸುತ್ತದೆ.
ಚರಣ್ ರಾಜ್ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಹಾಡಿಗೆ ಜಯಂತ್ ಕಾಯ್ಕಿಣಿ (Jayant Kaykini) ಸಾಹಿತ್ಯ ಬರೆದಿದ್ದರೆ, ಕಪಿಲ್ ಕಪಿಲನ್ ಹಾಡಿದ್ದಾರೆ. ಅಭಿಷೇಕ್ ಅಂಬರೀಶ್ ಸಖತ್ತಾಗಿಯೇ ಗೀತೆಗೆ ಸ್ಟೆಪ್ ಹಾಕಿದ್ದಾರೆ. ಸೂರಿ (Suri) ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಇದೇ ಮೊದಲ ಬಾರಿಗೆ ಅಭಿಷೇಕ್ ಮತ್ತು ಸೂರಿ ಈ ಸಿನಿಮಾದ ಮೂಲಕ ಒಂದಾಗಿದ್ದಾರೆ.
ಈ ಹಿಂದೆ ಯುಗಾದಿ ದಿನದಂದು ಪೆಪ್ಪಿ ಸಾಂಗ್‌ಗೆ ರಿಲೀಸ್ ಆಗಿತ್ತು. ಆ ಹಾಡಿಗೆ ಧನಂಜಯ್ ರಾಜನ್ ಬೊಂಬಾಟ್ ಲಿರಿಕ್ಸ್ ಬರೆದಿದ್ದರು. ಬಾಲಿವುಡ್ ಖ್ಯಾತ ಗಾಯಕಿ ಉಷಾ ಉತ್ತುಪ್ ಹಾಗೂ ಆಕಾಶ್ ಜಾಕೋಬ್ ವಾಯ್ಸ್‌ನಲ್ಲಿ ಸಾಂಗ್ ಸಖತ್ ಮಜವಾಗಿತ್ತು. ಚಿತ್ರದಲ್ಲಿ ಅಭಿ ಪಾತ್ರ ಪರಿಚಯಿಸುವ ಸಾಂಗ್ ಇದಾಗಿದೆ.
ಅಭಿಷೇಕ್- ರುದ್ರ ಎರಡನ್ನು ಸೇರಿಸಿ ಹಾಡಿನಲ್ಲಿ ರುದ್ರಾಭಿಷೇಕ ನಡೆಸಲಾಗಿದೆ. ಕೊಂಚ ಹಿಂದಿ, ಇಂಗ್ಲೀಷ್ ಪದಗಳನ್ನು ಹೆಚ್ಚೇ ಸೇರಿಸಿ ಸಾಲುಗಳನ್ನು ಪೋಣಿಸಲಾಗಿದೆ. `ಬ್ಯಾಡ್ ಮ್ಯಾನರ್ಸ್’ (Bad Manners) ಟೈಟಲ್ ಸಾಂಗ್‌ಗೆ ಧನಂಜಯ್ ಮಾಸ್ಟರ್ ಕೊರಿಯೋಗ್ರಫಿ ಮಾಡಿದ್ದಾರೆ. ಅಭಿಷೇಕ್ ಸಿಕ್ಕಾಪಟ್ಟೆ ಡ್ಯಾನ್ಸ್ ಪ್ರಾಕ್ಟೀಸ್ ಮಾಡಿ ಬಿಂದಾಸ್ ಸ್ಟೆಪ್ಸ್ ಹಾಕಿದ್ದಾರೆ. ಸಿಕ್ಕಾಪಟ್ಟೆ ಕಲರ್‌ಫುಲ್ ಆಗಿ ಸಾಂಗ್ ಶೂಟ್ ಮಾಡಿದ್ದಾರೆ.