ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಜೈಲೂಟ ಸೇವಿಸುತ್ತಿರುವ ನಟ ದರ್ಶನ್ (Darshan) ಮತ್ತೆ ಮೆನಯೂಟ ಕೋರಿ ಜೈಲಾಧಿಕಾರಿಗಳು ಹಾಗೂ ಮ್ಯಾಜಿಸ್ಟ್ರೇಟ್‌ಗೆ ಮೂರು ಪತ್ರಗಳನ್ನ ಬರೆದಿದ್ದಾರೆ. ಸ್ವತಃ ಕೈ ಬರಹದ ಮೂಲಕ ಜೈಲಾಧಿಕಾರಿಗೆ, ಜೈಲಿನ ಮಹಾನಿರ್ದೇಶಕರಿಗೆ, ವೈದ್ಯಾಧಿಕಾರಿಗೆ, ಮ್ಯಾಜಿಸ್ಟ್ರೇಟ್‌ಗೆ ಬರೆದ ಪತ್ರ ʻಪಬ್ಲಿಕ ಟಿವಿʼಗೆ ಲಭ್ಯವಾಗಿದೆ.
ನನಗೆ ಮೂಳೆ ಶಸ್ತ್ರಚಿಕಿತ್ಸೆಯಾಗಿದೆ, ಪ್ರೋಟಿನ್ ಅವಶ್ಯಕತೆ ಇದೆ. ಕಾರಾಗೃಹಕ್ಕೆ ದಾಖಲಾದ ದಿನದಿಂದ ಜೈಲೂಟ ಸೇವೆನೆ ಮಾಡುತ್ತಿದ್ದೇನೆ. ನನ್ನ ಆರೋಗ್ಯ, ದೇಹದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಮನೆ ಊಟ ನೀಡುವಂತೆ ಪತ್ರದ ಮೂಲಕ ದರ್ಶನ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬಿಹಾರದಲ್ಲಿ ಮೀಸಲಾತಿ ಹೆಚ್ಚಿಸಿದ್ದ ನಿತೀಶ್‌ಗೆ ಹಿನ್ನಡೆ – ಹೈಕೋರ್ಟ್ ಆದೇಶಕ್ಕೆ ತಡೆ ನೀಡದ ಸುಪ್ರೀಂ
ಇತ್ತೀಚೆಗಷ್ಟೇ ಮನೆಯೂಟ ಕೋರಿ ಹೈಕೋರ್ಟ್‌ನಲ್ಲಿ (High Court) ಸಲ್ಲಿಸಿದ್ದ ಸಲ್ಲಿಸಿದ್ದ ಮೆಮೋ ಅರ್ಜಿಯನ್ನು ವಿಚಾರಣೆಗೆ ಬರುತ್ತಿದ್ದಂತೆ ದರ್ಶನ್ ಪರ ವಕೀಲರು ಹಿಂದಕ್ಕೆ ಪಡೆದಿದ್ದರು. ತಾಂತ್ರಿಕ ಕಾರಣ ನೀಡಿ ದರ್ಶನ್ ಪರ ವಕೀಲರು ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದರು. ಅರ್ಜಿ ವಾಪಸ್ ಪಡೆದ ಕಾರಣ ದರ್ಶನ್ ಜೈಲೂಟವನ್ನೇ ಸೇವಿಸಬೇಕಿದೆ.
ಇದಕ್ಕೂ ಮುನ್ನ ಮನೆಯೂಟ (Home Food), ಹಾಸಿಗೆ, ಪುಸ್ತಕಗಳಿಗೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ (Maagsitrate Court) ಜುಲೈ 25 ರಂದು ವಜಾಗೊಳಿಸಿತ್ತು. ಅರ್ಜಿ ವಜಾಗೊಂಡ ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲರು ಮೇಲ್ಮನವಿ ಸಲ್ಲಿಸಿದ್ದರು. ಇದನ್ನೂ ಓದಿ: Wayanad Landslides: 93 ಮೃತದೇಹ ಸಿಕ್ಕಿವೆ, ಸಾವಿನ ಸಂಖ್ಯೆ ಹೆಚ್ಚಾಗಬಹುದು – ಸಿಎಂ ಪಿಣರಾಯಿ ಆತಂಕ
ಕಾನೂನಿಗೆ ಎಲ್ಲರೂ ಒಂದೇ, ಕೈದಿಗಳಲ್ಲಿ ಯಾವುದೇ ಭೇದವಿಲ್ಲ. ಆಸ್ತಿ ಅಂತಸ್ತು ನೋಡಿ ಜೈಲಿನಲ್ಲಿ ಸೌಕರ್ಯ ನೀಡಲು ಸಾಧ್ಯವಿಲ್ಲ. ಅಗತ್ಯವಿದ್ದಾಗ ಮಾತ್ರ ವಿಚಾರಣಾಧೀನ ಕೈದಿಗಳಿಗೆ ಮನೆಯೂಟ ನೀಡಬಹುದು. ಆದರೆ ಕೊಲೆ ಪ್ರಕರಣದ ಆರೋಪಿಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಹೇಳಿ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನೂ ಓದಿ: Wayanad Landslides: ತಮಿಳುನಾಡಿನಿಂದ 5 ಕೋಟಿ ನೆರವು – ಅಗತ್ಯ ಸಹಕಾರ ನೀಡೋದಾಗಿ ಕರ್ನಾಟಕ ಸಿಎಂ ಭರವಸೆ